ಸಂಚಾರ ಸಮಸ್ಯೆ ಆಗದಂತೆ ಕ್ರಮವಹಿಸಿ: ಜಿಲ್ಲಾಧಿಕಾರಿ

Team Udayavani, Nov 17, 2019, 4:07 PM IST

tk-tdy-1

ತುಮಕೂರು: ದೇವರಾಯನದುರ್ಗ ಗ್ರಾಮದಲ್ಲಿ ಫೆ.13, 14 ಮತ್ತು 15ರಂದು ನಡೆಯುವ ಶ್ರೀ ಯೋಗಲಕ್ಷ್ಮೀ ನರಸಿಂಹಸ್ವಾಮಿ ಕುಂಭಾಭಿಷೇಕಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಮುಂಜಾಗ್ರತಾ ಕ್ರಮವಾಗಿ ಸಂಚಾರ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ಸೂಚಿಸಿದರು.

ನಗರ ಸಮೀಪದ ದೇವರಾಯನದುರ್ಗದ ಯಾತ್ರಿ ನಿವಾಸದಲ್ಲಿ ಶನಿವಾರ, 12 ವರ್ಷಗಳಿಗೊಮ್ಮೆ ನಡೆಯುವ ಶ್ರೀ ಯೋಗಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾ ಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಯಲ್ಲಿ ಮಾತನಾಡಿದರು.

ಮುಚ್ಚಳಿಕೆ ಬೇಡ: ಕುಂಭಾಭಿಷೇಕಕ್ಕೂ ಮುನ್ನ ರಥಬೀದಿ, ಇತರೆ ರಸ್ತೆಗಳನ್ನು ದುರಸ್ತಿಪಡಿಸಬೇಕು. ಈ ಹಿಂದೆ ಕುಂಭಾಭಿಷೇಕ ಕಾರ್ಯಗಳನ್ನು ನಿರ್ವಹಿಸುತ್ತಿದ್ದ ರೀತಿಯಲ್ಲಿಯೇ ಈ ಬಾರಿಯೂ ನೆರ ವೇರಿಸಬೇಕು. ಅದರಲ್ಲಿ ಯಾವುದೇ ಬದಲಾವಣೆ ಬೇಡ. ಶ್ರೀ ಯೋಗಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿ ಷೇಕ ನೆರವೇರಿಸಲು ದಾನಿಗಳಿಂದ ನಿರ್ವಹಿಸುವ ಕಾಮಗಾರಿಗಳಿಗೆ ಹೊಸ ಮುಚ್ಚಳಿಕೆ ಪತ್ರ ಬೇಡ. ಈ ಹಿಂದೆ ದಾನಿಗಳು ಹೇಗೆ ಮಾಡುತ್ತಿದ್ದರೋ ಅಥವಾ ಯಾರಿಗೆ ದೇವರಕಾರ್ಯ ಮಾಡಬೇಕೆನ್ನುವ ಆಸಕ್ತಿ ಇರುತ್ತದೋ ಅವರಿಗೆ ಅವಕಾಶ ನೀಡಬೇಕೆಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಸವಿತಾ ಅವರಿಗೆ ನಿರ್ದೇಶನ ನೀಡಿದರು.

ಶ್ರೀ ಭೋಗನರಸಿಂಹಸ್ವಾಮಿ ದೇವಾಲಯದ ಪಕ್ಕದ ಪ್ರಸಾದ ನಿಲಯವನ್ನು ಕಲ್ಯಾಣ ಮಂಟಪವನ್ನಾಗಿ ನಿರ್ಮಿಸುವ ಕಾಮಗಾರಿ ಕೈಗೆತ್ತಿಕೊಂಡಿರುವ ಕುರಿತು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಸವಿತಾ ಪ್ರಸ್ತಾಪಿಸಿದಾಗ, ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್‌, ಕುಂಭಾಭಿಷೇಕದ ಸಮಯಕ್ಕೆ ಕಾಮಗಾರಿ ಪೂರ್ಣಗೊಳ್ಳದೆ ಇದ್ದರೆ ಪ್ರಸಾದ ನಿಲಯವನ್ನೇ ವ್ಯವಸ್ಥಿತವಾಗಿ ಸರಿಪಡಿಸಬೇಕೆಂದರು. ದೇವಾಲಯಕ್ಕೆ ಸೇರಿದ ಕಾಟೇಜ್‌ನಲ್ಲಿ ನಡೆಸ ಲಾಗುತ್ತಿರುವ ಅಂಗನವಾಡಿ ಹಿಂಭಾಗ ಸ್ನಾನದ ಗೃಹ ಮತ್ತು ಶೌಚಾಲಯ ನಿರ್ಮಿಸಲು ಅನುಮತಿ ನೀಡಬೇಕೆಂದು ಕಾಟೇಜ್‌ನ ದಾನಿ ಮನವಿ ಮಾಡಿದಾಗ, ಅಂಗನವಾಡಿಗೆ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮವಹಿಸಿ ಎಂದು ಹೇಳಿದರು.

ಅನುಮತಿ ಪಡೆದ ವಿಚಾರಗಳು: ಶ್ರೀ ಯೋಗ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ರಾಜ ಗೋಪುರ ಕಲಾಕರ್ಷಣೆಯನ್ನು ನ.22ರಂದು ನಡೆಸುವ, ಶ್ರೀ ಕ್ಷೇತ್ರದ ಬ್ರಹ್ಮರಥೋತ್ಸವ ರಥದ ನಿಲುಗಡೆ ಸ್ಥಳವನ್ನು ತಗ್ಗಿಸಿ ಸಮತಟ್ಟು ಮಾಡಿಸಿ ಸುಭದ್ರತೆ ಮಾಡುವ, ಶ್ರೀ ಭೋಗನರಸಿಂಹಸ್ವಾಮಿ ದೇವಾಲಯದ ಪ್ರಾಕಾರದಲ್ಲಿ ಗ್ರಿಲ್‌ ಅಳವಡಿಸುವ, ದೇವಾಲಯದಲ್ಲಿರುವ ಅನುಪಯುಕ್ತ ಸಾಮಗ್ರಿವಿಲೇವಾರಿ ಮಾಡುವ, ನೂತನ ನಿತ್ಯ ಅನ್ನ ಸಂತರ್ಪಣಾ ಭವನದ ಮೇಲ್ಭಾಗದ ಕೊಠಡಿಗಳಿಗೆ ಪೀಠೊಪಕರಣ, ಇತರೆ ಅವಶ್ಯಕ ವಸ್ತುಗಳನ್ನು ಖರೀದಿ ಸೇರಿದಂತೆ ಹಲವಾರು ವಿಚಾರಗಳನ್ನು ಜಿಲ್ಲಾಧಿಕಾರಿಯಿಂದ ಅನುಮತಿ ಪಡೆಯಲಾಯಿತು. ಜಿಲ್ಲಾ ಉಪವಿಭಾಗಾಧಿಕಾರಿ ಸಿ.ಎಲ್‌. ಶಿವಕುಮಾರ್‌, ಶ್ರೀ ಯೋಗಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ವ್ಯವಸ್ಥಾಪಕ ಎನ್‌.ನರಸಿಂ ಹಭಟ್ಟರ್‌, ಶ್ರೀ ಭೋಗನರಸಿಂಹಸ್ವಾಮಿ ದೇವಾಲ ಯದ ವೆಂಕಟರಾಜಭಟ್ಟರ್‌ ಇದ್ದರು.

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.