ಸ್ವಾಮಿ ನಿಷ್ಠೆಯ ಪ್ರತಿರೂಪ ಫ‌ಡ್ನವೀಸ್‌


Team Udayavani, Nov 24, 2019, 7:00 AM IST

Devendra-23-11

ಮಹಾರಾಷ್ಟ್ರದಲ್ಲಿ ಸತತ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದೇವೇಂದ್ರ ಫ‌ಡ್ನವೀಸ್‌, ಇದೀಗ ಆ ಸಾಧನೆ ಮಾಡಿದ ಮಹಾ ರಾಷ್ಟ್ರದ ಮೊಟ್ಟಮೊದಲ ಕಾಂಗ್ರೆಸ್ಸೇತರ ನಾಯಕ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ. ನಾಗ್ಪುರ ವಿಶ್ವವಿದ್ಯಾಲಯದ ಕಾನೂನು ಪದವೀಧರರೂ ಹೌದು.

ರಾಜಕೀಯ ಜೀವನ: 1990ರಲ್ಲಿ ನಾಗ್ಪುರ ಮುನ್ಸಿಪಾಲಿಟಿಯಲ್ಲಿ ಸದಸ್ಯರಾಗುವ ಮೂಲಕ ರಾಜಕೀಯ ರಂಗ ಪ್ರವೇಶಿಸಿದ ಅವರು, 1992, 1997ರ ಮುನ್ಸಿಪಲ್‌ ಚುನಾವಣೆಗಳಲ್ಲೂ ಜಯ ಸಾಧಿಸಿ ಅತಿ ಚಿಕ್ಕ ವಯಸ್ಸಿನಲ್ಲಿ ಅಲ್ಲಿನ ಮೇಯರ್‌ ಆದ ಹೆಗ್ಗಳಿಕೆ ಪಡೆದಿದ್ದರು.

1999ರಲ್ಲಿ ನಾಗ್ಪುರದ ನೈರುತ್ಯ ವಿಧಾನಸಭೆಯಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದ ಅವರು, ಅನಂತರವೂ ಅದೇ ಕ್ಷೇತ್ರದಿಂದ ಸತತವಾಗಿ ಜಯ ಗಳಿಸುತ್ತಾ ಬಂದಿದ್ದಾರೆ. 2014ರ ಅಕ್ಟೋಬರ್‌ 31ರಂದು ಮಹಾ ರಾಷ್ಟ್ರದ ಸಿಎಂ ಆಗಿದ್ದ ಅವರು, ಪ್ರಧಾನಿ ಮೋದಿ, ಅಮಿತ್‌ ಶಾ ಅವರು ನಂಬುಗೆಯಿಂದ ನೀಡಿದ ಹುದ್ದೆ ಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದ ಹೆಗ್ಗಳಿಕೆ ಅವರದ್ದು. ಮರಾಠರಿಗೆ ಮೀಸಲಾತಿ, ಜಲಯುಕ್‌¤ ಶಿವರ್‌ ಜಲಸಂರಕ್ಷಣಾ ಯೋಜನೆ, ನಾಗ್ಪುರ- ಮುಂಬಯಿ ಜ್ಞಾನ ಕಾರಿಡಾರ್‌, ರೈತರ ಸಾಲ ಮನ್ನಾ ಹಾಗೂ ಮೆಟ್ರೋ ರೈಲು ವಿಸ್ತರಣೆ ಮುಂತಾದ ಯೋಜನೆಗಳನ್ನು ಜಾರಿಗೊಳಿಸಿದ ಹಿರಿಮೆ ಇವರದ್ದು.

ನೀವು ಸಾಧಿಸಿಬಿಟ್ಟಿರಿ ಎಂದ ಪತ್ನಿ
ಎರಡನೇ ಬಾರಿಗೆ ಮಹಾರಾಷ್ಟ್ರದ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದೇವೇಂದ್ರ ಫ‌ಡ್ನವೀಸ್‌ ಅವರನ್ನು ಪತ್ನಿ ಅಮೃತಾ ಫ‌ಡ್ನವೀಸ್‌ ಟ್ವೀಟ್‌ ಮಾಡಿ ಅಭಿನಂದಿಸಿದ್ದಾರೆ. ‘ದೇವೇಂದ್ರ ಫ‌ಡ್ನವೀಸ್‌, ಅಜಿತ್‌ ಪವಾರ್‌ ಅವರೇ ಅಭಿನಂದನೆಗಳು. ನೀವು ಸಾಧಿಸಿಬಿಟ್ಟಿರಿ’ ಎಂದು ಬರೆದುಕೊಂಡಿದ್ದಾರೆ.

ಟ್ವಿಟರ್‌ನಲ್ಲಿ ಮೆಚ್ಚುಗೆ
ಹಠಾತ್‌ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾದ ಬಿಜೆಪಿಯ ತಂತ್ರಗಾರಿಕೆಯ ಬಗ್ಗೆ ಟ್ವೀಟರಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಲವರು, ಬಿಜೆಪಿಯ ಈ ನಡೆಯನ್ನು ಎಚ್‌ಬಿಒ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರೋಮಾಂಚಕ ಧಾರಾವಾಹಿ, ‘ಗೇಮ್‌ ಆಫ್ ಥ್ರೋನ್ಸ್‌’ಗಿಂತಲೂ ಹೆಚ್ಚು ರೋಮಾಂಚಕವಾಗಿತ್ತೆಂದು ಬಣ್ಣಿಸಿದರೆ, ಇನ್ನೂ ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ಅಮಿತ್‌ ಶಾ ಅವರನ್ನು ‘ಬೆಸ್ಟ್‌ ಫಿನಿಶರ್‌’ ಹಾಗೂ ‘ಚಾಣಕ್ಯ’ ಎಂದು ಕೊಂಡಾಡಿದ್ದಾರೆ.

ಸೃಷ್ಟಿ ಶರ್ಮಾ ಎಂಬವರು, ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್‌. ಧೋನಿ ಹಾಗೂ ಅಮಿತ್‌ ಶಾ ಅವರ ಭಾವಚಿತ್ರಗಳನ್ನು ಒಟ್ಟಿಗೆ ಟ್ವೀಟ್‌ ಮಾಡಿ, ಇವರಿಬ್ಬರೂ ಬೆಸ್ಟ್‌ ಫಿನಿಶರ್‌ಗಳು ಎಂದಿದ್ದಾರೆ. ಇನ್ನೂ ಕೆಲವರು, ಅಮಿತ್‌ ಶಾ ಅವರ ರಾಜಕೀಯ ಲೆಕ್ಕಾಚಾರ ಮಹಾರಾಷ್ಟ್ರದಲ್ಲಿ ತಲೆಕಳಗಾಗಿದೆ ಎಂದು ಶನಿವಾರದ ಸಂಚಿಕೆಯಲ್ಲಿ ಬರೆದಿದ್ದ ಅನೇಕ ಪತ್ರಿಕೆಗಳು, ಮಾಧ್ಯಮಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ಜನರು, ಮಹಾರಾಷ್ಟ್ರದ ರಾಜಕೀಯ ಬಿಗ್‌ ಬಾಸ್‌ಗಿಂತಲೂ ಹೆಚ್ಚು ಕುತೂಹಲಕಾರಿಯಾಗಿದೆ ಎಂದಿದ್ದಾರೆ.

ಹೇಳಿದ್ದನ್ನು ಈಗ ಅರ್ಥೈಸಿಕೊಳ್ಳಿ
ಕ್ರಿಕೆಟ್‌ ಹಾಗೂ ರಾಜಕೀಯದಲ್ಲಿ ಏನು ಬೇಕಾದರೂ ಸಂಭವಿಸಬಹುದು ಎಂದು ನಾನು ನಿಮಗೆ ಮೊದಲೇ ಹೇಳಿದ್ದೆ. ಈಗ ನೀವು ನನ್ನ ಹೇಳಿಕೆಯನ್ನು ಸರಿಯಾಗಿ ಅರ್ಥೈಸಿಕೊಳ್ಳಬಹುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಎನ್‌ಸಿಪಿ ದಿಢೀರ್‌ ಸರಕಾರ ರಚಿಸಿರುವ ಕುರಿತು ಮುಂಬಯಿನಲ್ಲಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಮಾಡುವ ನಿಟ್ಟಿನಲ್ಲಿ ಕಸರತ್ತು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಹಿಂದೆ ಎರಡು ಸಂದರ್ಭಗಳಲ್ಲಿ ಇದೇ ಮಾತುಗಳನ್ನಾಡಿದ್ದರು. 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ದೇವೇಂದ್ರ ಫ‌ಡ್ನವೀಸ್‌ ಅವರಿಗೆ ಅಭಿನಂದನೆ ಸಲ್ಲಿಸಿರುವ ಗಡ್ಕರಿ, ನಿಗದಿಪಡಿಸಿದ ಅವಧಿಯಲ್ಲಿ ಬಿಜೆಪಿ ವಿಶ್ವಾಸಮತ ಸಾಬೀತುಪಡಿಸಲಿದೆ ಎಂದರು.

ಟಾಪ್ ನ್ಯೂಸ್

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.