ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಹೆಗಡೆ, ತೇಜಸ್ವಿಗಿಲ್ಲ ಸ್ಥಾನ
Team Udayavani, Nov 18, 2019, 3:04 AM IST
ಬೆಂಗಳೂರು: ಹದಿನೈದು ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಆದರೆ, ಕೇಂದ್ರದ ಮಾಜಿ ಸಚಿವ, ಪ್ರಖರ ಹಿಂದುತ್ವವಾದಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ದೂರ ಇಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಡಿ.ವಿ.ಸದಾನಂದಗೌಡ, ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಉಸ್ತುವಾರಿ ಪಿ. ಮುರಳಿಧರ ರಾವ್,
ಸಚಿವರಾದ ಜಗದೀಶ ಶೆಟ್ಟರ್, ಈಶ್ವರಪ್ಪ, ಸಿ.ಟಿ. ರವಿ, ಆರ್. ಅಶೋಕ್, ಶ್ರೀರಾಮುಲು,. ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಶಶಿಕಲಾ ಜೊಲ್ಲೆ, ಸಿ.ಸಿ. ಪಾಟೀಲ್, ಕೋಟ ಶ್ರೀನಿವಾಸ ಪೂಜಾರಿ, ಜೆ.ಸಿ. ಮಾಧುಸ್ವಾಮಿ, ಪ್ರಭು ಚೌಹಾಣ್, ಸಂಸದರಾದ ಪ್ರತಾಪ ಸಿಂಹ, ರಮೇಶ್ ಜಿಗಜಿಣಗಿ, ಪಿ.ಸಿ. ಮೋಹನ್, ಪ್ರಭಾಕರ ಕೋರೆ, ಶೋಭಾ ಕರಂದ್ಲಾಜೆ ಅವರಿಗೆ ಅವಕಾಶ ಕಲ್ಪಿಸಲಾಗಿದೆ.
ಉಳಿದಂತೆ ಮಾಜಿ ಸಚಿವ ಉಮೇಶ್ ಕತ್ತಿ, ಅರುಣ್ ಕುಮಾರ್, ಅರವಿಂದ ಲಿಂಬಾವಳಿ, ಎನ್.ರವಿಕುಮಾರ್, ಮಹೇಶ್ ಟೆಂಗಿನಕಾಯಿ, ನಿರ್ಮಲ ಕುಮಾರ್ ಸುರಾನ, ಚಲವಾದಿ ನಾರಾಯಣಸ್ವಾಮಿ, ಶೃತಿ, ತಾರಾ ಅನುರಾಧ, ರಾಜುಗೌಡ, ಭಾರತಿ ಶೆಟ್ಟಿ ಅವರನ್ನು ಸ್ಟಾರ್ ಪ್ರಚಾರಕರನ್ನಾಗಿ ಬಿಜೆಪಿ ನೇಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.