ರಾಘವ ಕಲಾಮಂದಿರದ ಆಸ್ತಿ ತೆರಿಗೆ ವಸೂಲಿಗೆ ಮುಂದಾಗಿ

ನವ ಕರ್ನಾಟಕ ಯುವಶಕ್ತಿ ಸಂಘಟನೆ ಪದಾಧಿಕಾರಿಗಳ ಪ್ರತಿಭಟನೆ

Team Udayavani, Nov 23, 2019, 4:21 PM IST

23-November-24

ಬಳ್ಳಾರಿ: ನಗರದ ರಾಘವ ಕಲಾಮಂದಿರದ ಆಸ್ತಿ ತೆರಿಗೆ ವಸೂಲಿ ಮಾಡುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದು ಕೂಡಲೇ ಅ ಧಿಕಾರಿಗಳು ವಿಳಂಬ ನೀತಿ ಕೈಬಿಟ್ಟು ವಸೂಲಿಗೆ ಮುಂದಾಗಬೇಕು ಎಂದು ಒತ್ತಾಯಿಸಿ ನವ ಕರ್ನಾಟಕ ಯುವಶಕ್ತಿ ಸಂಘಟನೆ ಪದಾಧಿಕಾರಿಗಳು ನಗರದ ಮಹಾನಗರ ಪಾಲಿಕೆ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ರಾಘವ ಕಲಾಮಂದಿರದ ಆಸ್ತಿ ತೆರಿಗೆ ವಂಚನೆ ಕುರಿತು ಈ ಹಿಂದೆ ಮೇ 13ರಂದು ಪಾಲಿಕೆ ಅಧಿ ಕಾರಿಗಳಿಗೆ ದೂರು ನೀಡಿ ಗಮನಸೆಳೆಯಲಾಗಿತ್ತು. ಈ ಕುರಿತು ಅಧಿಕಾರಿಗಳು ಮೇ. 13ರಂದು ನೊಟೀಸ್‌ ಜಾರಿಗೊಳಿಸಿದ್ದರು. ಆದರೆ ಇಲ್ಲಿವರೆಗೆ ಯಾವುದೇ ಕ್ರಮವಿಲ್ಲದಂತಾಗಿದೆ. ಈ ಕುರಿತು ದೂರು ನೀಡಿ 6 ತಿಂಗಳು ಕಳೆದರೂ ಇಲ್ಲಿವರೆಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗದಿರುವುದನ್ನು ಗಮನಿಸಿದರೆ ನಾನಾ ಅನುಮಾನಗಳು ವ್ಯಕ್ತವಾಗುತ್ತವೆ.

ಅಧಿಕಾರಿಗಳು ರಾಘವ ಕಲಾಮಂದಿರದ ತೆರಿಗೆ ವಸೂಲಿ ಮಾಡದೆ ವಿನಾಕಾರಣ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಇದರ ಹಿಂದೆ ಕಾಣದ ಕೈವಾಡಗಳು ನಡೆಯುತ್ತಿದ್ದು, ಬರುವ ದಿನಗಳಲ್ಲಿ ಎಲ್ಲವೂ ಬಯಲಾಗಲಿವೆ. ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರೇ ಒಬ್ಬರ ಮೇಲೆ ಇನ್ನೋಬ್ಬರು ಹೆಸರು ಹೇಳಿಕೊಂಡು ದಿನಗಳನ್ನು ಮುಂದೂಡುತ್ತಿದ್ದಾರೆ ಹೊರತು, ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಪ್ರತಿಭಟನಾನಿರತರು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ 2002ರಿಂದ 2013ರವರೆಗಿನ ಆಸ್ತಿ ತೆರಿಗೆ ಬಾಕಿ 16,14,838 ರೂ.ಗಳಿದ್ದು ಈ ತೆರಿಗೆಯನ್ನು ಪಾವತಿಸಬೇಕು ಎಂದು ಪಾಲಿಕೆ ಆಯುಕ್ತರು ಮೆ 13ರಂದು ನೋಟಿಸ್‌ ಜಾರಿಗೊಳಿಸಿದ್ದರೂ ಇಲ್ಲಿವರೆಗೆ ಕ್ರಮವಿಲ್ಲ. ಅ ಧಿಕಾರಿಗಳು ಟ್ರಸ್ಟ್  ನ ಅಧ್ಯಕ್ಷರಿಗೆ ನೋಟಿಸ್‌ ನೀಡದೆ 22ದಿನಗಳ ಕಾಲ ನೋಟಿಸ್‌ನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದು, ತಪ್ಪಿತಸ್ಥ ಅ ಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು, ಕೂಡಲೇ ಬಾಕಿ ಇರುವ ತೆರಿಗೆ ಹಣವನ್ನು ವಸೂಲಿ ಮಾಡಬೇಕು, ನಿರ್ಲಕ್ಷ್ಯ ವಹಿಸಿದರೇ ಬರುವ ದಿನಗಳಲ್ಲಿ ಹೋರಾಟದ ಸ್ವರೂಪ ಬದಲಾಗಲಿದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆ ರಾಜ್ಯ ಉಪಾಧ್ಯಕ್ಷ ಸಿದ್ಮಲ್‌ ಮಂಜುನಾಥ್‌, ಮಲ್ಲಿಕಾರ್ಜುನ, ಶಿವಲಿಂಗಸ್ವಾಮಿ, ಮಹೇಶ್‌ ಕುಮಾರ್‌, ಸುರೇಶ್‌, ಮೀರ ಮೊಹಿದ್ದೀನ್‌, ಜಿಲ್ಲಾಧ್ಯಕ್ಷ ಕೆ. ರಮೇಶ್‌, ಮಂಜುನಾಥ್‌, ನಾಗರಾಜ್‌, ದೇವೇಶ್‌, ಕುಮಾರಸ್ವಾಮಿ ಸೇರಿದಂತೆ ನೂರಾರು ಕಾರ್ಯಕರ್ತರು ಇತರರಿದ್ದರು.

ಟಾಪ್ ನ್ಯೂಸ್

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.