ನಕಲಿ ಭತ್ತದ ಬೀಜ ಮಾರಾಟ: ಅಧಿಕಾರಿಗಳ ಭೇಟಿ

Team Udayavani, Nov 20, 2019, 2:29 PM IST

kipala-tdy-1

ಗಂಗಾವತಿ: ಬೇಸಿಗೆ ಹಂಗಾಮಿನಲ್ಲಿ ಭತ್ತದ ನಾಟಿ ಮಾಡಲು ರೈತರು ಹಾಕಿರುವ ಭತ್ತದ ಸಸಿ ಮಡಿ ಮೊಳಕೆಯೊಡೆದಿರುವ ಕುರಿತಂತೆ ಪರಿಶೀಲನೆ ನಡೆಸಲು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಡಾ|ಚಂದ್ರಕಾಂತ ನಾಡಗೌಡ ನೇತೃತ್ವದ ಅಧಿಕಾರಿಗಳ ತಂಡ ಆನೆಗೊಂದಿ, ಹನುಮನಹಳ್ಳಿ, ವಿರೂಪಾಪುರಗಡ್ಡಿ ಸಾಣಾಪುರ ತಿರುಮಲಾಪುರ ಗ್ರಾಮಗಳ ರೈತರ ಗದ್ದೆಗೆ ತೆರಳಿ ಸಸಿ ಮಡಿ ಮೊಳಕೆ ಒಡೆಯದ ಕುರಿತು ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ರೈತರ ಜತೆ ಮಾತನಾಡಿ ಭತ್ತದ ಬೀಜ ಖರೀದಿ ಮತ್ತು ರಸೀದಿ ಪಡೆಯುವ ಕುರಿತು ಸಮಗ್ರ ಮಾಹಿತಿ ನೀಡಿದರು. ಬೇಸಿಗೆ ಹಂಗಾಮಿನಲ್ಲಿ ರೈತರು ಬೇಗ ಕಟಾವಿಗೆ ಬರುವಂತಹ ಭತ್ತದ ತಳಿಯನ್ನು ನಾಟಿ ಮಾಡುತ್ತಾರೆ. ಬೇಸಿಗೆಯಲ್ಲಿ ನೀರಿನ ಕೊರತೆಯಿಂದಾಗಿ 100-120 ದಿನದೊಳಗೆ ಕಟಾವಿಗೆ ಬರುವ ಭತ್ತದವನ್ನು ರೈತರು ಬೇಸಿಗೆಯಲ್ಲಿ ಬೆಳೆಯುತ್ತಾರೆ.

ಕಳೆದ ನಾಲ್ಕೆದು ವರ್ಷಗಳಿಂದ ಬೇಸಿಗೆಯಲ್ಲಿ ನೀರಿಲ್ಲದ ಕಾರಣ ಭತ್ತ ರೈತರು ಭತ್ತ ನಾಟಿ ಮಾಡಿಲ್ಲ. ಆದ್ದರಿಂದ ಯಾರ ಹತ್ತಿರ ಬೇಸಿಗೆಗೆ ನಾಟಿ ಮಾಡಲು ಭತ್ತದ ಬೀಜವಿಲ್ಲ. ತಾಲೂಕಿನ ಹೊಸ್ಕೇರಾ ಕ್ಯಾಂಪಿನ ಭತ್ತದ ಬೀಜೋತ್ಪಾದನೆ ಮಾಡುತ್ತಿದ್ದು ಈ ಭಾರಿ ಗಂಗಾವತಿ ಸೇರಿ ಸುತ್ತಲಿನತಾಲೂಕಿನ ರೈತರು ಇವರ ಹತ್ತಿರ ಭತ್ತದ ಬೀಜ ಖರೀದಿ ಮಾಡಿದ್ದಾರೆ. ಭತ್ತದ ಸಸಿ ಮಡಿ ಹಾಕಿದ ಹಲವು ದಿನಗಳು ಕಳೆದರೂ ಮೊಳಕೆ ಒಡೆದಿರಲಿಲ್ಲ.

ಈ ಕುರಿತು “ಉದಯವಾಣಿ’ ಪತ್ರಿಕೆ ರೈತರ ಮನವಿ ಹಿನ್ನೆಲೆಯಲ್ಲಿ ಮಂಗಳವಾರ ವಿಸ್ತೃತ ವರದಿ ಮಾಡಿತ್ತು. ವರದಿಗೆ ತಾಲೂಕು ಕೃಷಿ ಇಲಾಖೆ ಅಧಿಕಾರಿಗಳು ಸ್ಪಂದಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೇಸಿಗೆ ಹಂಗಾಮಿನಲ್ಲಿ ಭತ್ತದ ನಾಟಿ ಮಾಡಲು ರೈತರು ಖಾಸಗಿ ಕಂಪನಿಯಿಂದ ಬೀಜ ಖರೀದಿಸಿ ಸಸಿ ಮಡಿ ಹಾಕಿದ್ದು ಬೀಜ ಮೊಳಕೆ ಒಡೆದಿಲ್ಲ. ಇದರಿಂದ ರೈತರು ಮಾಡಿದ ಖರ್ಚು ವ್ಯರ್ಥವಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಲಾಗಿದೆ. ಕೃಷಿ ಸಂಶೋಧನಾ ಕೇಂದ್ರ ಮತ್ತು ಕೃಷಿ ವಿಶ್ವವಿದ್ಯಾಲಯದ ಕೃಷಿ ತಜ್ಞರನ್ನು ಕರೆಸಿ ಇನ್ನಷ್ಟು ಪರಿಶೀಲನೆ ನಡೆಸಿ ಬೀಜೋತ್ಪಾದನೆ ಮಾಡಿದ ಕಂಪನಿಯವರ ವಿರುದ್ಧ ರೈತರಿಂದ ದೂರಿನ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಡಾ| ಚಂದ್ರಕಾಂತ ನಾಡಗೌಡ, ಸಹಾಯಕ ಕೃಷಿ ನಿರ್ದೇಶಕರು

ಟಾಪ್ ನ್ಯೂಸ್

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.