ಅಪ್ಪ-ಮಗನನ್ನು ಗೆಲ್ಲಿಸಲಾಗದ ಎಚ್‌ಡಿಕೆ ಅನರ್ಹರನ್ನು ಸೋಲಿಸ್ತಾರಾ?: ಈಶ್ವರಪ್ಪ
ಕುಮಾರಸ್ವಾಮಿಗೆ ನೊಬೆಲ್ ಪ್ರಶಸ್ತಿ ಕೊಡಲೇಬೇಕು; ಸಿದ್ದರಾಮಯ್ಯ ಹೇಳ್ಳೋದೆಲ್ಲಾ ಸುಳ್ಳೇ ಸುಳ್ಳು
Team Udayavani, Nov 23, 2019, 9:27 PM IST
ಅಥಣಿ:ಲೋಕಸಭಾ ಚುನಾವಣೆಯಲ್ಲಿ ಸ್ವಂತ ಅಪ್ಪ ದೇವೇಗೌಡ ಹಾಗೂ ಮಗ ನಿಖೀಲ ಕುಮಾರಸ್ವಾಮಿ ಅವರನ್ನು ಗೆಲ್ಲಿಸಲಾಗದ ಎಚ್.ಡಿ. ಕುಮಾರಸ್ವಾಮಿ ಅವರು ಅನರ್ಹ ಶಾಸಕರನ್ನು ಹೇಗೆ ಸೋಲಿಸುತ್ತಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಸ್ಥಳೀಯ ಜೆ.ಎ. ಪಪೂ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಅಥಣಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸ್ತೀನಿ ಎಂದು ಶಪಥ ಮಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನೊಬೆಲ್ ಪ್ರಶಸ್ತಿ ಕೊಡಲೇಬೇಕು. ಮಾಜಿ ಸಿಎಂ ಸಿದ್ದರಾಮಯ್ಯ ಹೇಳ್ಳೋದೆಲ್ಲ ಸುಳ್ಳು. ಅವರು ಹೇಳಿದ್ದು ಯಾವತ್ತೂ ನಿಜವಾಗಿಲ್ಲ.ಈ ಉಪಚುನಾವಣೆ ಮುಗಿದ ನಂತರ ಬಿಜೆಪಿ ಸರ್ಕಾರ ಬೀಳುತ್ತೆ ಎಂದು ಹೇಳುತ್ತಿದ್ದಾರೆ. ಅಂದರೆ ನೀವೆ ಅರ್ಥ ಮಾಡಿಕೊಳ್ಳಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎರಡು ಸೀಟು ಗೆಲ್ಲುತ್ತೆ ಅಂದಿದ್ದರು. ಆದರೆ ಹಾಗೆಂದವರೇ ಕೇವಲ ಎರಡು ಸೀಟು ಗೆದ್ದರು. ಅವರಪ್ಪನಾಣೆ ಕುಮಾರಸ್ವಾಮಿ ಸಿಎಂ ಆಗಲ್ಲ ಅಂದಿದ್ದರು. ಆದರೆ ಕುಮಾರಸ್ವಾಮಿ ಪಾದ ಹಿಡಿದು ಮುಖ್ಯಮಂತ್ರಿ ಮಾಡಿದವರೇ ಸಿದ್ದರಾಮಯ್ಯ ಎಂದರು.
ಸಿದ್ದಾರಾಮಯ್ಯ ಅವರಿಗೆ ಬೇಕಾದ ಅಭ್ಯರ್ಥಿಗಳನ್ನು ಉಪಚುನಾವಣೆಗೆ ನಿಲ್ಲಿಸಿರುವುದರಿಂದ ಮೂಲ ಕಾಂಗ್ರೆಸ್‌ನವರಾದ ಪರಮೇಶ್ವರ, ಮಲ್ಲಿಕಾರ್ಜುನ ಖರ್ಗೆ, ಜಮೀರ ಅಹ್ಮದ್, ಎಚ್.ಮುನಿಯಪ್ಪ, ಡಿ.ಕೆ.ಶಿವಕುಮಾರ ಸೇರಿದಂತೆ ಅನೇಕರು ಮನೆ ಬಿಟ್ಟು ಹೊರಗಡೆ ಬರುತ್ತಿಲ್ಲ. ಕೇವಲ ಸಿದ್ದರಾಮಯ್ಯ ಒಬ್ಬರೇ ಉಪಚುನಾವಣೆ ಎದುರಿಸುತ್ತಾ ಒಬ್ಬಂಟಿ ಆಗಿದ್ದಾರೆ ಎಂದರು.
ಕಾಗವಾಡ, ಅಥಣಿ ಅಭ್ಯರ್ಥಿ ಗೆಲ್ಲಿಸಿ
ವಿಧಾನಸಭೆ ಮೆಟ್ಟಿಲೇರುತ್ತೇನೆ!
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿ, ಪಕ್ಷಕ್ಕಾಗಿ ನಾನು ಯಾವ ತ್ಯಾಗಕ್ಕಾದರೂ ಸಿದ್ಧನಿದ್ದೇನೆ. ಮಹೇಶ ಕುಮಟಳ್ಳಿ ಅಭ್ಯರ್ಥಿ ಆಗಿರುವುದು ಲಕ್ಷ್ಮಣ ಸವದಿ ಒಪ್ಪಿಗೆ ಮೇರೆಗೆ ಮಾತ್ರ. ಬೇರೆ ಪಕ್ಷದಲ್ಲಿ ಸೋತರೆ ಮೂಲೆ ಗುಂಪು ಮಾಡುತ್ತಾರೆ. ಆದರೆ ಬಿಜೆಪಿಯಲ್ಲಿ ನನಗೆ ಎಲ್ಲ ಸ್ಥಾನಮಾನ ಕೊಟ್ಟು ಗೌರವಿಸಿದ್ದಾರೆ. ಸೋತವನಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದು ಬಿಜೆಪಿ ಹಿರಿಮೆ. ಅಥಣಿ ಶಿವಯೋಗಿಗಳ ಆಣೆ ಮಾಡಿ ಹೇಳುತ್ತೇನೆ. ಕಾಗವಾಡ ಮತ್ತು ಅಥಣಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ನನ್ನ ಹೆಗಲ ಮೇಲೆ ಹೊತ್ತುಕೊಂಡು ವಿಧಾನಸಭೆ ಮೆಟ್ಟಿಲೇರುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.