ಶೌಚಗೃಹ ಬಳಕೆಗೆ ಹೂ ನೀಡಿ ಜಾಗೃತಿ
Team Udayavani, Nov 20, 2019, 4:31 PM IST
ಮೈಸೂರು: ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಸಾರ್ವಜನಿಕರಿಗೆ ಶೌಚಾಲಯ ಬಳಸಿ, ಪರಿಸರ ಸಂರಕ್ಷಿಸಿ ಎಂದು ಗುಲಾಬಿ ಹೂ ನೀಡಿ ವಿನೂತನವಾಗಿ ಅರಿವು ಮೂಡಿಸಲಾಯಿತು.
ಮಂಗಳವಾರ ನಗರದ ಸಿಟಿ ಬಸ್ ನಿಲ್ದಾಣದ ಶೌಚಾಲಯದ ಮುಂಭಾಗ ಅರಿವು ಮೂಡಿಸುವ ಫಲಕಗಳನ್ನು ಪ್ರದರ್ಶಿಸಿ ಅರಿವು ಮೂಡಿಸಿದರು. ಈ ವೇಳೆ ಮಾತ ನಾಡಿದ ಹಿರಿಯ ಸಮಾಜ ಸೇವಕ ಕೆ. ರಘುರಾಂ ವಾಜಪೇಯಿ, ಮೈಸೂರು ಸ್ವಚ್ಛ ನಗರಿ ಎಂದು ಈಗಾಗಲೇ ಖ್ಯಾತಿ ಪಡೆದಿದೆ. ನಗರಪಾಲಿಕೆ ವತಿಯಿಂದ ಸಾರ್ವಜನಿಕ ಶೌಚಾಲಯ ನಿರ್ಮಿಸಿದರೂ ಕೂಡ ಎಲ್ಲ ನಾಗರಿಕರು ಬಯಲಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದನ್ನು ಮನಗಂಡು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿರುವುದು ಉತ್ತಮ ಕಾರ್ಯ. ನಗರಪಾಲಿಕೆ ಹೆಚ್ಚು ಹೆಚ್ಚು ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲಿ ಎಂದು ಮನವಿ ಮಾಡಿದರು.
ದುಬಾರಿ ದಂಡ ವಿಧಿಸಿ: ಗೂಗಲ್ ಮ್ಯಾಪ್ ನಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ಸೇರಿಸಬೇಕು ಮಾಡಬೇಕು. ಬೇಡದೆ ಇರುವ ಫಲಕಗಳನ್ನು ಹಾಕುವ ಬದಲು ಸಾರ್ವಜನಿಕ ಶೌಚಾಲಯಕ್ಕೆ ಹೋಗುವ ದಾರಿಗಳ ಫಲಕಗಳನ್ನು ಹಾಕುವುದು ಮುಖ್ಯ. ಸ್ವಚ್ಛತೆ ಕಾಪಾಡಬೇಕು ಇಷ್ಟೆಲ್ಲಾ ಮಾಡಿದ ಮೇಲೆಯೂ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ಮಾಡಿದರೆ ಅವರಿಗೆ ಐದು ಸಾವಿರ ದಂಡ ಹಾಗೂ ಒಂದು ದಿನ ಶೌಚಾಲಯ ಕ್ಲೀನ್ ಮಾಡುವ ಕೆಲಸ ನೀಡಬೇಕು ಎಂದು ಹೇಳಿದರು.
ಮಲಮೂತ್ರದಿಂದ ಗೊಬ್ಬರ: ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್ ಮಾತನಾಡಿ, ಮಾನವ ತ್ಯಾಜ್ಯವನ್ನು ಗೊಬ್ಬರವಾಗಿ ಬಳಸಿದರೆ ಸ್ವಚ್ಛ ಪರಿಸರ ಹೊಂದುವುದು ಸಾಧ್ಯವಾಗಲಿದೆ. ವಿದೇಶಗಳಲ್ಲಿ ಮಾನವ ಮಲಮೂತ್ರದಿಂದ ಗೊಬ್ಬರ ತಯಾರಿಸಲಾಗುತ್ತಿದೆ. ಇದು ನಮ್ಮಲ್ಲೂ ಪ್ರಯೋಗವಾಗಬೇಕು. ಇದರಿಂದ ಕೃಷಿ ಚಟುವಟಿಕೆಗೂ ಪ್ರೋತ್ಸಾಹ ಸಿಕ್ಕಂತಾಗಲಿದೆ. ಈ ಪ್ರಯತ್ನ ಎಚ್.ಡಿ.ಕೋಟೆ ತಾಲೂಕಿನಲ್ಲಿ 600ಕ್ಕೂ ಹೆಚ್ಚು ಶೌಚಾ ಲಯಗಳಲ್ಲಿ ನಡೆದಿದೆ. ಹೊಸಹಳ್ಳಿ ಗ್ರಾಮಸ್ಥರು ಮನೆ ಮನೆಗಳಲ್ಲೂ ಗೊಬ್ಬರ ತಯಾರು ಮಾಡುತ್ತಿದ್ದಾರೆ. ನಗರಗಳಿಗಿಂತ ಹಳ್ಳಿಗಳಲ್ಲಿ ಶೌಚಾಲಯಕ್ಕೆ ನೀರನ್ನು ಕಡಿಮೆ ಬಳಸುತ್ತಾರೆ. ಇದು ನಗರಗಳಲ್ಲೂ ಪಾಲನೆಯಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಮಾಜಿ ನಗರಪಾಲಿಕೆ ಸದಸ್ಯ ಎಂ.ಡಿ. ಪಾರ್ಥಸಾರಥಿ, ರಕ್ಷಣಾ ವೇದಿಕೆಯ ಉಪಾಧ್ಯಕ್ಷ ಕುಮಾರ್ ಗೌಡ , ಪದಾಧಿಕಾರಿಗಳಾದ ರಾಕೇಶ್ ಶ್ರೀನಿವಾಸ್, ಸುಚೀಂದ್ರ, ಚಕ್ರಪಾಣಿ, ಎಸ್.ಎನ್.ರಾಜೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.