ಶತಮಾನೋತ್ಸವದ ಸಂಭ್ರಮದಲ್ಲಿ ಕಾಪು ಕಡಲ ತಡಿಯ ಪ್ರಥಮ ಶಾಲೆ

ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

Team Udayavani, Nov 22, 2019, 5:15 AM IST

1911KPE8A

19ನೆಯ ಶತಮಾನದ ಉತ್ತರಾರ್ಧದಲ್ಲಿ ಬ್ರಿಟಿಷ್‌ ಆಡಳಿತದಡಿ, ಊರ ಹಿರಿಯರ ಮುತುವರ್ಜಿಯಲ್ಲಿ ಸ್ಥಾಪನೆಗೊಂಡು ಈಗಲೂ ವಿದ್ಯೆಯ ಬೆಳಕನ್ನು ಪಸರಿಸುತ್ತಿರುವ ಹಲವು ಸರಕಾರಿ ಶಾಲೆಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ಈಗಿನ ಆಂಗ್ಲ ಮಾಧ್ಯಮ ಶಿಕ್ಷಣದ ಆಕರ್ಷಣೆಯ ನಡುವೆ ಈ ಶಾಲೆಗಳು ಸುತ್ತಮುತ್ತಲಿನ ಊರುಗಳಿಗೆ ಅಕ್ಷರಶಃ ಜ್ಞಾನ ದೇಗುಲಗಳೇ ಆಗಿವೆ. ಇಂತಹ ಶತಮಾನದ ಹಿರಿಮೆಯ ಕನ್ನಡ ಮಾಧ್ಯಮ ಶಾಲೆಗಳನ್ನು ಗುರುತಿಸಿ ಪರಿಚಯಿಸುವ ಪ್ರಯತ್ನ ನಮ್ಮದು.

ಕಾಪು: ಕಡಲ ತಡಿಯ ಮಕ್ಕಳನ್ನು ಸುಶಿಕ್ಷಿತರನ್ನಾಗಿಸುವ ಸದುದ್ದೇಶದೊಂದಿಗೆ ಪೊಲಿಪು ಮೊಗವೀರ ಮಹಾಸಭಾದ ಉತ್ಸಾಹಿ ಮುಂದಾಳುಗಳು ಒಟ್ಟುಗೂಡಿ 1918ರಲ್ಲಿ ಹುಲ್ಲು ಛಾವಣಿಯ ಮಾಡಿನಡಿಯಲ್ಲಿ ಪ್ರಾರಂಭಿಸಿದ ಪೊಲಿಪು ಫಿಷರೀಸ್‌ ಶಾಲೆ ನೂರರ ಸಂಭ್ರಮದಲ್ಲಿದೆ.

ಕಾಪು ಕಡಲ ತಡಿಯಡಿಯಲ್ಲಿ ಪ್ರಾರಂಭಗೊಂಡ ಪೊಲಿಪು ಫಿಷರೀಶ್‌ ಸ್ಕೂಲ್‌ ಪ್ರಸ್ತುತ ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಾಗಿದೆ. ಪೊಲಿಪು ಕರಾವಳಿಯ ಮೀನು ಸಂಸ್ಕರಣಾ ಹುಲ್ಲು ಛಾವಣಿಯ ಮಾಡಿನಡಿಯಲ್ಲಿ ಮರಳಿನ ಮೇಲೆ ಸಾವಿರಾರು ಮಂದಿಗೆ ಅಕ್ಷರಾಭ್ಯಾಸವನ್ನು ನೀಡಿದ ಶಾಲೆ ಪ್ರಾರಂಭದ 2-3 ದಶಕಗಳವರೆಗೂ ಅದೇ ಹಳೇ ಮಾದರಿಯ ವ್ಯವಸ್ಥೆಗೆ ಅಂಟಿಕೊಂಡಿತ್ತು. ಬಳಿಕ ಹಂತ ಹಂತವಾಗಿ ಮೇಲ್ದರ್ಜೆಗೇರುತ್ತಾ ಬಂದ ಶಾಲೆಯು ಪ್ರಸ್ತುತ ಸುಸಜ್ಜಿತ ಶಾಲೆಯಾಗಿ ಬೆಳೆದು ನಿಂತಿದೆ. ಕಿರಿಯ ಪ್ರಾಥಮಿಕ ಶಿಕ್ಷಣಕ್ಕೆ ಸೀಮಿತವಾಗಿದ್ದ ಪೊಲಿಪು ಫಿಷರೀಸ್‌ ಸ್ಕೂಲ್‌ 1949ರಲ್ಲಿ ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಾಗಿ ಮೇಲ್ದರ್ಜೆಗೇರಿತು. ಬಳಿಕ 1957ರಲ್ಲಿ ಮಿಡ್ಲ್ ಸ್ಕೂಲ್‌ ಆಗಿ ಪರಿವರ್ತನೆಗೊಂಡು, ನಂತರ ಪ್ರೌಢಶಾಲೆಯಾಗಿ, ಪ್ರಸ್ತುತ ಪದವಿ ಪೂರ್ವ ಕಾಲೇಜಿನ ವ್ಯವಸ್ಥೆಯೊಂದಿಗೆ ಮುನ್ನಡೆಯುತ್ತಿದೆ. 1918ರಲ್ಲಿ ಪ್ರಾರಂಭಗೊಂಡ ಈ ಶಾಲೆಯು 2019ರಲ್ಲಿ ಶತಮಾನೋತ್ಸವವನ್ನು ಆಚರಿಸುತ್ತಿದೆ.

ಪಬ್ಲಿಕ್‌ ಸ್ಕೂಲ್‌ ಪ್ರಾರಂಭಿಸುವ ಭರವಸೆ
ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ 23ಕ್ಕೆ ಇಳಿದಾಗ, ಒಂದನೇ ತರಗತಿಗೆ ಮಕ್ಕಳ ದಾಖಲಾತಿಯೇ ಆಗದ ಸಂದರ್ಭ ಆಂಗ್ಲ ಮಾಧ್ಯಮ ತರಗತಿಯನ್ನು ಪ್ರಾರಂಭಿಸಲು ಮುಂದಾದ ಊರಿನವರು ಗೌರವ ಶಿಕ್ಷಕಿಯರನ್ನು ನೇಮಿಸಿಕೊಂಡು ಆಂಗ್ಲ ಮಾಧ್ಯಮ ಶಿಕ್ಷಣವನ್ನು ನೀಡಲು ಪ್ರಾರಂಭಿಸಿದ್ದಾರೆ. ಈ ಕಾರಣದಿಂದ ಸಂಸ್ಥೆಯ ವಿದ್ಯಾರ್ಥಿಗಳ ಸಂಖ್ಯೆ 100 ದಾಟಿದ್ದು, ಮುಂದಿನ ವರ್ಷದಿಂದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ್ನು ಪ್ರಾರಂಭಿಸುವ ಭರವಸೆಯನ್ನು ಶಾಸಕ ಲಾಲಾಜಿ ಆರ್‌. ಮೆಂಡನ್‌ ಅವರು ಸಮಿತಿಗೆ ನೀಡಿದ್ದಾರೆ.

ಶತ,ವಜ್ರ,ಸುವರ್ಣ ಸಂಭ್ರಮ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ, ಪ್ರೌಢಶಾಲೆಯ ವಜ್ರ ಮಹೋತ್ಸವ ಮತ್ತು ಪದವಿ ಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಸಂಭ್ರಮಾಚರಣೆಯು 2019-20ರಲ್ಲಿ ಏಕ ಕಾಲದಲ್ಲಿ ನಡೆಯಲಿದೆ. ಶಾಸಕ ಲಾಲಾಜಿ ಆರ್‌. ಮೆಂಡನ್‌ ಮತ್ತು ಅನಿವಾಸಿ ಭಾರತೀಯ ಉದ್ಯಮಿ ಡಾ| ಬಿ.ಆರ್‌. ಶೆಟ್ಟಿ ಗೌರವಾಧ್ಯಕ್ಷರಾಗಿ, ಸರ್ವೋತ್ತಮ್‌ ಕುಂದರ್‌ ಅಧ್ಯಕ್ಷರಾಗಿರುವ ಶತ, ವಜ್ರ, ಸುವರ್ಣ ಸಂಭ್ರಮ ಸಮಿತಿಯು ಮಹೋತ್ಸವ ಆಚರಣೆಗೆ ಸಿದ್ಧತೆಗಳನ್ನು ನಡೆಸುತ್ತಿವೆ.

ಸುಮಾರು 2.05 ಎಕ್ರೆ ಜಮೀನಿನಲ್ಲಿ ವಿಸ್ತಾರವಾಗಿ ಹಬ್ಬಿರುವ ಪ್ರಾಥಮಿಕ ಶಾಲೆಯ ಆವರಣದಲ್ಲಿ 3 ಕಟ್ಟಡಗಳಿವೆ. ಸಂಸ್ಥೆಯ ಹಳೆ ವಿದ್ಯಾರ್ಥಿ ಬಿ.ಆರ್‌. ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘ ಪೊಲಿಪು ಮತ್ತು ಮುಂಬೈ ಶಾಖೆ, ಮೊಗವೀರ ಮಹಾಸಭಾ ಪೊಲಿಪು ಮತ್ತು ಮುಂಬಯಿ ಶಾಖೆ ಹಾಗೂ ಆಂಗ್ಲ ಮಾಧ್ಯಮ ವಿಭಾಗ ಉಸ್ತುವಾರಿ ಕಮಿಟಿಗಳ ಸಹಕಾರದಿಂದ ಹಲವಾರು ವ್ಯವಸ್ಥೆಗಳು ಶಾಲೆಗೆ ದೊರೆತಿವೆ.

ಹೆಮ್ಮೆಯ ಶಿಕ್ಷಕರು-ಹಳೆ ವಿದ್ಯಾರ್ಥಿಗಳು
ದೇಜು ಮಾಸ್ಟರ್‌ ಉಚ್ಚಿಲ ಸಂಸ್ಥೆಯ ಸ್ಥಾಪಕ ಮುಖ್ಯೋಪಾಧ್ಯಾಯರಾಗಿ ಅವರ ನಂತರದಲ್ಲಿ ಬಂದ ಬಾವುಗುತ್ತು ಜಿನರಾಜ್‌ ಶೆಟ್ಟಿ ಅವರು ಮುಖ್ಯೋಪಾಧ್ಯಾಯ ರಾಗಿದ್ದಾಗ ಸಂಸ್ಥೆಯು ತನ್ನ ಸುವರ್ಣ ಮತ್ತು ವರದ ಮಹೋತ್ಸವವನ್ನು ಆಚರಿಸಿದೆ. ಅನಿವಾಸಿ ಭಾರತೀಯ ಉದ್ಯಮಿ ಡಾ| ಬಿ. ಆರ್‌. ಶೆಟ್ಟಿ, ಸರ್ಜನ್‌ ಡಾ| ಸದಾನಂದ ಶೆಟ್ಟಿ, ನಿವೃತ್ತ ಪೈಲಟ್‌ ಭಾಸ್ಕರ್‌ ಶೆಟ್ಟಿ ಸಹಿತ ನೂರಾರು ಸಾಧಕ ವಿದ್ಯಾರ್ಥಿಗಳು ಶಾಲೆಯ ಹೆಮ್ಮೆಯ ಹಳೆ ವಿದ್ಯಾರ್ಥಿಗಳಾಗಿದ್ದಾರೆ.

ಕುಟೀರ ಮಾದರಿಯ ಶಾಲೆಯಲ್ಲಿ ಕುಳಿತು ಕಷ್ಟದ ಸಂದರ್ಭದಲ್ಲಿ ಶಿಕ್ಷಣ ಪಡೆದ ಕಾರಣ ನಾವು ಇಷ್ಟು ಎತ್ತರಕ್ಕೆ ಏರುವಂತಾಗಿದೆ. ಶಾಲೆಯ ಸ್ಥಾಪನೆ ಮತ್ತು ಬೆಳವಣಿಗೆಯಲ್ಲಿ ಮೊಗವೀರ ಸಮುದಾಯದವರ ಕೊಡುಗೆ ಸ್ಮರಣೀಯವಾಗಿದ್ದು, ಶತಮಾನೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪೂರ್ಣ ರೀತಿಯ ಸಹಕಾರ ನೀಡುವ ಭರವಸೆ ನೀಡಿದ್ದೇನೆ.
-ಡಾ| ಬಿ.ಆರ್‌. ಶೆಟ್ಟಿ ,
ಹಳೆ ವಿದ್ಯಾರ್ಥಿ,ಅನಿವಾಸಿ ಭಾರತೀಯ ಉದ್ಯಮಿ

ಸ್ಥಳೀಯರ ಸಹಕಾರ, ಬೆಂಬಲ ಮತ್ತು ಪ್ರೋತ್ಸಾಹದೊಂದಿಗೆ ಶಾಲೆ ಉತ್ತಮವಾಗಿ ಮುನ್ನಡೆಯುತ್ತಿದೆ. ಆಂಗ್ಲ ಮಾಧ್ಯಮ ತರಗತಿಯನ್ನು ಪ್ರಾರಂಭಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆಯನ್ನು ಉಳಿಸಲು ಪ್ರೋತ್ಸಾಹ ನೀಡಿದ್ದಾರೆ.
-ಎಚ್‌. ಎಸ್‌. ಅನಸೂಯ,
ಮುಖ್ಯೋಪಾಧ್ಯಾಯಿನಿ

 -ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.