ಬ್ಯಾಂಕ್ ಲಾಕರ್ ಗೋಡೆ ಒಡೆದು ಕಳ್ಳತನ
Team Udayavani, Nov 19, 2019, 12:49 PM IST
ನಾಲತವಾಡ: ಪಟ್ಟಣದ ಸಿಂಡಿಕೇಟ್ ಬ್ಯಾಂಕ್ ಲಾಕರ್ ಗೋಡೆ ಒಡೆದಿರುವ ಕಳ್ಳರು 13,460 ಚಿಲ್ಲರೆ ಹಣ ದೋಚಿ ಪರಾರಿಯಾಗಿದ್ದಾರೆ.
ನಾಲತವಾಡ ಪಟ್ಟಣದ ಸಿಂಡಿಕೇಟ್ ಬ್ಯಾಂಕಿಗೆ ಕಳ್ಳರ ಕನ್ನ ಹಾಕಿದ ಪ್ರಕರಣ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ರವಿವಾರ ರಜೆ ದಿನ ಇದ್ದುದ್ದರಿಂದ ಕಳ್ಳರು ಬ್ಯಾಂಕಿನ ಹಿಂಬದಿಯಲ್ಲಿ ಇರುವ ಲಾಕರ್ ರೂಮಿನ ಗೋಡೆಯನ್ನು ಕೊರೆದು ನುಗ್ಗಿದ್ದಾರೆ. ರವಿವಾರ ರಜೆ ದಿನ ಮುಗಿಸಿ ಸೋಮವಾರ ಬೆಳಗ್ಗೆ ಬ್ಯಾಂಕಿನ ವ್ಯವಸ್ಥಾಪಕ ಮತ್ತು ಸಿಬ್ಬಂದಿ ಕೆಲಸಕ್ಕೆ ಹಾಜರಾದ ಮೇಲೆ ಲಾಕರ್ ಕೊಠಡಿಯ ಗೋಡೆ ಒಡೆದ ದೃಶ್ಯ ಬೆಳಕಿಗೆ ಬಂದಿದೆ.
ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮುದ್ದೇಬಿಹಾಳ ಸಿಪಿಐ ಆನಂದ ವಾಗ್ಮೋರೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಯಾಂಕಿನ ಹಿಂಬದಿ ಲಾಕರ್ ರೂಮಿನ ಕೆಳ ಭಾಗದಲ್ಲಿ ಒಡೆದು ಕಳ್ಳರು ನುಗ್ಗಿದ್ದಾರೆ. ಲಾಕರ್ ರೂಮಿನಲ್ಲಿದ್ದ ದಾಖಲೆಗಳನ್ನು ರೂಮಿನ ಒಳಗೆ ಮತ್ತು ಹೊರಗೆ ಬೀಸಾಡಿದ್ದಾರೆ. ಹಣ ಇದ್ದ ಲಾಕರ್ ತೆಗೆಯಲು ಪ್ರಯತ್ನ ಮಾಡಿದ್ದಾರೆ. ಆದರೆ ಅವರು ಇದರಲ್ಲಿ ವಿಫಲರಾಗಿದ್ದಾರೆ. ಲಾಕರ್ ಕೊಠಡಿ ಹೊರಗೆ ಇಟ್ಟಿದ್ದ 13,460 ಚಿಲ್ಲರೆ ಹಣ ದೋಚಿದ್ದಾರೆ ಎಂದು ಮಾಹಿತಿ ನೀಡಿದರು.
ಘಟನಾ ಸ್ಥಳಕ್ಕೆ ಬೆಳಗ್ಗೆ ಸಿಪಿಐ ಆನಂದ ವಾಗ್ಮೋರೆ ಹಾಗೂ ಕ್ರೈಂ ಪಿಎಸ್ಐ ಭೇಟಿ ನೀಡಿ ಬ್ಯಾಂಕ್ ಸುತ್ತ ಮುತ್ತ ಪ್ರದೇಶವನ್ನು ಪರಿಶೀಲಿಸಿದರು. ನಂತರ ಬೆರಳಚ್ಚು ತಂಡ ಭೇಟಿ ನೀಡಿ ಪರಿಶೀಲಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.