ಅನಧಿಕೃತ ಪಬ್‌, ಬಾರ್‌ ವಿರುದ್ಧ ಕ್ರಮಕ್ಕೆ ಹೈಕೋರ್ಟ್‌ ಆದೇಶ


Team Udayavani, Nov 22, 2019, 10:21 AM IST

bng-tdy-4

ಬೆಂಗಳೂರು: ಸಾರ್ವಜನಿಕ ಮನರಂಜನಾ ತಾಣಗಳ (ಬೆಂಗಳೂರು ನಗರ) ನಿಯಂತ್ರಣ ಮತ್ತು ಪರವಾನಗಿ ನಿಯಮ 2005ರ ಅಡಿಯಲ್ಲಿ ಪರವಾನಗಿ ಪಡೆಯದ ಪಬ್‌ ಮತ್ತು ಬಾರ್‌ಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸುವಂತೆ ಹೈಕೋರ್ಟ್‌ ಗುರುವಾರ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿತು.

ಇಂದಿರಾನಗರ ಪ್ರದೇಶದಲ್ಲಿ ಮಿತಿ ಮೀರಿದ ಶಬ್ದ ಮಾಲಿನ್ಯವಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಹಾಗೂ ನ್ಯಾ.ಪ್ರದೀಪ್‌ ಸಿಂಗ್‌ ಯೆರೂರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ನಗರದಲ್ಲಿ ಸಾರ್ವಜನಿಕ ಮನರಂಜನಾ ತಾಣಗಳ(ಬೆಂಗಳೂರು ನಗರ) ನಿಯಂತ್ರಣ ಮತ್ತು ಪರವಾನಗಿ ನಿಯಮ 2005ರ ಪಾಲನೆ ಆಗುತ್ತಿಲ್ಲ. ಸರ್ಕಾರ ಮತ್ತು ಪೊಲೀಸರು ಆ ನಿಯಮ ಕಟ್ಟುನಿಟ್ಟಾಗಿ ಜಾರಿಗೊಳಿಸಿಲ್ಲ. ಪರಿಣಾಮವಾಗಿ ಪಬ್‌ ಹಾಗೂ ಬಾರ್‌ಗಳಲ್ಲಿ ಮಧ್ಯರಾತ್ರಿಯೂ ಏರುಧ್ವನಿಯ ಸಂಗೀತ ಕೇಳಿಬರುತ್ತದೆ. ಇದರಿಂದ ಸುತ್ತಮುತ್ತಲ ನಿವಾಸಿಗಳಿಗೆ ತೀವ್ರ ತೊಂದರೆ ಆಗುತ್ತಿದೆ ಎಂದರು.

ಆಗ, 2005ರ ನಿಯಮ ಜಾರಿಗೆ ಏನೇನು ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಹಾಗೂ ನಿಯಮಗಳಡಿ ಪರವಾನಗಿ ಪಡೆಯದ ಪಬ್‌ ಮತ್ತು ಬಾರ್‌ಗಳ ವಿರುದ್ಧ ಕ್ರಮ ಕೈಗೊಂಡು ಅದರ ವಿವರಗಳನ್ನು ಸಲ್ಲಿಸಬೇಕು ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತು. ಇದೇ ವೇಳೆ ಶಬ್ದ ಮಾಲಿನ್ಯ ಮಾಪಕಗಳನ್ನು ಖರೀದಿಸದ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.

ನಿಶ್ಯಬ್ದ ವಲಯ ಘೋಷಣೆ: ಹೈಕೋರ್ಟ್‌ನ ಹಿಂದಿನ ಆದೇಶದಂತೆ ರಾಜ್ಯದಲ್ಲಿ ನಿಶ್ಯಬ್ದ ವಲಯಗಳನ್ನು ಘೋಷಣೆ ಮಾಡಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸರ್ಕಾರದ ಪರ ವಕೀಲರಾದ ವೈ. ಎಚ್‌. ವಿಜಯ್‌ ಕುಮಾರ್‌ ನ್ಯಾಯಪೀಠಕ್ಕೆ ತಿಳಿಸಿದರು. ಅದಕ್ಕೆ ನ್ಯಾಯಪೀಠ, ಹಾಗಿದ್ದರೆ ಅಧಿಸೂಚನೆ ಪ್ರತಿ ಹಾಗೂ ಪೂರ್ಣ ವಿವರಗಳನ್ನು ನೀಡಿ ಎಂದು ಸೂಚಿಸಿತು.

ಟಾಪ್ ನ್ಯೂಸ್

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.