ಮನೇಲಿದ್ರೆ ಬಿಲ್ವಪತ್ರೆ ಬೇಕಾಗಿಲ್ಲ ಆಸ್ಪತ್ರೆ
Team Udayavani, Nov 20, 2019, 6:03 AM IST
ಬಿಲ್ವಪತ್ರೆ, ಶಿವನಿಗೆ ಪ್ರಿಯವಾದುದು ಅಂತ ಎಲ್ಲರಿಗೂ ಗೊತ್ತು. ಆದರೆ, ಹೆಚ್ಚಿನವರಿಗೆ ಅದರ ಔಷಧೀಯ ಗುಣಗಳ ಅರಿವಿಲ್ಲ. ಬಿಲ್ವ ಪತ್ರೆಯ ಬೇರು, ಎಲೆ, ತೊಗಟೆ, ಹಣ್ಣಿನ ತಿರುಳು, ಆಯುರ್ವೇದದಲ್ಲಿ ಔಷಧವಾಗಿ ಉಪಯೋಗಿಸಲ್ಪಡುತ್ತದೆ. ಬಿಲ್ವಪತ್ರದ ಕೆಲವು ಮನೆಮದ್ದುಗಳು ಇಲ್ಲಿವೆ.
-ಚರ್ಮದ ದುರ್ಗಂಧವನ್ನು ನಿವಾರಿಸಲು ತಾಜಾ ಬಿಲ್ವಪತ್ರೆ ರಸವನ್ನು ಪ್ರತಿದಿನ ಮೈಗೆ ಲೇಪಿಸಿಕೊಂಡು ಅರ್ಧಗಂಟೆಯ ನಂತರ ಸ್ನಾನ ಮಾಡಬೇಕು.
-ಕುರುಗಳು ಎದ್ದಾಗ ಬಿಲ್ವ ವೃಕ್ಷದ ಬೇರನ್ನು ಲಿಂಬೆರಸದಲ್ಲಿ ತೇಯ್ದು ಲೇಪಿಸಬಹುದು.
-ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ, ಅದರ ತಿರುಳನ್ನು ತೆಗೆದು ನುಣ್ಣಗೆ ಅರೆದು ತಲೆಗೆ ಲೇಪಿಸಿ, ಅರ್ಧ ಗಂಟೆಯ ನಂತರ ತೊಳೆಯಬೇಕು. ಹದಿನೈದು ದಿನ ಹೀಗೆ ಮಾಡಿದರೆ ತಲೆಹೊಟ್ಟಿನ ಸಮಸ್ಯೆ ನಿವಾರಣೆಯಾಗುತ್ತದೆ.
-ಬಿಲ್ವಪತ್ರೆಯನ್ನು ಅರೆದು ತಲೆಗೆ ಲೇಪಿಸಿದರೆ, ತಲೆಹೊಟ್ಟು ಹಾಗೂ ಬಾಲ ನೆರೆ ಕಡಿಮೆಯಾಗುತ್ತದೆ.
-ನಿದ್ರಾಹೀನತೆಯಿಂದ ಬಳಲುತ್ತಿರುವವರು, ಬಿಲ್ವದ ಎಲೆಯನ್ನು ನೀರು ಸೇರಿಸದೆ ಅರೆದು ಹಣೆಗೆ ಲೇಪಿಸಿಕೊಳ್ಳಬೇಕು.
-ಬಿಲ್ವಪತ್ರೆಯ ರಸವನ್ನು ಪ್ರತಿದಿನ 2 – 3 ಚಮಚೆಯಷ್ಟು ಸೇವಿಸುತ್ತಿದ್ದರೆ ನಿಶ್ಯಕ್ತಿ ದೂರವಾಗುತ್ತದೆ.
-ಸ್ವಲ್ಪ ನೀರಿನಲ್ಲಿ ಬಿಲ್ವದ ಹೂಗಳನ್ನು ನೆನೆಸಿಟ್ಟು ನಂತರ ಶೋಧಿಸಿ ಆ ನೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳುತ್ತಿದ್ದರೆ ಕಣ್ಣಿನ ಆರೋಗ್ಯ ಚೆನ್ನಾಗಿರುತ್ತದೆ.
-ಬಾಯಿಯಲ್ಲಿ ಹುಣ್ಣಾಗಿದ್ದಾಗ ಬಿಲ್ವಪತ್ರೆ ಹಣ್ಣಿನ ತಿರುಳಿಗೆ ಸ್ವಲ್ಪ ಬೆಲ್ಲ ಸೇರಿಸಿ ದಿನಕ್ಕೊಮ್ಮೆ ಸೇವಿಸಿ.
-ಅಜೀರ್ಣದಿಂದ ವಾಂತಿ ಆದಾಗ, ಎರಡು ಚಮಚೆ ಬಿಲ್ವಪತ್ರೆ ರಸಕ್ಕೆ ಒಂದು ಚಮಚ ಜೇನುತುಪ್ಪ ಸೇರಿಸಿ ದಿನದಲ್ಲಿ 2-3 ಬಾರಿ ಸೇವಿಸಬೇಕು.
-ಅಸ್ತಮಾ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಮುಂಜಾನೆ ಎದ್ದಕೂಡಲೇ ಒಂದು ಬಿಲ್ವದ ಎಲೆಯನ್ನು 2-3 ಕಾಳುಮೆಣಸಿನೊಂದಿಗೆ ಬಾಯಿಗೆ ಹಾಕಿಕೊಂಡು ಚೆನ್ನಾಗಿ ಅಗಿದು ತಿನ್ನಬೇಕು.
-ಬಿಲ್ವದ ಎಲೆಗಳನ್ನು ಒಣಗಿಸಿ ಚೂರ್ಣ ಮಾಡಿ, ಒಂದು ಚಮಚದಷ್ಟು ಚೂರ್ಣವನ್ನು ಒಂದು ಬಟ್ಟಲು ನೀರಿಗೆ ಸೇರಿಸಿ ಕುದಿಸಿ, ತಣಿಸಿ ದಿನದಲ್ಲಿ 2-3 ಬಾರಿ ಕುಡಿಯುತ್ತಿದ್ದರೆ ರಕ್ತದೊತ್ತಡ ಇರುವವರಿಗೆ ಪ್ರಯೋಜನವಾಗುತ್ತದೆ.
– ಭೇದಿ ಮುಂತಾದ ಹೊಟ್ಟೆಯ ಸಂಬಂಧಿ ಸಮಸ್ಯೆಗಳಿದ್ದಾಗ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸ್ವಲ್ಪ ಬಿಲ್ವದ ಹಣ್ಣನ್ನು ದಾಲಿcನ್ನಿ ಪುಡಿಯೊಂದಿಗೆ ಕಲೆಸಿ ಸೇವಿಸಬೇಕು.
-ಸಮಪ್ರಮಾಣದ ಬಿಲ್ವದ ತಿರುಳು ಮತ್ತು ಎಳ್ಳನ್ನು ಅರೆದು ಸ್ವಲ್ಪ ಬೆಣ್ಣೆ ಮತ್ತು ತುಪ್ಪದಲ್ಲಿ ಸೇರಿಸಿ ಸೇವಿಸುತ್ತಿದ್ದರೆ, ಮಲಸಂಬಂಧಿ ಸಮಸ್ಯೆಗಳು ನಿವಾರಣೆಯಾಗುತ್ತವೆ.
-ಹಸಿವಾಗದೇ ಇರುವವರು ನಾಲ್ಕೈದು ಬಿಲ್ವ ಪತ್ರೆ ಎಲೆಯನ್ನು ಪ್ರತಿದಿನ ಮುಂಜಾನೆ ಚೆನ್ನಾಗಿ ಅಗಿದು ತಿನ್ನಬೇಕು.
* ವಿಜಯಕುಮಾರ್ ಎಸ್.ಅಂಟೀನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.