“ಸ್ಯಾಂಡ್ ಬಜಾರ್’: 48 ಗಂಟೆಗಳಲ್ಲಿ ಮರಳು
Team Udayavani, Nov 19, 2019, 5:16 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರಿಗೆ ನಿರ್ದಿಷ್ಟ ಬೆಲೆ ಮತ್ತು ನಿಗದಿತ ಸಮಯದಲ್ಲಿ ಮರಳು ಪೂರೈಕೆಯಾಗುವ ನಿಟ್ಟಿನಲ್ಲಿ dksandbazaar.com ಎಂಬ ಆ್ಯಪ್ ಕಾರ್ಯಾಚರಿಸುತ್ತಿದ್ದು, ಬುಕ್ ಮಾಡಿದ 48 ಗಂಟೆಗಳಲ್ಲಿ ಗ್ರಾಹಕರಿಗೆ ಪೂರೈಸಲಾಗುತ್ತಿದೆ.
ಆ್ಯಪ್ ಮೂಲಕ ಮೇ 22ರಿಂದ
ಇದುವರೆಗೆ 11,466 ಬೇಡಿಕೆಗಳು ಸ್ವೀಕೃತವಾಗಿದ್ದು, 11,028 ಬೇಡಿಕೆ ಗಳಿಗೆ ಮರಳನ್ನು ಪೂರೈಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಅಧ್ಯಕ್ಷರ ಪ್ರಕಟನೆ ತಿಳಿಸಿದೆ.
ಮಾರಾಟ ದರ
ಸಿಆರ್‌ಝಡ್ ಪ್ರದೇಶದಲ್ಲಿನ ಮರಳು ಪ್ರತಿ ಲೋಡ್‌ಗೆ 5,500 ರೂ. ಹಾಗೂ ತುಂಬೆ ಅಣೆಕಟ್ಟಿನಿಂದ ಮೇಲೆತ್ತಿದ ಮರಳು ಪ್ರತಿ ಲೋಡ್‌ಗೆ 4,830 ರೂ. ಇದೆ. ಕ್ರೆಡಾೖ, ಸಿವಿಲ್ ಕಂಟ್ರಾಕ್ಟರ್ ಅಸೋಸಿಯೇಶನ್, ವಾಹನ ಮಾಲಕರು ಮತ್ತು ಎಲ್ಲ ತಾತ್ಕಾಲಿಕ ಪರವಾನಿಗೆದಾರರೊಂದಿಗೆ ಅ. 11ರಂದು ಸಭೆ ನಡೆಸಿ ಅಹವಾಲು ಮತ್ತು ಬೇಡಿಕೆಗಳನ್ನು ಸ್ವೀಕರಿಸಲಾಗಿದ್ದು, ಪ್ರಸ್ತುತ ಆ್ಯಪ್‌ನಲ್ಲಿ ಕೆಲವು ಮಾರ್ಪಾಟು ಮಾಡಿ ಬಲ್ಕ್ ಆರ್ಡರ್‌ಗಳನ್ನು ಸ್ವೀಕರಿಸಲಾಗುತ್ತಿದೆ.
ಪಿಡಿಒಗಳಿಂದ ಆ್ಯಪ್ ಬಳಕೆ ಮಾಹಿತಿ
ಜನಸಾಮಾನ್ಯರು ಕೂಡ ಸ್ಯಾಂಡ್ ಬಜಾರ್ ಆ್ಯಪ್‌ನ ಮೂಲಕ ಮರಳು ಬೇಡಿಕೆಯನ್ನು ನೋಂದಾಯಿಸುವ ಬಗ್ಗೆ ಹಾಗೂ ಆ್ಯಪ್ ಬಳಸುವ ವಿಧಾನದ ಬಗ್ಗೆ ಮಾಹಿತಿಯನ್ನು ತಿಳಿಸಲು ಆಯಾ ಗ್ರಾ.ಪಂ.ಗಳಲ್ಲಿ ಕ್ರಮ ಕೈಗೊಳ್ಳುವಂತೆ ಎಲ್ಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಅ. 16ರಂದು ತರಬೇತಿ ನೀಡಲಾಗಿದೆ. ಜಿಲ್ಲೆಯಲ್ಲಿ ಎಲ್ಲ ಗ್ರಾಹಕರು ಸ್ಯಾಂಡ್ ಬಜಾರ್ ಆ್ಯಪ್ ಮೂಲಕವೇ ಮರಳಿನ ಬೇಡಿಕೆ ನೋಂದಣಿ ಮಾಡಲು ತಮ್ಮ ಗ್ರಾ.ಪಂ.ಗಳಲ್ಲಿ ಮಾಹಿತಿ ಪಡೆಯಬಹುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.