ಸಹಕಾರ ಸಂಘಗಳಿಂದ ರೈತರ ಜೀವನ ಹಸನು


Team Udayavani, Nov 18, 2019, 3:00 AM IST

sahakara-sam

ಚನ್ನರಾಯಪಟ್ಟಣ: ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ರೈತರ ಜೀವನೋಪಾಯಕ್ಕೆ ಅನುಕೂಲವಾಗಿದೆ ಎಂದು ಶಾಸಕ ಸಿ.ಎನ್‌.ಬಾಲಕೃಷ್ಣ ತಿಳಿಸಿದರು.

ತಾಲೂಕಿನ ಕಾರೇಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಹಾಗೂ ಹಾಸನ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಿಂದ ಆಯೋಜಿಸಿದ್ದ 66ನೇ ಅಖೀಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾಲೂಕಿನಲ್ಲಿ ರೈತರಿಗೆ ಕೃಷಿ ಪತ್ತಿನ ಸಹಕಾರ ಸಂಘಗಳಿಂದ 184 ಕೋಟಿ ರೂ. ಸಾಲ ನೀಡಿದ್ದು ಇದರಿಂದ 37 ಸಾವಿರ ರೈತರ ಬೆಳೆಸಾಲ 170 ಕೋಟಿ ರೂ. ಸಾಲ ಮನ್ನವಾಗಿದೆ ಎಂದರು.

ನಿತ್ಯವೂ 90 ಸಾವಿರ ಲೀ. ಹಾಲು ಉತ್ಪಾದನೆ: ತಾಲೂಕಿನಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ನಿತ್ಯವೂ 90 ಸಾವಿರ ಲೀ. ಹಾಲು ಉತ್ಪದನೆಯಾಗುತ್ತಿದ್ದು ಮಾಸಿಕ 20 ಕೋಟಿ ರೂ. ಹಣ ರೈತರಿಗೆ ದೊರೆಯುತ್ತಿದೆ. ಬರಗಾಲದಲ್ಲಿಯೂ ರೈತರು ಕುಟುಂಬ ನಿರ್ವಹಣೆಗೆ ಹೈನುಗಾರಿಕೆ ಸಹಕಾರಿಯಾಗಿದೆ ಒಂದು ವೇಳೆ ಕೇಂದ್ರ ಸರ್ಕಾರ ಆರ್‌ಸಿಇಪಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ್ದರೆ ರೈತರು ಬೀದಿಪಾಲಾಗುತ್ತಿದ್ದರು ಎಂದು ಹೇಳಿದರು.

ತೆಂಗು ಬೆಳೆಗಾರರಿಗೆ ನೆರವು: ರಾಜ್ಯದಲ್ಲಿ ಮೈತ್ರಿ ಸರ್ಕಾರದ ವೇಳೆ 30 ಸಾವಿರ ರೈತರಿಗೆ ತೆಂಗು ಬೆಳೆ ಪರಿಹಾರವನ್ನು ಪಕ್ಷಾತೀತವಾಗಿ ನೀಡಲಾಗಿದೆ. ಸಕ್ಕರೆ ಕಾರ್ಖಾನೆ ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಅಭಿವೃದ್ಧಿಗೂ ಸೂಕ್ತ ಕ್ರಮ ಕೈಗೊಂಡಿದ್ದೇವೆ, ರೈತರು ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ ನಿಮ್ಮ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ಕೊಡಿಸಲು ಮುಂದಾಗಬೇಕು, ಪ್ರಸಕ್ತ ವರ್ಷ ಉತ್ತಮವಾಗಿ ಮಳೆಯಾಗಿದೆ ನೀರನ್ನು ಮಿತವಾಗಿ ಬಳಸುವ ಮೂಲಕ ಕೃಷಿ ಮಾಡಬೇಕು ಎಂದು ಸಲಹೆ ನೀಡಿದರು.

ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಬೇಡ: ಸಹಕಾರ ರಂಗ ಪ್ರಬಲವಾದರೆ ರೈತರು ಅರ್ಥಿಕವಾಗಿ ಸದೃಢರಾಗುತ್ತಾರೆ ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು. ಹೈನುಗಾರಿಕೆ ಹಾಗೂ ಕೃಷಿ ಪತ್ತಿನ ಸಹಕಾರದಲ್ಲಿನ ನಿರ್ದೇಶಕರು ಹಾಗೂ ಸಿಬ್ಬಂದಿ ರೈತರನ್ನು ಸಹೋದರತ್ವದಿಂದ ಕಾಣಬೇಕು. ಎಲ್ಲಾ ರೈತರು ಈ ದೇಶಕ್ಕೆ ಅನ್ನ ನೀಡಲು ಶ್ರಮಿಸುತ್ತಾರೆ ಅವರಲ್ಲಿ ರಾಜಕೀಯ ಮಾಡುವುದು ತರವಲ್ಲ ಎಂದು ಹೇಳಿದರು.

ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಶೇಷಾದ್ರಿ, ಉಪಾಧ್ಯಕ್ಷ ರಾಜಪ್ಪಗೌಡ, ನಿರ್ದೇಶಕ ಎನ್‌.ರಾಜಣ್ಣ, ಪುಟ್ಟಸ್ವಾಮಿಗೌಡ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭಾರತಿ, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಸವೇಗೌಡ, ಮೇಲ್ವಿಚಾರಕ ಅಭಿಲಾಷ್‌, ದಯಾನಂದ್‌, ಎಪಿಎಂಸಿ ಮಾಜಿ ಅಧ್ಯಕ್ಷರಾದ ಬಿ.ಆರ್‌.ದೊರೆಸ್ವಾಮಿ, ಮಂಜುನಾಥ್‌, ಮುಖಂಡರಾದ ರಾಮಚಂದ್ರು, ಟಿ.ಆರ್‌.ವೆಂಕಟೇಶ್‌, ಸತೀಶ್‌, ಕಾರ್ಯ ನಿರ್ವಹಣಾಧಿಕಾರಿ ರಾಜೇಶ್‌, ಶರ್ಮ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.