‘ಗೌಡರು ಈಗ ಪಕ್ಷದಲ್ಲಿ ಗೊಬ್ಬರವಾಗಿದ್ದಾರೆ’ ಎಂದು ಸಿದ್ಧರಾಮಯ್ಯ ಹೀಯಾಳಿಸಿದ್ದು ಯಾರನ್ನು?
‘ಸ್ವಪಕ್ಷೀಯರ ರಕ್ತ ಹೀರಿದ ಪಿ.ಎಫ್.ಐ.ನ ಸಮರ್ಥಕ ನೀವಲ್ಲವೇ?’ ಎಂದು ಸಿದ್ಧು ಛೇಡಿಸಿದ ಸದಾನಂದ ಗೌಡ
Team Udayavani, Nov 22, 2019, 3:44 PM IST
ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕಾವು ಜೋರಾಗಿರುವಂತೆ ಮೂರೂ ಪಕ್ಷಗಳ ನಾಯಕರ ನಡುವಿನ ಆರೋಪ ಪ್ರತ್ಯಾರೋಪಗಳೂ ಸಹ ಜೋರಾಗಿಯೇ ನಡೆಯುತ್ತಿದೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನಾಯಕರು ಪ್ರಮುಖವಾಗಿ ಸಿದ್ಧರಾಮಯ್ಯನವರನ್ನೇ ಗುರಿಯಾಗಿಸಿಕೊಂಡು ಟೀಕೆಗಳನ್ನು ಮಾಡುತ್ತಿದ್ದಾರೆ. ಇತ್ತ ಮಾಜೀ ಮುಖ್ಯಮಂತ್ರಿ ಸಿದ್ಧರಾಮಯ್ಯನವರೂ ಸಹ ತಾವು ಹೋದ ಕಡೆಗಳಲ್ಲೆಲ್ಲಾ ಬಿಜೆಪಿ ರಾಜ್ಯ ನಾಯಕರನ್ನು ಮತ್ತು ಅನರ್ಹ ಶಾಸಕರನ್ನು ಗುರಿಯಾಗಿಸಿ ತಮ್ಮ ವಾಗ್ದಾಳಿಯನ್ನು ನಡೆಸುತ್ತಿದ್ದಾರೆ.
ವೃಕ್ಷಕೆಲ್ಲಿಯದು ಹೂವಿನ ಹಬ್ಬ? ಗೊಬ್ಬರದ
ಜೀವವನೆ ಹೀರಿ ಕೊಬ್ಬಿಹ ಹೂವೆ, ಕಬ್ಬಕ್ಕೆ
ನೀಂ ಮಾತ್ರ ವಸ್ತುವೇಂ? ನಿನ್ನಂತೆ ಗೊಬ್ಬರಂ
ಕಬ್ಬಕ್ಕೆ ಸಾಮಗ್ರಿಯಾಗಬಾರದೆ ಹೇಳು?
ಹಳಿಯದಿರೊ;
ಇಂದೊ ನಾಳೆಯೊ ನೀನು ಕೆಳಗುರುಳಿ
ಗೊಬ್ಬರದೊಳೊಂದಾಗುವಾ ಮುಂದೆ ಕಾದಿಹುದು – ಕುವೆಂಪು @siddaramaiah— Sadananda Gowda (@DVSadanandGowda) November 22, 2019
ಶುಕ್ರವಾರದಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಮತ್ತು ಸಿದ್ಧರಾಮಯ್ಯ ಅವರ ನಡುವೆ ಟ್ವೀಟ್ ವಾರ್ ನಡೆದಿದೆ. ಇದಕ್ಕೆ ಕಾರಣವಾಗಿದ್ದು ಸದಾನಂದ ಗೌಡ ಅವರು ತಮ್ಮ ಟ್ವೀಟ್ ಒಂದರಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪದ್ಯದ ಸಾಲೊಂದನ್ನು ಬರೆದುಕೊಂಡು ‘ಗೊಬ್ಬರವನ್ನು ಹೀಯಾಳಿಸುವ ಮೂಲಕ ನೀವು ರೈತರನ್ನು ಕೇವಲವಾಗಿ ಕಂಡಿದ್ದೀರಿ. ಪ್ರಚಾರಕ್ಕಾಗಿ ದಿನಕ್ಕೊಂದು ಹೇಳಿಕೆ ನೀಡುವುದು ಸಮತೋಲನವಿಲ್ಲದೆ ತಮ್ಮ ಮನಸ್ಥಿತಿಯನ್ನು ತೋರಿಸುತ್ತದೆ’ ಎಂದು ಸಿದ್ಧರಾಮಯ್ಯನವರನ್ನು ಟೀಕಿಸಿದ್ದರು.
ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿರುವ ಸಿದ್ಧರಾಮಯ್ಯನವರು ಪಕ್ಷದಲ್ಲಿ ಸದಾನಂದ ಗೌಡ ಅವರು ಪ್ರಸ್ತುತ ತಲುಪಿರುವ ಸ್ಥಿತಿಯನ್ನು ಅಣಕವಾಡಿದ್ದಾರೆ. ‘ಮೊದಲು ಮುಖ್ಯಮಂತ್ರಿ ಸ್ಥಾನದಿಂದ ನಂತರ ರೈಲ್ವೇ, ಕಾನೂನು, ಅಂಕಿ-ಅಂಶ ಹೀಗೆ ಎಲ್ಲಾ ಕಡೆಗಳಲ್ಲಿಯೂ ತಿರಸ್ಕೃತಗೊಂಡ ಗೌಡರು ಈಗ ಪಕ್ಷದಲ್ಲಿ ಗೊಬ್ಬರವಾಗಿ ಹೋಗಿದ್ದಾರೆ. ಈ ಹತಾಶೆ ಅವರಿಂದ ಇಂತಹ ಹೇಳಿಕೆಗಳನ್ನು ಹೊರಡಿಸುತ್ತಿದೆ’ ಎಂದು ಅಣಕವಾಡಿದ್ದಾರೆ.
ವೃಕ್ಷಕೆಲ್ಲಿಯದು ಹೂವಿನ ಹಬ್ಬ? ಗೊಬ್ಬರದ
ಜೀವವನೆ ಹೀರಿ ಕೊಬ್ಬಿಹ ಹೂವೆ, ಕಬ್ಬಕ್ಕೆ
ನೀಂ ಮಾತ್ರ ವಸ್ತುವೇಂ? ನಿನ್ನಂತೆ ಗೊಬ್ಬರಂ
ಕಬ್ಬಕ್ಕೆ ಸಾಮಗ್ರಿಯಾಗಬಾರದೆ ಹೇಳು? (1/2) https://t.co/SHK191TCtI— Sadananda Gowda (@DVSadanandGowda) November 22, 2019
ಇದಕ್ಕೆ ಮತ್ತೆ ಪ್ರತ್ಯುತ್ತರ ನೀಡಿರುವ ಸದಾನಂದ ಗೌಡರು ಮತ್ತೆ ಕುವೆಂಪು ಅವರ ಪದ್ಯದ ಸಾಲನ್ನು ಉಲ್ಲೇಖಿಸಿ ‘ನಾನು ಗೊಬ್ಬರ ಹೌದು, ಸ್ವಪಕ್ಷೀಯರ ರಕ್ತ ಹೀರಿದ ಪಿ.ಎಫ್.ಐ.ನ ಸಮರ್ಥಕ ನೀವಲ್ಲವೇ?’ ಎಂದು ಮತ್ತೆ ಸಿದ್ಧರಾಮಯ್ಯನವರ ಕಾಲೆಳೆದಿದ್ದಾರೆ.
ಒಟ್ಟಿನಲ್ಲಿ ರಾಜಕಾರಣಿಗಳಿಗೆ ಪರಸ್ಪರ ಕಾಲೆಳೆದುಕೊಳ್ಳಲು ರಸಋಷಿ ಕುವೆಂಪು ಅವರ ಪದ್ಯದ ಸಾಲುಗಳು ಪೂರಕವಾಗಿದ್ದು ಮಾತ್ರ ವಿಶೇಷವಾಗಿತ್ತು.
ಹಳಿಯದಿರೊ; ಇಂದೊ ನಾಳೆಯೊ ನೀನು ಕೆಳಗುರುಳಿ
ಗೊಬ್ಬರದೊಳೊಂದಾಗುವಾ ಮುಂದೆ ಕಾದಿಹುದು ಕುವೆಂಪು
ನಾನು ಗೊಬ್ಬರ ಹೌದು
ಸ್ವಪಕ್ಷೀಯರ ರಕ್ತ ಹೀರಿದ PFI ನ ಸಮರ್ಥಕ ನೀವಲ್ಲವೇ? (2/2)— Sadananda Gowda (@DVSadanandGowda) November 22, 2019
ನಾವು ತಿನ್ನುವ ಅನ್ನ ಗೊಬ್ಬರದಿಂದಲೇ.. ಗೊಬ್ಬರವನ್ನು ಹೀಯಾಳಿಸುವ ಮೂಲಕ ರೈತರನ್ನು ಕೇವಲವಾಗಿ ಕಂಡಿದ್ದೀರಿ. ಪ್ರಚಾರಕ್ಕಾಗಿ ದಿನಕ್ಕೊಂದು ಹೇಳಿಕೆ ನೀಡುವುದು ಸಮತೋಲನವಿಲ್ಲದ ತಮ್ಮ ಮನಸ್ಥಿತಿಯನ್ನು ತೋರಿಸುತ್ತದೆ. @siddaramaiah
— Sadananda Gowda (@DVSadanandGowda) November 22, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.