ಎಗ್ಗಿಲ್ಲದೇ ಸಾಗಿದೆ ಅಕ್ರಮ ಮರಳು ದಂಧೆ

Team Udayavani, Nov 18, 2019, 12:55 PM IST

gadaga-tdy-2

ಗದಗ: ಹಾಡಹಗಲೇ ನಂಬರ್‌ ಪ್ಲೇಟ್‌ ಇಲ್ಲದೇ ಮರಳು ತುಂಬಿರುವ ಟಿಪ್ಪರ್‌ಗಳಓಡಾಟ ಗದಗ-ಬೆಟಗೇರಿ ಅವಳಿನಗರದಲ್ಲಿ ಜೋರಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ ಅವರ ತವರು ಜಿಲ್ಲೆಯಲ್ಲೇ ಅಕ್ರಮ ಮರಳು ಸಾಗಾಟದ ವಾಸನೆ ಬಡಿಯುತ್ತಿದೆ.

ಇತ್ತೀಚಿನ ವರ್ಷಗಳಲ್ಲಿ ಮರಳು ಗಣಿಗಾರಿಕೆ ಹಾಗೂ ಸಾಗಾಟ ನಿಯಮಾವಳಿಗಳು ಕಠಿಣವಾಗಿದ್ದರಿಂದ ಮರಳಿಗೆ ಎಲ್ಲಿಲ್ಲದ ಬೇಡಿಕೆ, ಚಿನ್ನದ ಬೆಲೆ ಬಂದಿದೆ. ಮುಂಡರಗಿಯಿಂದ ಸಾಗಾಣಿಕೆಯಾಗುವ ಪ್ರತಿ ಟಿಪ್ಪರ್‌ ಮರಳಿಗೆ ಗದುಗಿನಲ್ಲಿ 25 ರಿಂದ 30 ಸಾವಿರ ರೂ. ದರವಿದ್ದರೆ, ಹುಬ್ಬಳ್ಳಿ- ಧಾರವಾಡದಲ್ಲಿ 30-35 ಸಾವಿರ ರೂ. ಬೆಲೆಗೆ ಮಾರಾಟವಾಗುತ್ತಿದೆ. ಹುಬ್ಬಳ್ಳಿ-ಧಾರವಾಡ ಅವಳಿನಗರಕ್ಕೆ ಪ್ರತಿನಿತ್ಯ 200 ಟಿಪ್ಪರ್‌ ಮರಳು ಅಗತ್ಯವಿದ್ದು, ಆ ಪೈಕಿ ಶೇ.75 ಮರಳು ಗದಗ ಜಿಲ್ಲೆಯಿಂದ ಪೂರೈಕೆಯಾಗುತ್ತದೆ.

ಟಿಪ್ಪರ್‌ಗಳ ಅಘೋಷಿತ ಮುಷ್ಕರ?: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸಿ.ಸಿ. ಪಾಟೀಲ ಅವರು ಗಣಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡಬಳಿಕ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಟದ ವಿರುದ್ಧ ಛಾಟಿ ಬೀಸುತ್ತಿದ್ದಾರೆ. ಇದರಿಂದ ಎಚ್ಚೆತ್ತುಕೊಂಡಿರುವ ಪೊಲೀಸ್‌ ಹಾಗೂ ಗಣಿ ಇಲಾಖೆ ಅಧಿಕಾರಿಗಳು ಓವರ್‌ಲೋಡ್‌(12 ಟನ್‌ಗಿಂತ ಹೆಚ್ಚು) ಸಾಗಿಸುವ ಮರಳು ಟಿಪ್ಪರ್‌ ಗಳ ವಿರುದ್ಧ ಕೇಸ್‌ ದಾಖಲಿಸುತ್ತಿದ್ದಾರೆ.

ಇದರಿಂದ ಆತಂಕಗೊಂಡಿರುವ ಟಿಪ್ಪರ್‌ ಚಾಲಕರು ಮರಳು ಸಾಗಿಸಲು ಹಿಂದೇಟು ಹಾಕುತ್ತಿದ್ದಾರೆ. ನಿಗದಿಯಂತೆ 12 ಟನ್‌ ಸಾಗಿಸಿದರೆ ಸರಕಾರದ ರಾಜಸ್ವ, ಚಾಲಕರ ವೇತನ, ಇಂಧನ ಹಾಗೂ ಇತರೆ ವೆಚ್ಚಗಳನ್ನು ಭರಿಸಲಾಗದು. ಹೀಗಾಗಿ 15 ಟನ್‌ ಹೆಚ್ಚಿಸಿ ಪಾಸ್‌ ವಿತರಿಸಬೇಕು ಎಂದು ಟಿಪ್ಪರ್‌ ಮಾಲೀಕರು ಪಟ್ಟು ಹಿಡಿದ್ದಾರೆ. ಅದಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸೊಪ್ಪು ಹಾಕಿಲ್ಲ ಎಂದು ತಿಳಿದು ಬಂದಿದೆ.

ಇದರ ಮಧ್ಯೆ ಕಳೆದ 15 ದಿನಗಳಿಂದ ಜಿಲ್ಲೆಯ ತುಂಗಭದ್ರಾ ನದಿ ಭಾಗದ ಬ್ಲಾಕ್‌ಗಳಿಂದ ಮರಳು ಸಾಗಾಟ ಬಹುತೇಕ ಸ್ಥಗಿತಗೊಳಿಸಲಾಗಿದೆ. ಪೂರೈಕೆ ಕಡಿಮೆಯಾಗಿದ್ದರಿಂದ ಸಹಜವಾಗಿಯೇ ಗದಗ ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಮರಳಿನ ಬೇಡಿಕೆ ಹೆಚ್ಚುತ್ತಿದೆ. ಇದರ ಲಾಭ ಪಡೆಯಲು ಯತ್ನಿಸುತ್ತಿರುವ ಕೆಲವರು ಅಡ್ಡದಾರಿ ತುಳಿಯುತ್ತಿದ್ದಾರೆ. ಇತ್ತೀಚೆಗೆ ಉಂಟಾದ ನೆರೆಯಿಂದಾಗಿ ತುಂಗಭದ್ರಾ,ಮಲಪ್ರಭಾ ಸೇರಿದಂತೆ ಹಳ್ಳಗಳ ಅಕ್ಕಪಕ್ಕದ ಮೀನುಗಳಿಗೆ ಮರಳು ಕೊಚ್ಚಿಕೊಂಡು ಬಂದಿರುವುದು ಅಕ್ರಮವಾಗಿ ಮರಳು ಸಾಗಿಸುವವರಿಗೆ ವರವಾಗಿದೆ ಎನ್ನಲಾಗಿದೆ.

ಅಕ್ರಮ ಮರೆಮಾಚುವ ತಂತ್ರ?: ಗದಗ-ಬೆಟಗೇರಿಅವಳಿನಗರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ನೋಂದಣಿ ಸಂಖ್ಯೆ ಇರದ ಮರಳು ಟಿಪ್ಪರ್‌ಗಳ ಓಡಾಟ ಹೆಚ್ಚಾಗಿದೆ. ಬೆಳಗ್ಗೆ 7ರಿಂದಲೇ ಇಂತಹ ವಾಹನಗಳು ಅಲ್ಲಲ್ಲಿ ಕಂಡುಬರುತ್ತಿವೆ. ಅದರಂತೆ ರವಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಬೆಟಗೇರಿಯ ಪಾಲಾ ಬದಾಮಿ ರಸ್ತೆ ಹಾಗೂ 11:30ರ ಸುಮಾರಿಗೆ ಇಲ್ಲಿನ ಭೂಮರೆಡ್ಡಿ ವೃತ್ತದ ಬಳಿ ಪ್ರತ್ಯೇಕ ಎರಡು ವಾಹನಗಳು ಕಂಡುಬಂದಿವೆ. ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯಬಾರದು. ಇದು ಇಲಾಖೆ ಸಚಿವನಾಗಿ ನನಗೂ ಶೋಭೆಯಲ್ಲ. ಆದರೆ, ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟವನ್ನು ನಿಯಂತ್ರಿಸುವಂತಹ ದಕ್ಷ ಅಧಿಕಾರಿಗಳು ಗಣಿ ಇಲಾಖೆಗೆ ಬೇಕಿದೆ ಎಂದು ಇತ್ತೀಚೆಗಷ್ಟೇ ಗಣಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ  ಸಚಿವ ಸಿ.ಸಿ. ಪಾಟೀಲ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.

ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ ನಂಬರ್‌ ಪ್ಲೇಟ್‌ ಕೂಡಾ ಇಲ್ಲ. ಇನ್ನೂ ಕೆಲವು ನಂಬರ್‌ ಪ್ಲೇಟ್‌ ಇದ್ದರೂ ಅದಕ್ಕೆ ನೋಂದಣಿ ಸಂಖ್ಯೆಯೇ ಇಲ್ಲದಂತಹ ಟಿಪ್ಪರ್‌ಗಳಲ್ಲಿ ಮರಳು ಸಾಗಾಟವಾಗುತ್ತಿದೆ. ಇದು ಸಾರ್ವಜನಿಕರಲ್ಲಿ ಸಹಜವಾಗಿಯೇ ಅಧಿ ಕಾರಿಗಳ ಬಗ್ಗೆ ಅನುಮಾನಕ್ಕೆಡೆ ಮಾಡಿಕೊಟ್ಟಿದೆ. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ.

ಅವಳಿನಗರದಲ್ಲಿ ನಂಬರ್‌ ಪ್ಲೇಟ್‌ ಹಾಗೂ ನೋಂದಣಿ ಸಂಖ್ಯೆ ಇಲ್ಲದೆ ಓಡಾಡುವ ಮರಳು ಲಾರಿಗಳ ಬಗ್ಗೆ ಗಮನಕ್ಕೆ ಬಂದಿದೆ. ರವಿವಾರ ಮಧ್ಯಾಹ್ನ ಭೂಮರೆಡ್ಡಿ ವೃತ್ತದಲ್ಲಿ ಒಂದು ಟಿಪ್ಪರ್‌ ವಶಕ್ಕೆ ಪಡೆದಿದ್ದು, ಶಹರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಂತಹ ಲಾರಿಗಳನ್ನು ಪತ್ತೆ ಮಾಡುವಂತೆ ಸಿಬ್ಬಂದಿಗೂ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಶ್ರೀನಾಥ ಜೋಶಿ, ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.