ಲಕ್ಷ್ಮೀ ಸೊಸೈಟಿ ಎದುರು ಧರಣಿ

ಠೇವಣಿ ಹಣ ವಾಪಸ್‌ಗೆ ಗ್ರಾಹಕರ ಆಗ್ರಹ18-20 ಕೋಟಿ ಬಾಕಿ ಅಂದಾಜು

Team Udayavani, Nov 23, 2019, 11:26 AM IST

23-November-3

ದಾವಣಗೆರೆ: ಠೇವಣಿ ಹಣ ವಾಪಸ್ಸಾತಿಗೆ ಒತ್ತಾಯಿಸಿ ಶುಕ್ರವಾರ ಲಕ್ಷ್ಮೀ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ ಠೇವಣಿದಾರರ ವೇದಿಕೆ ನೇತೃತ್ವದಲ್ಲಿ ಠೇವಣಿದಾರರು ಲಕ್ಷ್ಮೀ  ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ ಎದುರು ಧರಣಿ ನಡೆಸಿದರು.

ಕಳೆದ 35 ವರ್ಷದಿಂದ ನಡೆಯುತ್ತಿರುವ ಲಕ್ಷ್ಮೀ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಯಲ್ಲಿ 1,500 ರಿಂದ 1,600 ಠೇವಣಿದಾರರಿಗೆ 18 ರಿಂದ 20 ಕೋಟಿ ರೂಪಾಯಿಯಷ್ಟು ಹಣ ಬರಬೇಕಿದೆ. ಒಂದು ವರ್ಷದಿಂದ ಆಡಳಿತ ಮಂಡಳಿಯವರು ಹಣ ವಾಪಸ್‌ ಕೊಡುವುದಾಗಿಯೇ ಹೇಳುತ್ತಾ ಬರುತ್ತಿದ್ದರು. ಈಗ ಸೊಸೈಟಿ ಕಾರ್ಯದರ್ಶಿ ನಾಪತ್ತೆಯಾಗಿರುವುದ ನೋಡಿದರೆ ಹಣ ಬರುವುದು ಅನುಮಾನ ಆಗುತ್ತಿದೆ. ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಸೊಸೈಟಿ ದುಸ್ಥಿತಿಗೆ ಕಾರಣ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು.

2017-18ನೇ ಸಾಲಿನವರೆಗೆ ಸಾಮಾನ್ಯ ಸಭೆಯಲ್ಲಿ ಎಲ್ಲರಿಗೂ ಸೊಸೈಟಿ ಲಾಭದಲ್ಲಿದೆ ಎಂದೇ ಸುಳ್ಳು ಮಾಹಿತಿ ನೀಡಲಾಗಿದೆ. ಸುಳ್ಳು ಮಾಹಿತಿ ನಂಬಿದಂತಹ ಅನೇಕರು ಹಣ ಕೊಟ್ಟೇ ಕೊಡುತ್ತಾರೆ ಎಂದೇ ಸುಮ್ಮನಿದ್ದರು. ಈಗ ಹಣ ಕೇಳಿದರೆ ಹೆಣ್ಣು ಮಕ್ಕಳು ಎನ್ನುವುದನ್ನೂ ನೋಡದಂತೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಹಣ ಕೊಡಲಿಕ್ಕೆ ಆಗುವುದಿಲ್ಲ. ಅದೇನು ಮಾಡಿಕೊಳ್ಳುತ್ತೀರೋ ಮಾಡಿಕೊಳ್ಳಿ. ನಾವು ಯಾವುದಕ್ಕೂ ಹೆದರುವುದಿಲ್ಲ. ಎಲ್ಲವನ್ನೂ ನೋಡಿಕೊಳ್ಳುತ್ತೇವೆ ಎಂದು ದೂರಿದರು.

1,500 ರಿಂದ 1,600 ಠೇವಣಿದಾರರ ಠೇವಣಿಗಳ ಅವಧಿ ಮುಗಿದು 1 ರಿಂದ 2 ವರ್ಷ ಆಗಿವೆ. ಅಸಲು ಮತ್ತು ಬಡ್ಡಿ ಎಲ್ಲಾ ಸೇರಿದರೆ 18 ರಿಂದ 20 ಕೋಟಿ ರೂಪಾಯಿ ಕೊಡಬೇಕಾಗುತ್ತದೆ. ಸೊಸೈಟಿಗೆ 6-7 ಕೋಟಿ ಬರಬೇಕಿದೆ. ಇನ್ನುಳಿದ ಹಣಕ್ಕೆ ಏನು ಮಾಡುವರೋ ಗೊತ್ತಿಲ್ಲ. ಆಡಳಿತ ಮಂಡಳಿವರನ್ನು ಬಂಧಿಸಿ, ಅವರ ಆಸ್ತಿ ಎಲ್ಲವನ್ನೂ ಮಾರಾಟ ಮಾಡಿ, ಠೇವಣಿದಾರರಿಗೆ ಹಣ ನೀಡಬೇಕು ಎಂದು ಒತ್ತಾಯಿಸಿದರು.

ಠೇವಣಿದಾರರಿಗೆ ಹಣ ವಾಪಸ್‌ ನೀಡುತ್ತಿಲ್ಲ. ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಡಳಿತ, ಪೊಲೀಸ್‌, ಸಹಕಾರ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತಾದರೂ ಎಲ್ಲರೂ ಭರವಸೆ ನೀಡಿದ್ದರಿಂದ ಇಲ್ಲಿಯವರೆಗೆ ಕಾದೆವು. ಈಗ ಸೊಸೈಟಿ ಮುಳುಗಿದೆ. ಜಿಲ್ಲಾಡಳಿತ, ಸಂಬಂಧಿತರು ಸೂಕ್ತ ಕ್ರಮ ತೆಗೆದುಕೊಂಡು ಹಣ ವಾಪಸ್‌ ಕೊಡಿಸುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ವೇದಿಕೆ ಅಧ್ಯಕ್ಷ ಎನ್‌.ವಿ. ಬಂಡಿವಾಡ್‌, ಶಿವಯೋಗಿ ಬೂಸ್ನೂರ್‌, ಸಿ. ವೇದಮೂರ್ತಿ, ಉಮೇಶ್‌ ಗುಜ್ಜಾರ್‌, ಉಮಾಪತಿ, ಜಯದೇವಪ್ಪ ಇತರರು ಇದ್ದರು.

ಟಾಪ್ ನ್ಯೂಸ್

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.