ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ದಿಲ್ಲಿಗೆ ಭೇಟಿ ನೀಡುವ ಸಾಧ್ಯತೆ
Team Udayavani, Nov 17, 2019, 6:23 PM IST
ಮುಂಬಯಿ: ಮಹಾರಾಷ್ಟ್ರದಲ್ಲಿ ರಾಜಕೀಯ ಕೋಲಾಹಲದ ಮಧ್ಯೆ ಶರದ್ ಪವಾರ್ ಅವರು ಸೋಮವಾರ ದಿಲ್ಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿ¨ªಾರೆ. ಇದಕ್ಕೂ ಮೊದಲು ಶರದ್ ಪವಾರ್ ಅವರು ಸೋನಿಯಾ ಗಾಂಧಿ ಅವರನ್ನು ರವಿವಾರ ಭೇಟಿ ಆಗುವವರಿದ್ದರು. ಆದರೆ ಎನ್‌ಸಿಪಿಯ ಸಭೆ ರವಿವಾರ ಆಯೋಜಿಸಿದ ಕಾರಣದಿಂದ ದಿಲ್ಲಿಗೆ ಸೋಮವಾರ ಭೇಟಿ ನೀಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್-ಎನ್‌ಸಿಪಿ ಮೈತ್ರಿಯು ನವೆಂಬರ್ 22 ರಂದು ರಾಜ್ಯದ 27 ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಚುನಾವಣೆಗಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಚರ್ಚೆ ನಡೆಯಲಿದೆ.
ರಾಜ್ಯದಲ್ಲಿ 5 ವರ್ಷಗಳ ಕಾಲ ಶಾಶ್ವತ ಸರಕಾರ ರಚನೆಯಾಗುತ್ತದೆ – ಪವಾರ್
ನಾಗಪುರರದ ಕಾಂಗ್ರೆಸ್ ಶಾಸಕ ನಿತಿನ್ ರಾವುತ್ ಅವರ ನಿವಾಸಕ್ಕೆ ಆಗಮಿಸಿದ ಪವಾರ್, ಅವರು, ಮಧ್ಯಂತರ ಚುನಾವಣೆಯ ಸಾಧ್ಯತೆಯನ್ನು ತಳ್ಳಿಹಾಕಿದರು. ಸರಕಾರವಾಗಲು ಸ್ವಲ್ಪ ವಿಳಂಬವಾಗಿದ್ದರೂ, 5 ವರ್ಷಗಳ ಕಾಲ ರಾಜ್ಯದಲ್ಲಿ ಶಾಶ್ವತ ಸರಕಾರ ರಚನೆಯಾಗುತ್ತದೆ ಎಂದು ಅವರು ಹೇಳಿದರು, ಮಹಾರಾಷ್ಟ್ರದಲ್ಲಿ ಸರಕಾರ ರಚನೆಯ ಕುರಿತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದಿಲಿಯಲ್ಲಿ ಸಭೆ ನಡೆಸಬೇಕಾಗಿತ್ತು. ಆದರೆ ಪವಾರ್ ಅವರು ಸೋನಿಯಾ ಅವರನ್ನು ಭೇಟಿ ಮಾಡಲು ನವೆಂಬರ್ 18 ರಂದು ದಿಲ್ಲಿ ತೆರಳಲಿದ್ದಾರೆ ಎನ್ನಲಾಗಿದೆ. ಮೂರು ಪಕ್ಷಗಳ ನಡುವೆ ಸರಕಾರ ರಚನೆಯಾಗುವ ಮೊದಲೇ, ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಕರಡನ್ನು ಇನ್ನೂ ಮೊಹರು ಮಾಡಬೇಕಾಗಿದೆ.
ಸಾಮಾನ್ಯ ಕನಿಷ್ಠ ಹಂಚಿದ ಕಾರ್ಯಕ್ರಮದ ಒಪ್ಪಂದ
ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ನಡುವೆ ಕನಿಷ್ಠ ಹಂಚಿಕೆಯ ಕಾರ್ಯಕ್ರಮವನ್ನು ಒಪ್ಪಲಾಗಿದೆ. ರೈತರ ಸಾಲ ಮನ್ನಾ, ಬೆಳೆ ವಿಮಾ ಯೋಜನೆಯ ಪರಿಶೀಲನೆ, ಉದ್ಯೋಗ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಬಿ.ಆರ್.ಅಂಬೇಡ್ಕರ್ ಸ್ಮಾರಕ ಈ ಕಾರ್ಯಕ್ರಮದಲ್ಲಿ ಸೇರಿವೆ. ಅದೇ ಸಮಯದಲ್ಲಿ, ಶಿವಸೇನೆ ಸಂಪೂರ್ಣ ಅವಧಿಗೆ ಮುಖ್ಯಮಂತ್ರಿ ಹು¨ªೆಯನ್ನು ಪಡೆಯಲಿದೆ. ಎನ್‌ಸಿಪಿ ಮತ್ತು ಕಾಂಗ್ರೆಸ್ ಉಪ ಮುಖ್ಯಮಂತ್ರಿ ಸ್ಥಾನಗಳನ್ನು ಹಂಚಿಕೊಳ್ಳಲಿದೆ. ಇದಲ್ಲದೆ, ಶಿವಸೇನೆಗೆ 14 ಸಚಿವ ಸ್ಥಾನಗಳು, ಎನ್‌ಸಿಪಿಗೆ 14 ಮತ್ತು ಕಾಂಗ್ರೆಸ್ 12 ಸ್ಥಾನಗಳು ದೊರೆಯಲಿವೆ.
ಇದಕ್ಕೂ ಮುನ್ನ ಶನಿವಾರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ರಾಜ್ಯದ ಕಾಂಗ್ರೆಸ್ ಎನ್‌ಸಿಪಿ ನಾಯಕರು ಭೇಟಿ ನೀಡಿದರು. ಗಮನಾರ್ಹ ವಿಷಯವೆಂದರೆ ಎನ್‌ಸಿಪಿ ವಕ್ತಾರ ನವಾಬ್ ಮಲಿಕ್ ಅವರು, ನಾವು ಸರಕಾರ ರಚಿಸಲು ಶಿವಸೇನೆಯ ಜತೆ ಮಾತುಕತೆ ನಡೆಸುತ್ತಿದ್ದೇವೆ. ಶಿವಸೇನೆ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ಪ್ರಸ್ತಾವವಿಲ್ಲ ಎಂದು ನವಾಬ್ ಮಲಿಕ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್‌ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.