ಪಾರಂಪರಿಕ ಕಟ್ಟಡ- ಸ್ಮಾರಕ ರಕ್ಷಿಸಿ: ಪ್ರಕಾಶ್
Team Udayavani, Nov 22, 2019, 6:04 PM IST
ಶಿವಮೊಗ್ಗ: ಪಾರಂಪರಿಕ ಕಟ್ಟಡ, ಸ್ಮಾರಕಗಳನ್ನು ಉಳಿಸಿ ಕಾಪಾಡುವ ಬಗ್ಗೆ ಮತ್ತು ಅದರ ಕುರಿತು ವಿಶೇಷ ಅಧ್ಯಯನವನ್ನು ವಿದ್ಯಾರ್ಥಿಗಳು ಆಸಕ್ತಿಯಿಂದ ಮಾಡಿದರೆ, ಗತ ಇತಿಹಾಸದ ಮೇಲೆ ಹೊಸ ಬೆಳಕು ಚೆಲ್ಲಲು ಸಾಧ್ಯ ಎಂದು ಸಹ್ಯಾದ್ರಿ ಪಾರಂಪರಿಕ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಉಪ ವಿಭಾಗಾಧಿ ಕಾರಿ ಟಿ.ವಿ. ಪ್ರಕಾಶ್ ಹೇಳಿದರು.
ಶಿವಪ್ಪ ನಾಯಕ ಅರಮನೆಯಲ್ಲಿ ವಿಶ್ವಪಾರಂಪರಿಕ ಸಪ್ತಾಹ ಹಾಗೂ ತಾಳಗುಂದ ಸಿಂಹ ಶಾಸನ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಪರಂಪರೆಯನ್ನು ಕಾಪಾಡುವುದು ಮತ್ತು ಈ ಮೂಲಕ ಇತಿಹಾಸವನ್ನು ಉಳಿಸುವುದು ಇಂದಿನ ಅಗತ್ಯ. ರಾಜ-ಮಹಾರಾಜರ ಮತ್ತು ಅವರ ಕಾಲದ ಬಗ್ಗೆ ಹೊಸ ವಿಷಯಗಳ ಗ್ರಹಿಕೆ ಇದರಿಂದ ಸಾಧ್ಯ. ಉತ್ಖನನ ಮತ್ತು ಸಂಶೋಧನೆಯ ಮೂಲಕ ಇತಿಹಾಸ ಉಳಿದುಕೊಂಡಿದೆ ಎಂದರು.
ಇತ್ತೀಚಿನ ವರ್ಷಗಳಲ್ಲಿ ಹೊಸ ವಿಚಾರಗಳು ಇತಿಹಾಸದ ಮೇಲೆ ಬೆಳಕು ಚೆಲ್ಲುತ್ತಿವೆ. ಇದಕ್ಕೆ ಇತಿಹಾಸಕಾರರು ಸಂಶೋಧನೆ ನಡೆಸುತ್ತಿರುವುದೇ ಕಾರಣ. ಚಿತ್ರದುರ್ಗ, ನಗರ, ಮೈಸೂರು, ಬೇಲೂರು ಮೊದಲಾದೆಡೆ ಇರುವ ಶಿಲ್ಪಗಳು ಮತ್ತು ಶಾಸನಗಳು ಮತ್ತು ಕಟ್ಟಡಗಳು ಹೊಸ ವಿಚಾರಗಳನ್ನು ಇಂದಿಗೂ ಹೊರಗೆಡಹುತ್ತಿವೆ ಎಂದ ಅವರು, ಕೆತ್ತನೆ, ಶಿಲ್ಪ ಮತ್ತು ಕಟ್ಟಡಗಳನ್ನು ಉಳಿಸುವ ಕೆಲಸ ಈಗ ನಡೆಯಬೇಕಿದೆ. ಸಾವಿರಾರು ವರ್ಷಗಳ ಹಿಂದಿನ ಈ ಪಾರಂಪರಿಕ ಕಟ್ಟಡಗಳು ಮತ್ತು ಸ್ಮಾರಕಗಳು ಇಂದು ಅಳಿವಿನ ಅಂಚಿನಲ್ಲಿವೆ. ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಹೆಚ್ಚಿನ ಆಸಕ್ತಿಯನ್ನು ನಮ್ಮ ಪರಂಪರೆಯ ರಕ್ಷಣೆಗೆ ನೀಡುತ್ತಿರುವುದು ಶ್ಲಾಘನೀಯ ಎಂದರು.
ಅತಿಥಿಗಳಾಗಿ ಕುವೆಂಪು ವಿವಿ ಇತಿಹಾಸ ವಿಭಾಗದ ನಿವೃತ್ತ ಪ್ರಾಧ್ಯಾಪಕ ರಾಜಾರಾಂ ಹೆಗಡೆ, ಶಾಂತಾರಾಮ್ ಸಾಮಕ್, ಕೆ.ಜಿ. ವೆಂಕಟೇಶ್, ಕಸ್ತೂರಬಾ ಕಾಲೇಜಿನ ಪ್ರಾಚಾರ್ಯ ಬಸವರಾಜ್, ಇತಿಹಾಸ ಸಂಶೋಧಕ ಅಜಯ್ ಶರ್ಮಾ ಮತ್ತಿತರರು ಇದ್ದರು. ಪ್ರಾಚ್ಯವಸ್ತು ಇಲಾಖೆಯ ಸಹಾಯಕ ನಿರ್ದೇಶಕ ಶೇಜೇಶ್ವರ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Manipal: ಅಪಘಾತ ತಡೆಯಲು ಹೀಗೆ ಮಾಡಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.