ಬಾಲಕಿಯರ ಬಿಸಿಎಂ ಹಾಸ್ಟೆಲ್‌ ನಿರುಪಯುಕ್ತ ?

ಪಟ್ಟಣದಿಂದ 3 ಕಿಮೀ ದೂರದಲ್ಲಿ ನಿರ್ಮಾಣವಿದ್ಯಾರ್ಥಿನಿಯರ ಸಂಚಾರಕ್ಕೂತೊಂದರೆ

Team Udayavani, Nov 18, 2019, 1:02 PM IST

18-November-10

„ಎಸ್‌.ರಾಜಶೇಖರ
ಮೊಳಕಾಲ್ಮೂರು:
ಪಟ್ಟಣದ ಹೊರ ವಲಯದಲ್ಲಿರುವ ಮೊರಾರ್ಜಿ ವಸತಿ ಶಾಲೆಯ ಬಳಿಯಲ್ಲಿ 2.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬಾಲಕಿಯರ ಬಿಸಿಎಂ ಹಾಸ್ಟೆಲ್‌ ಕಟ್ಟಡವು ವಿದ್ಯಾರ್ಥಿಗಳ ಬಳಕೆಗೆ ಬಾರದೆ ನಿರುಪಯುಕ್ತವಾಗಲಿದೆ.

ಪಟ್ಟಣದಿಂದ ಸುಮಾರು 3 ಕಿಮೀಗೂ ಹೆಚ್ಚಿನ ದೂರದಲ್ಲಿರುವ ನಿರ್ಮಾಣವಾಗುತ್ತಿರುವ ನೂತನ ಸರ್ಕಾರಿ ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರದ ಬಾಲಕಿಯರ ಕಾಲೇಜ್‌ ಹಾಸ್ಟೆಲ್‌ ಕಟ್ಟಡವು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಉಪಯೋಗಕ್ಕೆ ಬಾರದೆ ವ್ಯರ್ಥವಾಗುವ ಸಾಧ್ಯತೆ ಹೆಚ್ಚಾಗಿದೆ.

ತಾಲೂಕು ಕೇಂದ್ರ ಸ್ಥಾನವಾದ ಪಟ್ಟಣದಲ್ಲಿ ಮೆಟ್ರಿಕ್‌ ನಂತರದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ಪಪೂ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿವೆ. ಗ್ರಾಮೀಣ ಪ್ರದೇಶದ ಬಿಸಿಎಂನ ಕಾಲೇಜು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಯಾವುದೇ ವಿದ್ಯಾರ್ಥಿ ನಿಲಯಗಳ ಸೌಲಭ್ಯದಿಂದ ವಂಚಿತವಾಗಿದೆ.

ಇತ್ತೀಚಿನ ದಿನಗಳಲ್ಲಿ 3 ಕಿಮೀಗೂ ಹೆಚ್ಚಿನ ದೂರದಲ್ಲಿ ಬಿಸಿಎಂ ಇಲಾಖೆಯಿಂದ 2.75 ಕೋಟಿ ರೂ. ವೆಚ್ಚದಲ್ಲಿ ಬಾಲಕಿಯರ ಹಾಸ್ಟೆಲ್‌ ನಿರ್ಮಾಣ ಹಂತದಲ್ಲಿದೆ. ಈ ಹಾಸ್ಟೆಲ್‌ 3 ಕಿಮೀಗೂ ಹೆಚ್ಚಿನ ದೂರದಲ್ಲಿರುವುದರಿಂದ ಪಟ್ಟಣದ ಕಾಲೇಜುಗಳಿಗೆ ನಿತ್ಯವೂ ಬಾಲಕಿಯರು ಸಕಾಲಕ್ಕೆ ಹೋಗಲು ಕಷ್ಟಸಾಧ್ಯವಾಗಲಿದೆ.

ಪಟ್ಟಣದಿಂದ 3 ಕಿಮೀ ದೂರದಲ್ಲಿರುವ ಪಟ್ಟಣದ ಕಾಲೇಜುಗಳಿಗೆ ಹೋಗಲು ಪ್ರೌಢಾವಸ್ಥೆಯಲ್ಲಿರುವ ಬಾಲಕಿಯರಿಗೆ ಯಾವುದೇ ಉಚಿತ ವಾಹನದ ಸೌಲಭ್ಯವಿರುವುದಿಲ್ಲದಿರುವುದರಿಂದ ನಿತ್ಯ ಸಕಾಲಕ್ಕೆ ನಡೆದುಕೊಂಡು ಹೋಗಿ ಬರಲು ದುಸ್ಸಾಹಸವೇ ಸರಿ.

ನಿರ್ಮಾಣ ಹಂತದಲ್ಲಿರುವ ಬಾಲಕಿಯರ ಬಿಸಿಎಂನ ಕಾಲೇಜು ಹಾಸ್ಟೆಲ್‌ ಕಟ್ಟಡವು ಹತ್ತಿರದ ಮೊರಾರ್ಜಿ ವಸತಿ ಶಾಲೆಯ ಬಳಿಯಲ್ಲಿದ್ದರೂ ಯಾವುದೇ ರಕ್ಷಣೆಯಿಲ್ಲದೆ ಗುಡ್ಡಗಾಡು ಪ್ರದೇಶಕ್ಕೆ ಪ್ರೌಢಾವಸ್ಥೆಯಲ್ಲಿರುವ ಬಾಲಕಿಯರನ್ನು ಕಳುಹಿಸುವುದು ಅಪಾಯಕಾರಿಯಾಗಿದೆ.

ಈಗಾಗಲೇ ಬಾಲಕಿಯರ ಬಿ.ಸಿ.ಎಂ ಕಾಲೇಜು ಹಾಸ್ಟೆಲ್‌ ಹೆಚ್ಚಿನ ಜನಸಂದಣಿಯಲ್ಲಿರುವ ಪಟ್ಟಣದ ದಾಸರಹಟ್ಟಿಯಲ್ಲಿ ಖಾಸಗಿ ಕಟ್ಟಡದಲ್ಲಿರುವುದರಿಂದ ಯಾವುದೇ ಅನಾಹುತಗಳಾಗದಂತೆ ತಡೆಯಬಹುದಾಗಿದೆ. ಆದರೆ 3 ಕಿಮೀ ದೂರದಲ್ಲಿರುವ ಮೊರಾರ್ಜಿ ವಸತಿ ಶಾಲೆಯ ಬಳಿಯಲ್ಲಿ ನಿರ್ಮಾಣವಾಗಲಿರುವ ಬಾಲಕಿಯರ ಬಿಸಿಎಂನ ಕಾಲೇಜು ಹಾಸ್ಟೆಲ್‌ ನಿಂದ ಪಟ್ಟಣದಲ್ಲಿರುವ ಕಾಲೇಜುಗಳಿಗೆ ಹೆಣ್ಣು ಮಕ್ಕಳು ಹೋಗಿ ಬರುವಾಗ ಎಂತಹ ದುಷ್ಕೃತ್ಯಗಳು ಸಂಭವಿಸಬಹುದೆಂದು ಊಹಿಸಿಕೊಳ್ಳುವುದು ಅಸಾಧ್ಯ.

ಒಂದು ವೇಳೆ ಜಾಗದ ಕೊರತೆ ನೆಪವೊಡ್ಡಿ ಇಲ್ಲಿಯೇ ಬಾಲಕಿಯರ ಬಿ.ಸಿ.ಎಂ ನ ಕಾಲೇಜು ಹಾಸ್ಟೆಲ್‌ ನಿರ್ಮಿಸಿ ಪ್ರಾರಂಭಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಆಗುವ ದುರ್ಘ‌ಟನೆಗಳಿಗೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೇ ನೇರ ಹೊಣೆಗಾರರಾಗುವ ಸಾಧ್ಯತೆ ಇದೆ. ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಬಾಲಕಿಯರ ಬಿಸಿಎಂ ಕಾಲೇಜು ಹಾಸ್ಟೆಲ್‌ನ್ನು ಪಟ್ಟಣ ವ್ಯಾಪ್ತಿಯಲ್ಲಿಯೇ ನಿರ್ಮಾಣ ಮಾಡಲು ತೀರ್ಮಾನ ಕೈಗೊಳ್ಳಬೇಕಾಗಿದೆ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಟಾಪ್ ನ್ಯೂಸ್

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

1-dr

Veerendra Heggade 77ನೇ ವರ್ಷಕ್ಕೆ ಪಾದಾರ್ಪಣೆ: ಗಣ್ಯರಿಂದ ಶುಭ ಹಾರೈಕೆ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.