ಇಂದು ವಿಂಡೀಸ್‌ ಸರಣಿಗೆ ಭಾರತ ತಂಡ ಪ್ರಕಟ

Team Udayavani, Nov 21, 2019, 5:53 AM IST

rohit-dhawan

ಮುಂಬಯಿ: ಮುಂಬರುವ ವೆಸ್ಟ್‌ ಇಂಡೀಸ್‌ ಸರಣಿಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿ ಗುರುವಾರ ಭಾರತ ತಂಡವನ್ನು ಪ್ರಕಟಿಸಲಿದೆ.

ಮುಂಬಯಿಯಲ್ಲಿ ಎಂಎಸ್‌ಕೆ ಪ್ರಸಾದ್‌ ನೇತೃತ್ವದ ರಾಷ್ಟ್ರೀಯ ಆಯ್ಕೆ ಸಮಿತಿ ಗುರುವಾರ ಸಭೆ ಸೇರುತ್ತಿದೆ. ಈ ವೇಳೆ ಉಪನಾಯಕ ರೋಹಿತ್‌ ಶರ್ಮ ಕೆಲಸದ ಹೊರೆ ನಿರ್ವಹಣೆ, ಶಿಖರ್‌ ಧವನ್‌ ಕಳಪೆ ಫಾರ್ಮ್ ಕುರಿತು ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಭಾರತದ ಆತಿಥ್ಯದಲ್ಲಿ ವಿಂಡೀಸ್‌ ವಿರುದ್ಧ 3 ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಇದಕ್ಕಾಗಿ ತಂಡವನ್ನು ಆಯ್ಕೆ ಮಾಡಲು ಸಭೆ ನಡೆಸಲಾಗುತ್ತಿದೆ. ಡಿ. 6ರಂದು ಮುಂಬಯಿಯಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ಡಿ. 15ರಿಂದ ಚೆನ್ನೈನಲ್ಲಿ ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದೆ.

ರೋಹಿತ್‌ಗೆ ವಿಶ್ರಾಂತಿ?
ಸತತ ಪಂದ್ಯಗಳನ್ನು ಆಡುತ್ತಿರುವ ರೋಹಿತ್‌ ಶರ್ಮ ಅವರಿಗೆ ವಿಶ್ರಾಂತಿ ಸಿಗಬಹುದು ಎನ್ನಲಾಗಿದೆ. ರೋಹಿತ್‌ ಶರ್ಮ ಟಿ20 ಸರಣಿಗೆ ಲಭ್ಯವಿದ್ದು ಆ ಬಳಿಕ ನಡೆಯಲಿರುವ ಏಕದಿನ ಸರಣಿಯಿಂದ ಹೊರಗುಳಿಯುವ ಸಾಧ್ಯತೆ ಇದೆ. ಉಪನಾಯಕನ ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ಹೇಳಲಾಗಿದೆ. ಪ್ರಸಕ್ತ ವರ್ಷ ರೋಹಿತ್‌ 25 ಏಕದಿನ ಪಂದ್ಯ, 11 ಟಿ20 ಜತೆಗೆ ಟೆಸ್ಟ್‌ ಕೂಡ ಆಡಿದ್ದಾರೆ. ನಾಯಕ ಕೊಹ್ಲಿಗಿಂತ ಹೆಚ್ಚು ಪಂದ್ಯದಲ್ಲಿ ಕಣಕ್ಕಿಳಿದಿದ್ದಾರೆ. ಕೊಹ್ಲಿಗೆ ಹಿಂದೆ ಎರಡು ಸಲ ವಿಶ್ರಾಂತಿ ನೀಡಲಾಗಿತ್ತು. ವಿಶ್ರಾಂತಿ ಬಳಿಕ ರೋಹಿತ್‌ ಅವರು 2020ರಲ್ಲಿ ನ್ಯೂಜಿಲ್ಯಾಂಡ್‌ ಸರಣಿ ಪ್ರವಾಸಕ್ಕೆ ಲಭ್ಯವಾಗಲಿದ್ದಾರೆ. ಕಿವೀಸ್‌ ಪ್ರವಾಸಕ್ಕೂ ಮೊದಲು ರೋಹಿತ್‌ ವಿಶ್ರಾಂತಿ ತೆಗೆದುಕೊಳ್ಳಬೇಕಾದ ಅಗತ್ಯವಿದೆ ಎನ್ನಲಾಗಿದೆ. ಕಿವೀಸ್‌ ನೆಲದಲ್ಲಿ ಭಾರತ 5 ಟಿ20, 3 ಏಕದಿನ ಹಾಗೂ 2 ಟೆಸ್ಟ್‌ ಸರಣಿ ಆಡಲಿದೆ.

ಧವನ್‌ಗೆ ಪರೀಕ್ಷೆ
ವರ್ಷದ ಆರಂಭಕ್ಕೂ ಮೊದಲು ಗಾಯದಿಂದ ಚೇತರಿಸಿಕೊಂಡು ತಂಡವನ್ನು ಸೇರಿಕೊಂಡಿದ್ದ ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್‌ ಧವನ್‌ ಉತ್ತಮ ನಿರ್ವಹಣೆ ನೀಡಲು ವಿಫ‌ಲರಾಗಿದ್ದರು. ಮಾತ್ರವಲ್ಲದೇ ದೇಶೀಯ ಪಂದ್ಯಗಳಲ್ಲೂ ಅವರ ನಿರ್ವಹಣೆ ಗಮನಾರ್ಹವಾಗಿಲ್ಲ. ಆದರೆ ಮಯಾಂಕ್‌ ಅಗರ್ವಾಲ್‌ ಭರ್ಜರಿ ಫಾರ್ಮ್ ನಲ್ಲಿದ್ದಾರೆ. ಅವರೊಂದಿಗೆ ಕರ್ನಾಟಕದ ಕೆ.ಎಲ್‌.ರಾಹುಲ್‌ ಕೂಡ ಆರಂಭಿಕ ಸ್ಥಾನಕ್ಕೆ ಪೈಪೋಟಿ ನಡೆಸುತ್ತಿದ್ದಾರೆ. ಹೀಗಾಗಿ ಧವನ್‌ಗೆ ಸ್ಥಾನ ಸಿಗುವುದು ಕಷ್ಟ ಎನ್ನುವುದು ಕ್ರಿಕೆಟ್‌ ಪಂಡಿತರ ಲೆಕ್ಕಾಚಾರ.

ಹಲವು ನಿರೀಕ್ಷೆ
ಧೋನಿ ಅಲಭ್ಯ ಎನ್ನುವುದು ಸದ್ಯದ ಸುದ್ದಿ. ಆದರೆ ವಿಕೆಟ್‌ ಕೀಪರ್‌ ಕಮ್‌ ಬ್ಯಾಟ್ಸ್‌ ಮನ್‌ ರಿಷಭ್‌ ಪಂತ್‌ ವಿಫ‌ಲವಾದರೆ ಧೋನಿ ಮತ್ತೆ ತಂಡ ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ. ಗಾಯದಿಂದ ಬಳಲಿದ್ದ ಹಾರ್ದಿಕ್‌ ಪಾಂಡ್ಯ, ಜಸ್‌ಪ್ರೀತ್‌ ಬುಮ್ರಾ, ಭುವನೇಶ್ವರ್‌ ಕುಮಾರ್‌ ತಂಡಕ್ಕೆ ಮತ್ತೆ ಲಭ್ಯವಾಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಟಾಪ್ ನ್ಯೂಸ್

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.