ಚಾರ್ಮಾಡಿ ಘಾಟಿ ಮಿನಿ ಬಸ್ ಪ್ರಾಯೋಗಿಕ ಸಂಚಾರ
Team Udayavani, Nov 21, 2019, 4:12 AM IST
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಸಂಜೆ ಮಿನಿ ಬಸ್ ಪ್ರಾಯೋಗಿಕ ಸಂಚಾರ ನಡೆಸಿತು. ಕೊಟ್ಟಿಗೆಹಾರದಿಂದ ಚಾರ್ಮಾಡಿ ಗ್ರಾಮದವರೆಗೂ ಮಿನಿ ಬಸ್ ಸಂಚರಿಸಿದ್ದು, ಕಡಿದಾದ ತಿರುವುಗಳಿರುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಸುಗಮ ಬಸ್ ಸಂಚಾರ ಸಾಧ್ಯವೇ ಎಂಬುದನ್ನು ವಿವಿಧ ಇಲಾಖೆಗಳ ಅಧಿಕಾರಿಗಳು ಪರೀಕ್ಷಿಸಿದರು.
ಆಗಸ್ಟ್‌ನ ಭಾರೀ ಮಳೆಯಿಂದ ಚಾರ್ಮಾಡಿಯ ಕೆಲವು ತಿರುವುಗಳಲ್ಲಿ ಗುಡ್ಡ ಕುಸಿತವಾಗಿತ್ತು. ಕೆಲವು ಕಡೆಗಳಲ್ಲಿ ರಸ್ತೆ ಕುಸಿದಿತ್ತು. ಒಂದು ತಿಂಗಳ ಕಾಲ ಎಲ್ಲ ವಾಹನ ಸಂಚಾರ ಸ್ಥಗಿತಗೊಳಿಸಿ ತಾತ್ಕಾಲಿಕ ದುರಸ್ತಿ ನಡೆಸಿದ ಬಳಿಕ ಹಗಲು ಮಾತ್ರ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಬಸ್ ಸಂಚಾರ ಇಲ್ಲದೆ ವಿದ್ಯಾರ್ಥಿಗಳು ಮತ್ತು ನಿತ್ಯ ಪ್ರಯಾಣಿಸುವ ಪ್ರಯಾಣಿಕರಿಗೆ ತೊಂದರೆಯಾಗಿದ್ದು, ಮಿನಿ ಬಸ್ ಸಂಚಾರಕ್ಕೆ ಮನವಿ ಮಾಡಿದ್ದರು.
ಮಿನಿ ಬಸ್ ಸಂಚಾರಕ್ಕೆ ರಸ್ತೆ ಸುರಕ್ಷಿತವಾಗಿದ್ದು, ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು. ಚಾರ್ಮಾಡಿ ಘಾಟಿಯಲ್ಲಿ ಮಿನಿ ಬಸ್ ಸಂಚಾರ ಆರಂಭಿಸುವ ಬಗ್ಗೆ ಮೇಲಧಿಕಾರಿಗಳು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಶಿವಮೊಗ್ಗ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್, ಕೆಎಸ್ಸಾರ್ಟಿಸಿ ಮತ್ತು ರಾ.ಹೆ. ಪ್ರಾಧಿಕಾರದವರಿಗೆ ಮಿನಿಬಸ್ ಓಡಿಸಿ ವರದಿ ಸಲ್ಲಿಸುವಂತೆ ತಿಳಿಸಲಾಗಿತ್ತು. ಅವರ ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.