ಸಮರ್ಪಣಾ ಮನೋಭಾವದಿಂದ ಯಶಸ್ಸು

ಹೊಸಗುಂದ ಉತ್ಸವ ಸಮಾರೋಪಕಾರ್ತಿಕ ದೀಪದಲ್ಲಿ ಮಿನುಗಿದ ಹೊಸಗುಂದ ದೇಗುಲ

Team Udayavani, Nov 20, 2019, 4:05 PM IST

20-November-14

ಆನಂದಪುರ: ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳು ಸ್ಥಳೀಯವಾಗಿ ಮನಸ್ಸುಗಳನ್ನು ಕಟ್ಟುವ ಕೆಲಸ ಮಾಡುತ್ತವೆ. ಎಲ್ಲಿ ಶ್ರದ್ಧೆ, ನಂಬಿಕೆ, ಭಕ್ತಿ ಹಾಗೂ ಸಮರ್ಪಣಾ ಮನೋಭಾವ ಇರುತ್ತದೆಯೋ ಅಂತಹ ಕಡೆಗಳಲ್ಲಿ ಯಶಸ್ಸು ತಾನಾಗಿಯೇ ಬರುತ್ತದೆ ಎಂದು ಶೃಂಗೇರಿ ದಕ್ಷಿಣಾಮ್ನಾಯ ಶಾರದಾಪೀಠದ ಡಾ| ವಿ.ಆರ್‌. ಗೌರಿಶಂಕರ್‌ ತಿಳಿಸಿದರು.

ಸಮೀಪದ ಹೊಸಗುಂದದಲ್ಲಿ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್‌ ವತಿಯಿಂದ ಆಯೋಜಿಸಿದ್ದ ಮೂರು ದಿನಗಳ ಹೊಸಗುಂದ ಉತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು. ಈ ಭಾಗದ ಜನರು ಉತ್ಸವದ ಯಶಸ್ಸಿಗೆ ತಮ್ಮ ಕಾಯಾ, ವಾಚಾ, ಮನಸಾ ತೊಡಗಿಸಿಕೊಂಡಿದ್ದರು. ಇದರಿಂದ ಮೂರು ದಿನಗಳ ಹೊಸಗುಂದ ಉತ್ಸವ ನಿರೀಕ್ಷೆಗಿಂತ ಹೆಚ್ಚಿನ ಯಶಸ್ಸು ಕಾಣಲು ಸಾಧ್ಯವಾಯಿತು ಎಂದು ಹೇಳಿದರು.

ಹಂಪಿ ಉತ್ಸವದಂತೆ ಹೊಸಗುಂದ ಉತ್ಸವ ಸಹ ನಡೆಯಬೇಕು ಎನ್ನುವುದು ನಮ್ಮ ಮನದಿಂಗಿತವಾಗಿದೆ. ಇದಕ್ಕೆ ಶ್ರೀ ಪೀಠದ ಎಲ್ಲ ರೀತಿಯ ಸಲಹೆ ಇರುತ್ತದೆ. ಇದೊಂದು ಮಲೆನಾಡಿನ ಪ್ರತಿಷ್ಠಿತ ಉತ್ಸವವಾಗುವ ಜೊತೆಗೆ ಮುಂದಿನ ಪೀಳಿಗೆ ಇದನ್ನು ಮುಂದುವರಿಸಿಕೊಂಡು ಹೋಗುವ ವಾತಾವರಣ ಕಲ್ಪಿಸುವ ಅಗತ್ಯವಿದೆ. ಲಕ್ಷ ದೀಪೋತ್ಸವದಂತಹ ನಮ್ಮ ಪ್ರಾಚೀನ ಸಂಸ್ಕೃತಿಯ ಕಾರ್ಯವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಮಾಡಿರುವುದು ಸ್ಮರಣೀಯ ಕಾರ್ಯ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೇವಾ ಟ್ರಸ್ಟ್‌ನ ಮುಖ್ಯಸ್ಥ ಸಿ.ಎಂ.ಎನ್‌. ಶಾಸ್ತ್ರಿ, ಎಲ್ಲರ ಸಹಕಾರದಿಂದ ಉತ್ಸವ ಯಶಸ್ವಿಯಾಗಿದೆ. ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಉತ್ಸವದಲ್ಲಿ ಪಾಲ್ಗೊಂಡಿರುವುದು ದಾಖಲೆಯಾಗಿದೆ. ಶೃಂಗೇರಿ ಜಗದ್ಗುರುಗಳ ಮಾರ್ಗದರ್ಶನ, ಡಾ| ವಿ.ಆರ್‌. ಗೌರಿಶಂಕರ್‌ ಅವರು ಸ್ಥಳದಲ್ಲಿಯೇ ಮೂರು ದಿನ ಮೊಕ್ಕಾಂ ಮಾಡಿ ಸಲಹೆ ನೀಡಿರುವುದು ಅರ್ಥಪೂರ್ಣವಾಗಿ ಉತ್ಸವ ಜರುಗಲು ಕಾರಣವಾಗಿದೆ. ಅನೇಕ ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡಲಾಗಿದೆ. ಇನ್ನಷ್ಟು ಸ್ಥಳೀಯ ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡುವುದು ಹಾಗೂ ಈ ಉತ್ಸವವನ್ನು ಮಲೆನಾಡಿನ ಮನೆಮಾತಾಗಿಸುವ ನಿಟ್ಟಿನಲ್ಲಿ 7ದಿನಗಳ ಹೊಸಗುಂದ ಉತ್ಸವ ಮುಂದಿನ ವರ್ಷ ಆಯೋಜಿಸುವ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು. ನವದೆಹಲಿ ಭಾರತೀಪೀಠಂನ ಶ್ರೀ ಸರ್ವಾನಂದ ಸರಸ್ವತಿ ಸ್ವಾಮೀಜಿ, ನ್ಯಾಯವಾದಿ ಸುಬ್ರಹ್ಮಣ್ಯ ಜೋಯ್ಸ, ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಶೋಭಾ ಶಾಸ್ತ್ರಿ ಇದ್ದರು. ಜ್ಯೋತಿ ಕೋವಿ ಸ್ವಾಗತಿಸಿದರು. ಗಿರೀಶ್‌ ಕೋವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹೇಶ್‌ ಮಂಕಳಲೆ ವಂದಿಸಿದರು. ದೀಪಕ್‌ ಸಾಗರ್‌ ನಿರೂಪಿಸಿದರು.

ನಂತರ ಮೃದಂಗ ಮಾಂತ್ರಿಕ ಆನೂರು ಅನಂತ ಕೃಷ್ಣ ಶರ್ಮ ಮತ್ತು ಸಂಗಡಿಗರಿಂದ ಮೃದಂಗ ವಾದನ, ಶ್ರೀಧರ ಸಾಗರ್‌ ಮತ್ತು ತಂಡದಿಂದ ಸ್ಯಾಕ್ಸೋಫೋನ್‌ ವಾದನ ಹಾಗೂ ಯಕ್ಷಗಾನ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

15-uv-fusion

Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.