ಗುಪ್ತಚರ ವರದಿಯಲ್ಲಿ ಬಿಜೆಪಿಗೆ ಹೆಚ್ಚು ಸೀಟು : ಸಚಿವ ಸಿ.ಟಿ.ರವಿ
Team Udayavani, Nov 23, 2019, 2:43 PM IST
ಚಿಕ್ಕಬಳ್ಳಾಪುರ: 15 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸೀಟು ಸಿಗಲಿದೆ ಎಂದು ಗುಪ್ತಚರ ವರದಿ ತಿಳಿಸಿದೆ ಎಂದುರಾಜ್ಯ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಚಿಕ್ಕಬಳ್ಳಾಪುರ ಹರ್ಷೋದಯ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪಕ್ಷದ ಚುನಾವಣೆ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ರಾಜ್ಯ ಮಟ್ಟದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವನ್ನು ತಡೆಯಲು ಪಿತೂರಿ ನಡೆದಿರಬಹುದು. ಆದರೆ ಕೆಳ ಹಂತದಲ್ಲಿ ಎಲ್ಲ ಪಕ್ಷಗಳ ಕಾರ್ಯಕರ್ತರು ಬಿಜೆಪಿ ಪರ ಇದ್ದಾರೆ ಎಂದರು. ನಿನ್ನೆ ಮೊನ್ನೆಯವರೆಗೂ ಅವರು ಕಾಂಗ್ರೆಸ್, ಜೆಡಿಎಸ್ ನಲ್ಲಿ ಇದ್ದಿರಬಹುದು, ಆದರೆ ಅವರು ಈಗ ಬಿಜೆಪಿ ಕುಟುಂಬಕ್ಕೆ ಸೇರಿದವರಾಗಿದ್ದಾರೆ.
ಆದ್ದರಿಂದ ಬಿಜೆಪಿ ಕಾರ್ಯಕರ್ತರು ನಾವು ಮೊದಲಿಂದ ಪಕ್ಷದದಲ್ಲಿ ಇದ್ದವರು ಎಂಬ ಮನೋಭಾವ ಬಿಟ್ಟು ಎಲ್ಲರನ್ನು ವಿಶ್ಚಾಸಕ್ಕೆ ತೆಗೆದುಕೊಂಡು ಹೋಗಬೇಕು, ಸಾಮಾನ್ಯ ಕಾರ್ಯಕರ್ತರನ್ನು ಜನ ನಾಯಕನಾಗಿ ಮಾಡುವ ಶಕ್ತಿ ಬಿಜೆಪಿಗೆ ಮಾತ್ರ ಇದೆ. ಯಾರಿಗೂ ಪಕ್ಷ ಆನ್ಯಾಯ ಮಾಡಲ್ಲ ಎಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಂಸದ ಮೋಹನ್, ಶಾಸಕರಾದ ವೈ.ಎ.ನಾರಾಯಣಸ್ವಾಮಿ, ಬೆಳ್ಳಿ ಪ್ರಕಾಶ್, ನಾಗೇಶ್ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.