ಗೆದ್ದ ಎಲ್ಲಾ ಶಾಸಕರಿಗೂ ಮಂತ್ರಿ ಭಾಗ್ಯ: ಸಿಎಂ ಯಡಿಯೂರಪ್ಪ
Team Udayavani, Nov 23, 2019, 3:45 PM IST
ಬೆಳಗಾವಿ: ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾದ ಶಾಸಕರ ಕ್ಷೇತ್ರಗಳಲ್ಲಿ ಚುನಾವಣೆ ಇದ್ದು, ಗೆದ್ದು ಬರುವ ಎಲ್ಲ ಶಾಸಕರಿಗೆ ಮಂತ್ರಿ ಭಾಗ್ಯ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಕಾಗವಾಡ ಕ್ಷೇತ್ರದ ಶಿರಗುಪ್ಪಿಯಲ್ಲಿ ಶನಿವಾರ ನಡೆದ ಬಿಜಡಪಿ ಸಮಾವೇಶ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಶಾಸಕರು ರಾಜೀನಾಮೆ ನೀಡಿದ್ದಕ್ಕಾಗಿ ನಾನು ಮುಖ್ಯಮಂತ್ರಿ ಆಗಿದ್ದೇನೆ. ಅವರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮದು. ಅವರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಲಾಗುವುದು. ಎಲ್ಲರನ್ನೂ ಮಂತ್ರಿ ಮಾಡಲಾಗುವುದು ಎಂದು ಹೇಳಿದರು.
ಎಲ್ಲ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಆಯ್ಕೆ ಆಗಲಿದ್ದಾರೆ ಎಂಬ ವಿಶ್ವಾಸ ಇದೆ. ಮೊದಲನೇ ಹಂತದ ಪ್ರಚಾರ ಬಳಿಕ ಎರಡನೇ ಹಂತದಲ್ಲಿ ಮತ್ತೆ ಬೆಳಗಾವಿ ಜಿಲ್ಲೆಗೆ ಆಗಮಿಸಲಾಗುವುದು ಎಂದರು.
ಈ ಹಿಂದಿನ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಈ ಭಾಗದಲ್ಲಿ ಬಸವೇಶ್ವರ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಹಿನ್ನೆಡೆಯಾಗಿದೆ. ಮುಂದಿನದಿನಗಳಲ್ಲಿ ಈ ಯೋಜನೆ ಪೂರ್ಣಗೊಳಿಸಲು ಪ್ರಯತ್ನ ಮಾಡಲಾಗುವುದು.
ಜಿಲ್ಲೆಯಲ್ಲಿ ನದಿಗಳ ಪ್ರವಾಹದಿಂದ ಮುಳುಗಡೆಯಾದ ಪ್ರದೇಶಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಅಗತ್ಯ ಭೂಮಿಯನ್ನು ಖರೀದಿಸಿ ನವ ನಿರ್ಮಾಣ ಮಾಡಿ ಸ್ಥಳಾಂತರಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.