ನ. 23ರಿಂದ ಆ್ಯಪ್ ಬಳಸಿ ಮರಳು ವಿತರಣೆ: ಡಿಸಿ
Team Udayavani, Nov 21, 2019, 4:07 AM IST
ಉಡುಪಿ: ಜಿಲ್ಲೆಯಲ್ಲಿ ನ. 23ರಿಂದ ಉಡುಪಿ ಇ-ಸ್ಯಾಂಡ್ ಆ್ಯಪ್ ಮೂಲಕ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರು ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಳ್ಳಲಿದ್ದು, ಆವಶ್ಯಕತೆ ಇರುವವರು UDUPI E SAND APP ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ನ. 23ರಂದು ಬೆಳಗ್ಗೆ 10 ಗಂಟೆಗೆ ಇ-ಸ್ಯಾಂಡ್ ಆ್ಯಪ್ ಮೂಲಕ ಮರಳು ವಿತರಣೆ ಆರಂಭವಾಗಲಿದ್ದು, ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಹೊರಗೆ ಮರಳು ಪೂರೈಸಲು ಅವಕಾಶವಿಲ್ಲ ಎಂವರು ತಿಳಿಸಿದ್ದಾರೆ.
ಮರಳನ್ನು ಸಾಗಾಟ ಮಾಡಲು ಇಚ್ಛಿಸುವವರು ತಮ್ಮ ವಾಹನಗಳನ್ನು ಉಡುಪಿ ಇ-ಸ್ಯಾಂಡ್ ಆ್ಯಪ್‌ನಲ್ಲಿ ನೊಂದಾಯಿಸಿಕೊಳ್ಳಲು ಈಗಾಗಲೇ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ, ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಉಡುಪಿ ಜಿಲ್ಲೆ ದೂ.ಸಂ. 0820-2572333ನ್ನು ಸಂಪರ್ಕಿಸಬಹುದು ಎಂದವರು ತಿಳಿಸಿದ್ದಾರೆ.
ಡಿ.1ರಿಂದ ಫಾಸ್ಟ್ಯಾಗ್ ಕಡ್ಡಾಯ
ದೇಶದಾದ್ಯಂತ ಡಿ. 1ರಿಂದ ಎಲ್ಲ ಹೆದ್ದಾರಿ ಟೋಲ್‌ಗಳಲ್ಲಿ ಕಡ್ಡಾಯ ಫಾಸ್ಟಾಗ್ ಅಳವಡಿಕೆಗೆ ಕೇಂದ್ರ ಸರಕಾರ ಆದೇಶ ಹೊರಡಿಸಿದ್ದು, ಎಲ್ಲ ವಾಹನಗಳ ಮಾಲಕರು ವಾಹನಗಳಿಗೆ ಫಾಸ್ಟಾಗ್ ಕಡ್ಡಾಯವಾಗಿ ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಫಾಸ್ಟಾಗ್ ಇರದ ವಾಹನಗಳು ನಿಗದಿತ ಶುಲ್ಕದ ಎರಡು ಪಟ್ಟು ನೀಡಬೇಕಾಗುತ್ತದೆ ಎಂದು ತಿಳಿಸಿದ ಡಿಸಿ, ಫಾಸ್ಟಾಗ್ ಸೌಲಭ್ಯವನ್ನು ಎಲ್ಲ ಟೋಲ್‌ಗಳಲ್ಲಿ ಮತ್ತು ಸಂಬಂಧಿಸಿದ ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್‌ಗಳಲ್ಲಿ ಪಡೆಯಬಹುದಾಗಿದೆ ಎಂದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಆರ್‌ಟಿಒ ರಾಮಕೃಷ್ಣ ರೈ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ರಮೇಶ್ ಬಾಬು, ನವಯುಗದ ಶಿವಪ್ರಸಾದ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.