ಮೇಳಕ್ಕೆ ಮರು ಸಂಯೋಜಿಸಲು ಆಗ್ರಹ

Team Udayavani, Nov 24, 2019, 4:32 AM IST

mm-35

ಮಂಗಳೂರು: ಭಾಗವತ ಪಟ್ಲ ಸತೀಶ್‌ ಶೆಟ್ಟಿಯವರಿಗೆ ಭಾಗವತಿಕೆಗೆ ಅವಕಾಶ ನೀಡದಿರುವುದು ಖಂಡನೀಯ ಎಂದು ಶ್ರೀ ಕ್ಷೇತ್ರದ ಭಕ್ತರ ಒಂದು ಸಮೂಹ ಮತ್ತು ಪಟ್ಲ ಅಭಿಮಾನಿಗಳ ಬಳಗ ಹೇಳಿದೆ.

ಘಟನೆಯನ್ನು ಖಂಡಿಸಿ ಮಂಗಳೂರಿನಲ್ಲಿ ಶನಿವಾರ ಶ್ರೀ ಕ್ಷೇತ್ರದ ಭಕ್ತರ ಒಂದು ಸಮೂಹ ಮತ್ತು ಪಟ್ಲ ಸತೀಶ್‌ ಶೆಟ್ಟಿ ಅಭಿಮಾನಿಗಳ ಬಳಗದ ಸಭೆ ಜರಗಿತು. “ಭಾಗವತ ಪಟ್ಲ ಸತೀಶ್‌ ಶೆಟ್ಟಿಯವರನ್ನು ರಂಗಸ್ಥಳದಿಂದ ಇಳಿಸಿದ ಆಡಳಿತದ ಕ್ರಮವನ್ನು ಸಭೆ ತೀವ್ರವಾಗಿ ಖಂಡಿಸುತ್ತದೆ. ಈ ಕುರಿತಾಗಿ ಕಾನೂನು, ನ್ಯಾಯಗಳ ಚೌಕಟ್ಟಿನಲ್ಲಿ ಸರಕಾರಿ ಇಲಾಖೆ-ದೇವಾಲಯದ ಆಡಳಿತದ ಮತ್ತು ಕಲಾವಿದರ ಘನತೆಗೆ ತಕ್ಕಂತೆ ಸೂಕ್ತ ಸೌಹಾರ್ದಯುತ ಪರಿಹಾರವನ್ನು ರೂಪಿಸಿ ಭಾಗವತರನ್ನು ಮರಳಿ ಮೇಳಕ್ಕೆ ಸಂಯೋಜಿಸಿ ಆಗಿರುವ ತಪ್ಪನ್ನು ಸರಿಪಡಿಸಬೇಕು’ ಎಂದು ಆಗ್ರಹಿಸಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸೋಮವಾರ ಮಧ್ಯಾಹ್ನ 3 ಗಂಟೆಗೆ ಈ ಬಗ್ಗೆ ಡಿಸಿಗೆ ಮನವಿ ನೀಡಲು ನಿರ್ಧರಿಸಲಾಯಿತು.

ಕಲಾವಿದ ಸರಪಾಡಿ ಅಶೋಕ್‌ ಶೆಟ್ಟಿ ಮಾತನಾಡಿ, ಘಟನೆ ಅತೀವ ನೋವು ತಂದಿದೆ. ಇದು ಕಲಾವಿದರಿಗೆ ಅವಮಾನ ಎಂದರು. ಡಾ| ಪ್ರಭಾಕರ ಜೋಶಿ ಮಾತನಾಡಿ ಯಕ್ಷಗಾನ ರಂಗದಲ್ಲಿ ನನ್ನ 55 ವರ್ಷಗಳ ಅನುಭವದಲ್ಲಿ ಇಂತಹ ಘಟನೆ ನಡೆದಿರಲಿಲ್ಲ ಎಂದರು. ಕಲಾವಿದ ಸಂಜಯ ಕುಮಾರ್‌ ಗೋಣಿಬೀಡು, ಪಟ್ಲ ಸತೀಶ್‌ ಶೆಟ್ಟಿಯವರಿಗೆ ನ್ಯಾಯ ಸಿಗಬೇಕು ಮತ್ತು ಪ್ರಕರಣ ಸುಖಾಂತ್ಯ ವಾಗಬೇಕು ಎಂದು ಆಗ್ರಹಿಸಿದರು.

ಪ್ರಕರಣವನ್ನು ಖಂಡಿಸಿ ಕದ್ರಿ ನವನೀತ ಶೆಟ್ಟಿ, ಬೋಳಾರ ತಾರಾ ನಾಥ ಶೆಟ್ಟಿ, ಪ್ರದೀಪ್‌ ಆಳ್ವ, ದೇವಿ ಪ್ರಸಾದ್‌ ಶೆಟ್ಟಿ, ಆರ್‌.ಕೆ. ಭಟ್‌, ಸಂಜಯ ರಾವ್‌, ಸತ್ಯನಾರಾಯಣ ಪುಣಿಂಚಿತ್ತಾಯ, ಶಾಂತಾರಾಮ ಕುಡ್ವಾ ಮಾತನಾಡಿದರು. ಕೃಷ್ಣ ಶೆಟ್ಟಿ ಸ್ವಾಗತಿಸಿದರು.

ಸೂಚನೆ ನೀಡಿರಲಿಲ್ಲ: ಪಟ್ಲ
ಘಟನೆಯ ಬಗ್ಗೆ ಸಭೆಯಲ್ಲಿ ವಿವರ ನೀಡಿದ ಪಟ್ಲ ಸತೀಶ್‌ ಶೆಟ್ಟಿ, “ರಂಗಸ್ಥಳಕ್ಕೆ ಭಾಗವತಿಕೆಗೆ ಹೋಗದಂತೆ ನನಗೆ ಮೊದಲು ಯಾವುದೇ ಮುನ್ಸೂಚನೆ ನೀಡಿರಲಿಲ್ಲ. ಮೇಳದ ಮೆನೇಜರ್‌ ಕೂಡ ವಿಷಯ ತಿಳಿಸಿರಲಿಲ್ಲ. ನಾನು ನಮ್ಮ ಮೇಳದ ಹಿರಿಯ ಭಾಗವತರಿಂದ ಅನುಮತಿ ಪಡೆದು ರಂಗಸ್ಥಳಕ್ಕೆ ಹೋದೆ. ಆಗ ಮೇಳದ ಯಜಮಾನ ಕಲ್ಲಾಡಿ ದೇವಿಪ್ರಸಾದ್‌ ಶೆಟ್ಟಿ ಅವರು ನನ್ನನ್ನು ಭಾಗವತಿಕೆ ಮಾಡದಂತೆ ಹಿಂದಕ್ಕೆ ಕರೆಸಿದರು. ಜಿಲ್ಲಾಧಿಕಾರಿಯವರಿಗೆ ಮೇಳದ ವಿರುದ್ಧ ದೂರು ನೀಡಿದ್ದ 7 ಕಲಾವಿದರನ್ನು ಮೇಳದ ಯಜಮಾನರು ಶ್ರೀ ಕ್ಷೇತ್ರಕ್ಕೆ ಕರೆಯಿಸಿ ಎಚ್ಚರಿಕೆ ನೀಡಿದ್ದರು. ಒಂದು ವೇಳೆ ನನ್ನಲ್ಲಿ ಏನಾದರೂ ತಪ್ಪು ಆಗಿದ್ದರೆ ನನ್ನನ್ನೂ ಕರೆಯಿಸಿ ಕೇಳಬಹುದಿತ್ತು. ಇದು ಯಾವುದೂ ಮಾಡದೆ ನಾನು ರಂಗಸ್ಥಳಕ್ಕೆ ಹೋದ ಮೇಲೆ ನನ್ನನ್ನು ಹಿಂದಕ್ಕೆ ಕರೆದಿದ್ದಾರೆ. ಸುಮಾರು 20 ವರ್ಷಗಳಿಂದ ನಾನು ಯಕ್ಷಗಾನ ಕಲಾಸೇವೆಯನ್ನು ಮಾಡುತ್ತಾ ಬಂದಿದ್ದೇನೆ. ನನ್ನಿಂದ ಆದಷ್ಟು ಸಹಾಯ ಮಾಡಿದ್ದೇನೆ. ಮೇಳಕ್ಕೆ, ಯಜಮಾನರಿಗೆ, ಸೇವಾಕರ್ತರಿಗೆ ಎಂದೂ ದ್ರೋಹ ಮಾಡಿಲ್ಲ’ ಎಂದರು.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.