ಜಿಲ್ಲೆಯಲ್ಲಿ ಈ ಬಾರಿ ಭತ್ತ ಬಂಪರ್‌ ಬೆಳೆ!


Team Udayavani, Nov 23, 2019, 4:21 PM IST

mandya-tdy-1

ಮಂಡ್ಯ: ಭತ್ತದ ಕಣಜ ಎಂದೇ ಪ್ರಸಿದ್ಧಿ ಪಡೆದಿರುವ ಮಂಡ್ಯ ಜಿಲ್ಲೆ ಈ ಬಾರಿ ಭತ್ತದಲ್ಲಿ ಬಂಪರ್‌ ಬೆಳೆ ಕಂಡಿದೆ. ಜಿಲ್ಲಾದ್ಯಂತ 4.23 ಲಕ್ಷ ಟನ್‌ ಭತ್ತದ ಉತ್ಪಾದನೆ ನಿರೀಕ್ಷಿಸಲಾಗಿದೆ. ಅದೇ ರೀತಿ ರಾಗಿ ಬೆಳೆಯೂ ಉತ್ತಮವಾಗಿದ್ದು 79,430 ಮೆಟ್ರಿಕ್‌ ಟನ್‌ ಉತ್ಪಾದನೆ ನಿರೀಕ್ಷಿಸಲಾಗಿದೆ.

2018-19ನೇ ಸಾಲಿಗೆ ಹೋಲಿಸಿದರೆ ಈ ಬಾರಿ ಭತ್ತದ ಬೆಳೆ ವಿಸ್ತೀರ್ಣ ಕಡಿಮೆಯಾಗಿದ್ದರೂ ಉತ್ಪಾದನೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ. ಕಳೆದ ಬಾರಿ ಜಿಲ್ಲೆಯಲ್ಲಿ 54,615 ಹೆಕ್ಟೇರ್‌ ಪ್ರದೇಶದಲ್ಲಿ ಪ್ರತಿ ಹೆಕ್ಟೇರ್‌ಗೆ 58 ಕ್ವಿಂಟಲ್‌ನಂತೆ ಕನಿಷ್ಠ 3.19 ಲಕ್ಷ ಮೆಟ್ರಿಕ್‌ ಟನ್‌ ಭತ್ತದ ಇಳುವರಿ ನಿರೀಕ್ಷಿಸಲಾಗಿತ್ತು. 2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 52,978 ಹೆಕ್ಟೇರ್‌ನಲ್ಲಿ ಭತ್ತ ಬೆಳೆದಿದ್ದು 4,23,824 ಟನ್‌ ಭತ್ತದ ಉತ್ಪಾದನೆ ನಿರೀಕ್ಷಿಸಲಾಗಿದೆ.

1.04 ಲಕ್ಷ ಟನ್‌ ಹೆಚ್ಚು ಉತ್ಪಾದನೆ ನಿರೀಕ್ಷೆ: ಹಿಂದಿನ ಸಾಲಿಗೆ ಹೋಲಿಸಿದರೆ ಭತ್ತದ ಬೆಳೆ ವಿಸ್ತೀರ್ಣದಲ್ಲಿ 1697 ಹೆಕ್ಟೇರ್‌ ಕಡಿಮೆಯಾಗಿದ್ದರೂ, ಇಳುವರಿಯಲ್ಲಿ 1.04 ಲಕ್ಷ ಟನ್‌ನಷ್ಟು ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ಪ್ರತಿ ಹೆಕ್ಟೇರ್‌ಗೆ ಈ ಬಾರಿ 80 ಕ್ವಿಂಟಲ್‌ನಷ್ಟು ಇಳುವರಿ ಬರುವ ಸಾಧ್ಯತೆಗಳಿವೆ ಎಂದು ಕೃಷಿ ಇಲಾಖೆ ಮೂಲಗಳು ತಿಳಿಸಿವೆ.

ಇದಕ್ಕೆ ಪ್ರಮುಖ ಕಾರಣವೇನೆಂದರೆ ಈ ಬಾರಿ ಎಲ್ಲೆಡೆ ಉತ್ತಮ ಮಳೆಯಾಗಿದ್ದು, ಸಕಾಲದಲ್ಲಿ ಬೆಳೆಗಳಿಗೆ ನೀರು ದೊರಕಿದ್ದರಿಂದ ಇಳುವರಿಯಲ್ಲಿ ಹೆಚ್ಚಳ ಕಂಡುಬರಲಿದೆ. ವಾತಾವರಣ ಹೀಗೆಯೇ ಇದ್ದಲ್ಲಿ ಭತ್ತ ಬೆಳೆಗಾರರ ಕಣಜವನ್ನು ತುಂಬುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಖರೀದಿ ಕೇಂದ್ರಕ್ಕೆ ಒತ್ತಡ: ಭತ್ತದ ಬೆಳೆ ಕಟಾವಿಗೆ ಬಂದಿದ್ದರೂ ರಾಜ್ಯಸರ್ಕಾರ ಇನ್ನೂ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸಿಲ್ಲ.

ಖರೀದಿ ಕೇಂದ್ರ ತೆರೆಯುವ ಉತ್ಸಾಹವನ್ನೂ ತೋರಿಸಿಲ್ಲ. ಇದರಪರಿಣಾಮ ರೈತರು ಬೆಳೆದ ಭತ್ತ ದಲ್ಲಾಳಿಗಳ ಪಾಲಾಗುವ ಸಂಭವವೇ ಹೆಚ್ಚಾಗಿದೆ.  ಕಳೆದ ಬಾರಿಯೂ ನಿಗದಿತ ಸಮಯಕ್ಕೆ ಸರಿಯಾಗಿ ಭತ್ತದ ಖರೀದಿ ಕೇಂದ್ರಗಳನ್ನು ತೆರೆಯದಿದ್ದರಿಂದ ಭತ್ತದ ಬೆಳೆ ದಲ್ಲಾಳಿಗಳ ಪಾಲಾಗಿತ್ತು. ಈ ಬಾರಿಯೂ ಭತ್ತದ ಉತ್ಪಾದನೆ ಆಶಾದಾಯಕವಾಗಿರುವುದರಿಂದ ಭತ್ತಕ್ಕೆ ಬೆಂಬಲ ಬೆಲೆ ನಿಗದಿ ಹಾಗೂ ಖರೀದಿ ಕೇಂದ್ರಗಳಿಗೆ ರೈತರಿಂದ ತೀವ್ರ ಒತ್ತಡ ಹೆಚ್ಚಾಗುತ್ತಿದೆ.

ಗೊಂದಲ ಸೃಷ್ಟಿ: ಕಳೆದ ವರ್ಷ ಭತ್ತ ಖರೀದಿ ಜವಾಬ್ದಾರಿಯನ್ನು ರೈಸ್‌ಮಿಲ್‌ಗ‌ಳಿಗೆ ವಹಿಸಲಾಗಿತ್ತು. ಅದಕ್ಕೂ ಮುಂಚೆ ಸರ್ಕಾರವೇ ರೈತರಿಂದ ನೇರವಾಗಿ ಭತ್ತ ಖರೀದಿ ಮಾಡಿ ಹಲ್ಲಿಂಗ್‌ಗೆ ಮಾತ್ರ ರೈಸ್‌ಮಿಲ್‌ ಗಳಿಗೆ ಸರಬರಾಜು ಮಾಡಲಾಗುತ್ತಿತ್ತು. ಆದರೆ, ಕಳೆದ ಸಾಲಿನಲ್ಲಿ ಆ ನಿಯಮದಲ್ಲಿ ಬದಲಾವಣೆ ತಂದು ರೈಸ್‌ ಮಿಲ್‌ಗ‌ಳೇ ರೈತರಿಂದ ಭತ್ತ ಖರೀದಿ ಮಾಡುವುದು, ಖರೀದಿಸಿದ ಭತ್ತಕ್ಕೆ ಪ್ರತಿ ಕ್ವಿಂಟಲ್‌ಗೆ 1750 ರೂ.ನಂತೆ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟು, ಐದಾರು ತಿಂಗಳ ನಂತರ ಹಲ್ಲಿಂಗ್‌ ಮಾಡಿ ಸರ್ಕಾರಕ್ಕೆ ನೀಡುವಂತೆ ಹೊಸ ನಿಯಮ ರೂಪಿಸಿ ಜಾರಿಗೊಳಿಸಿತು.

ಇದಕ್ಕೆ ರೈಸ್‌ಮಿಲ್‌ ಮಾಲೀಕರು ಒಪ್ಪದೆ ಗೊಂದಲ ಸೃಷ್ಟಿಯಾಗಿತ್ತು. ಭತ್ತ ಖರೀದಿ ಮಾಡಲು ಠೇವಣಿ ಇಡುವಷ್ಟು ಹಣ ನಮ್ಮಲ್ಲಿಲ್ಲ. ಅದಕ್ಕಾಗಿ ಸರ್ಕಾರವೇ ನೇರವಾಗಿ ಭತ್ತ ಖರೀದಿ ಮಾಡಿ ರೈಸ್‌ಮಿಲ್‌ಗ‌ಳಿಗೆ ಪೂರೈಸಿದರೆ ನಮಗೂ ಕೆಲಸ ಸಿಕ್ಕಂತಾಗುವುದು, ಸರ್ಕಾರಕ್ಕೂ ಅನುಕೂಲವಾಗಲಿದೆ ಎಂಬ ಸಂದೇಶ ರವಾನಿಸಿದ್ದರು. ಆದರೆ, ಈ ಗೊಂದಲ ಕೊನೆಯ ವರೆಗೂ ಮುಂದುವರಿದು ರೈತರಿಂದ ಕಡೆಗೂ ಸಮರ್ಪಕವಾಗಿ ಸರ್ಕಾರ ಭತ್ತ ಖರೀದಿ ಮಾಡಲೇ ಇಲ್ಲ. ಇದರಿಂದ ರೈತರು ಬೆಳೆದ ಭತ್ತವೆಲ್ಲವೂ ದಲ್ಲಾಳಿಗಳ ಪಾಲಾಗಿತ್ತು.

ಮತ್ತೆ ದಲ್ಲಾಳಿಗಳ ಪಾಲಾಗುವ ಆತಂಕ: ಈ ಬಾರಿಯೂ ಭತ್ತಕ್ಕೆ ಬೆಂಬಲ ಬೆಲೆ ನಿಗದಿಪಡಿಸದೆ, ಸಕಾಲದಲ್ಲಿ ಖರೀದಿ ಕೇಂದ್ರವನ್ನೂ ತೆರೆಯದಿದ್ದಲ್ಲಿ ಭತ್ತದ ಬೆಳೆ ಈ ಬಾರಿಯೂ ಮಧ್ಯವರ್ತಿಗಳ ಪಾಲಾಗುವುದಕ್ಕೆ ಹಾಗೂ ರೈತರಿಗೆ ಉತ್ತಮ ಬೆಲೆ ಸಿಗದೆ ಶೋಷಣೆಗೆ ಒಳಗಾಗುವುದಕ್ಕೆ ಸರ್ಕಾರವೇ

ನೇರ ಕಾರಣವಾಗಿದೆ ಎಂದು ರೈತಸಂಘದ ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್‌ ಆರೋಪಿಸಿದ್ದಾರೆ. ಈ ವೇಳೆಗೆ ಸರ್ಕಾರ ಬೆಂಬಲ ಬೆಲೆ ನಿಗದಿಪಡಿಸಬೇಕಿತ್ತು, ಖರೀದಿ ಕೇಂದ್ರಗಳನ್ನು ತೆರೆದು ಭತ್ತ ಖರೀದಿಗೆ ವ್ಯವಸ್ಥೆ ಮಾಡಬೇಕಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿರುವ ಸಿಎಂ ಯಡಿಯೂರಪ್ಪನವರು ಭತ್ತದ ಬೆಳೆ ಕಟಾವಿಗೆ ಬಂದಿರುವ ಸಮಯದಲ್ಲಿ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಿ ಖರೀದಿ ಕೇಂದ್ರ ತೆರೆಯುವುದಕ್ಕೆ ತುರ್ತು ಕ್ರಮ ವಹಿಸಲಿ ಎಂದು ಒತ್ತಾಯಿಸಿದ್ದಾರೆ.

 

-ಮಂಡ್ಯ ಮಂಜುನಾಥ್

ಟಾಪ್ ನ್ಯೂಸ್

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.