ಹಿಂಬಾಲಕರ ಅಬ್ಬರ; ಕಾರ್ಯಕರ್ತರ ಅಪಸ್ವರ
ಅಸ್ತಿತ್ವ ಕಳೆದುಕೊಳ್ಳುವ ಭೀತಿಯಲ್ಲಿ ಬಿಜೆಪಿ ನಾಯಕರು
Team Udayavani, Nov 20, 2019, 6:00 AM IST
ಬೆಂಗಳೂರು: ಉಪ ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳಲ್ಲಿ ಅನರ್ಹಗೊಂಡ ಶಾಸಕರು ಬಿಜೆಪಿ ಯಿಂದ ಕಣಕ್ಕಿಳಿದಿದ್ದು, ಹಲವು ಕ್ಷೇತ್ರಗಳಲ್ಲಿ ಇವರ ಬೆಂಬಲಿಗರು, ಹಿಂಬಾಲಕರ ಆರ್ಭಟವೇ ಹೆಚ್ಚಾ ಗಿದ್ದು ಬಿಜೆಪಿಯ ಮೂಲ ಕಾರ್ಯಕರ್ತರಿಗೆ ಅಸ್ತಿತ್ವ ಕಳೆದುಕೊಳ್ಳುವ ಭೀತಿ ಕಾಡಲಾರಂಭಿಸಿದೆ.
ಅನರ್ಹ ಶಾಸಕರ ಪಕ್ಷ ಸೇರ್ಪಡೆ ಬೆನ್ನಲ್ಲೇ ಅವರ ಬೆಂಬಲಿಗರು ಉಪ ಚುನಾವಣ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಚುನಾವಣ ಕಾರ್ಯತಂತ್ರ, ಪ್ರಚಾರ ಸಭೆ, ಸಮಾ ರಂಭ, ಇತರ ಕಾರ್ಯಗಳಲ್ಲೂ ಬೆಂಬಲಿಗರೇ ಮುಂಚೂಣಿಯಲ್ಲಿರುವುದರಿಂದ ಬಿಜೆಪಿಯ ಮೂಲ ಕಾರ್ಯಕರ್ತರ ಇರುವಿಕೆ ಪ್ರಧಾನವಾಗಿ ಕಾಣದಂತಾಗಿದೆ. ಪರಿಸ್ಥಿತಿ ಹೀಗೇ ಮುಂದು ವರಿದರೆ ಮುಂದೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಟಿಕೆಟ್, ಸ್ಥಾನಮಾನ, ಮಾನ್ಯತೆಯಿಂದಲೂ ವಂಚಿತರಾಗುವ ಭೀತಿ ಕಾರ್ಯಕರ್ತರದ್ದು.
ಅನರ್ಹಗೊಂಡ 17 ಶಾಸಕರ ಪೈಕಿ 16 ಮಂದಿ ಬಿಜೆಪಿ ಸೇರಿದ್ದು, 13 ಮಂದಿ ಸದ್ಯ ಎದು ರಾಗಿರುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ. ಇವರೊಂದಿಗೆ ಅವರ ಬೆಂಬಲಿಗರು, ಹಿಂಬಾಲಕರ ದೊಡ್ಡ ಬಳಗವೇ ಬಿಜೆಪಿಯಲ್ಲಿ ವಿಲೀನವಾಗಿದೆ. ಕಳೆದ ಲೋಕಸಭಾ ಚುನಾವಣೆಯವರೆಗೂ ಪರಸ್ಪರ ಹೋರಾಟ ನಡೆಸಿದವರೇ ಬದಲಾದ ಸನ್ನಿವೇಶದಲ್ಲಿ ಪರಸ್ಪರ ಸ್ವಪಕ್ಷೀಯರಾಗಿದ್ದಾರೆ.
ಮೂಡದ ಸಮನ್ವಯ
ಮೇಲ್ಮಟ್ಟದಲ್ಲಿ ಹೊಂದಾಣಿಕೆಯಾದರೂ ಕೆಳ ಹಂತದಲ್ಲಿ ಇನ್ನೂ ಮೂಲ ಕಾರ್ಯಕರ್ತರು, ಅನರ್ಹರ ಬೆಂಬಲಿಗರ ನಡುವೆ ಸಮನ್ವಯ ಮೂಡಿಲ್ಲ. ಏಕೆಂದರೆ ಕ್ಷೇತ್ರದಲ್ಲಿ ಬಿಜೆಪಿಯ ಪ್ರತ್ಯೇಕ ವ್ಯವಸ್ಥೆಯಿದ್ದು, ಅಲ್ಲಿಯೂ ಕ್ಷೇತ್ರ ಹಂತದ ಪದಾಧಿಕಾರಿಗಳು, ಬೂತ್ ಸಮಿತಿ ಅಧ್ಯಕ್ಷರು, ಸದಸ್ಯರಿದ್ದಾರೆ. ಆದರೆ ಅನರ್ಹ ಶಾಸಕರ ಪಕ್ಷ ಸೇರ್ಪಡೆ ಮೂಲಕ ಪಕ್ಷಕ್ಕೆ ಬಂದ ಬೆಂಬಲಿಗರು ಹಾಗೂ ಆಯಾ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು ಬಹುತೇಕ ಕಡೆ ಇನ್ನೂ ಒಂದುಗೂಡಿಲ್ಲ. ಹಾಗಾಗಿ ಸಮನ್ವಯವಿಲ್ಲದ ಕಾರಣ ಕೆಲವು ವ್ಯತ್ಯಾಸಗಳಾಗಿರಬಹುದು ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದರು.
ಕಾರ್ಯಕರ್ತರಿಗೆ ಅವಗಣನೆಯ ಭೀತಿ
ಈಗಿನ ಸ್ಥಿತಿ ಮುಂದುವರಿದು ಅನರ್ಹ ಶಾಸಕರ ಬೆಂಬಲಿಗರಿಗೆ ಹೆಚ್ಚು ಮಾನ್ಯತೆ ಸಿಗುತ್ತಾ ಹೋದರೆ ಮುಂದೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಟಿಕೆಟ್ ಹಂಚಿಕೆ ಸಹಿತ ಇತರ ಸ್ಥಾನಮಾನ ನೀಡುವ ಸಂದರ್ಭದಲ್ಲೂ ಮೂಲ ಕಾರ್ಯಕರ್ತರು ಅವಗಣನೆಗೆ ಒಳಗಾಗುವ ಆತಂಕವೂ ಹಲವು ಕ್ಷೇತ್ರದಲ್ಲಿ ಕಾಡುತ್ತಿದೆ.
ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ
ರಾಜ್ಯ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಹಿರಿಯ ನಾಯಕರ ನಡುವೆ ಬಣ ರಾಜಕೀಯ ಹೆಚ್ಚಾಗಿರುವುದರಿಂದ ಅಸಮಾಧಾನಗೊಂಡಿರುವ ಹೈಕಮಾಂಡ್, ವಸ್ತುಸ್ಥಿತಿಯ ಮಾಹಿತಿ ಪಡೆಯಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ಖಂಡ್ರೆ ಅವರಿಗೆ ಬುಲಾವ್ ನೀಡಿದೆ. ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ದಿಲ್ಲಿಗೆ ತೆರಳಿರುವ ಈಶ್ವರ್ ಖಂಡ್ರೆ, ಇತ್ತೀಚಿನ ದಿನಗಳಲ್ಲಿ ಪಕ್ಷದಲ್ಲಿ ನಡೆಯುತ್ತಿರುವ ಬಣ ರಾಜಕೀಯದ ಸಂಪೂರ್ಣ ಮಾಹಿತಿ ಒದಗಿಸುವ ಸಾಧ್ಯತೆಯಿದೆ. ನಾಯಕರ ನಡುವಿನ ಬಣ ರಾಜಕೀಯದಿಂದ ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ಆರಂಭದಲ್ಲಿಯೇ ಮಾಹಿತಿ ಪಡೆದು, ಎಲ್ಲ ನಾಯಕರನ್ನೂ ಒಗ್ಗಟ್ಟಿನಿಂದ ಕರೆದುಕೊಂಡು ಹೋಗುವಂತೆ ಸಿದ್ದರಾಮಯ್ಯಗೆ ಸೂಚನೆ ನೀಡುವ ಸಾಧ್ಯತೆ ಇದೆ.
- ಎಂ. ಕೀರ್ತಿಪ್ರಸಾದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.