ವರ್ಷದ ಹಿಂದೆ ಹೂತಿದ್ದ ಶವ ಮರುಪರೀಕ್ಷೆ


Team Udayavani, Nov 24, 2019, 10:32 AM IST

huballi-tdy-1

ನವಲಗುಂದ: ವರ್ಷದ ಹಿಂದೆ ಹೂಳಿದ್ದ ಅಪರಿಚಿತ ಯುವಕನ ಶವವನ್ನು ಕೊಲೆ ಪ್ರಕರಣ ಸಂಬಂಧ ಮೇಲಕ್ಕೆತ್ತಿ ಮರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ವಿದ್ಯಮಾನ ಪಟ್ಟಣದ ರುದ್ರಭೂಮಿಯಲ್ಲಿ ಶನಿವಾರ ನಡೆದಿದೆ.

2018ರ ಡಿ. 4ರಂದು ಇಬ್ರಾಹಿಂಪುರ ಬಳಿ ಮಲಪ್ರಭಾ ಕಾಲುವೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿತ್ತು. ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಪಂಚನಾಮೆ ಮಾಡಿ, ಮರಣೋತ್ತರ ಪರೀಕ್ಷೆ ನಡೆಸಿ ಪಟ್ಟಣದ ರುದ್ರಭೂಮಿಯಲ್ಲಿ ಶವಸಂಸ್ಕಾರ ನಡೆಸಿದ್ದರು. ಯುವಕನ ಪೋಟೋವನ್ನು ರಾಜ್ಯಾದ್ಯಂತ ಎಲ್ಲ ಠಾಣೆಗಳಿಗೆ ಕಳುಹಿಸಿಕೊಡಲಾಗಿತ್ತು.

ಸಾಮ್ಯತೆ: ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ದೊಡ್ಡವಾಡ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೈಲಹೊಂಗಲ ತಾಲೂಕಿನ ಹಿರೇಬೆಳ್ಳಕಟ್ಟಿಯ ಶಿವಪ್ಪ ಬಸಪ್ಪ ಬಿಜ್ಜಣ್ಣವರ(26) ಎಂಬಾತ ಕೊಲೆಯಾದ ಪ್ರಕರಣ ದಾಖಲಾಗಿತ್ತು. ಈತನ ಫೋಟೋಕ್ಕೂ, ಕಾಲುವೆಯಲ್ಲಿ ಶವವಾಗಿ ದೊರೆತಿದ್ದವನ ಫೋಟೋಕ್ಕೂ ಸಾಮ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಹೂಳಿದ್ದ ಶವ ಮೇಲಕ್ಕೆತ್ತಿ ಪರೀಕ್ಷೆಗೆ ಒಳಪಡಿಸಲಾಗಿದೆ.

ಹೈದ್ರಾಬಾದ್‌ಗೆ ಸ್ಯಾಂಪಲ್‌: ಹುಬ್ಬಳ್ಳಿ ಕಿಮ್ಸ್‌ ಪ್ರಯೋಗಾಲಯ ತಜ್ಞ ವೈದ್ಯರಾದ ಡಾ| ತಲಯವಾಡು ತಂಡದವರು, ಉಪವಿಭಾಗಾಧಿಕಾರಿ ಮಹಮ್ಮದ್‌ ಜುಬೇರ್‌, ತಹಶೀಲ್ದಾರ್‌ ನವೀನ ಹುಲ್ಲೂರು ನೇತೃತ್ವದಲ್ಲಿ ಮೂರು ತಾಸುಗಳ ಕಾರ್ಯಾಚರಣೆ ಬಳಿಕ ಶವದ ಪಳೆಯುಳಿಕೆ ಹೊರ ತೆಗೆಯಲಾಯಿತು. ಡಿಎನ್‌ಎ ಪರೀಕ್ಷೆಗೆ ಬೇಕಾದ ಮಾದರಿಗಳನ್ನು ಸಂಗ್ರಹಿಸಿ ಹೈದರಾಬಾದ್‌ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿಕೊಡಲಾಯಿತು. ಸ್ಥಳದಲ್ಲಿ ಪಿಎಸ್‌ಐ ಜಯಪಾಲ ಪಾಟೀಲ, ಪೊಲೀಸ್‌ ಹಾಗೂ ಪುರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

ಮನೆಯವರಿಂದ್ಲೇ ಕೊಲೆಯಾದನೇ!:  ಬೈಲಹೊಂಗಲ ತಾಲೂಕಿನ ಹಿರೇಬೆಳ್ಳಕಟ್ಟಿಯ ಶಿವಪ್ಪ ಬಿಜ್ಜಣ್ಣವರ ಕೊಲೆ ಪ್ರಕರಣದಲ್ಲಿ ಆತನ ಕುಟುಂಬದವರೇ ಐವರು ಆರೋಪಿತರಾಗಿದ್ದು, ಬಂಧನಕ್ಕೊಳಗಾಗಿದ್ದಾರೆ. ಲೈಂಗಿಕ ಕಿರುಕುಳ ಹಿನ್ನೆಲೆಯಲ್ಲಿ ಮಲಪ್ರಭಾ ಕಾಲುವೆಗೆ ನೂಕಿ ಕೊಲೆ ಮಾಡಿದ್ದಾಗಿ ಅವರು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಸಿಪಿಐ ಶ್ರೀಕಾಂತ ತೋಟಗಿ ಅವರಿಗೆ, ನವಲಗುಂದ ಠಾಣೆಯಿಂದ ಬಂದಿದ್ದ ಅಪರಿಚಿತ ಯುವಕನ ಶವದ ಪೋಟೋದೊಂದಿಗೆ ಸಾಮ್ಯತೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ವರ್ಷದ ಹಿಂದೆ ಮಲಪ್ರಭಾ ಕಾಲುವೆಯಲ್ಲಿ ಇಬ್ರಾಹಿಂಪುರ ಬಳಿ ದೊರೆತಿದ್ದ ಶವವನ್ನು ರುದ್ರಭೂಮಿಯಿಂದ ಮೇಲಕ್ಕೆತ್ತಿ ಮರು ಪರೀಕ್ಷೆಗೆ ಒಳಪಡಿಸಲಾಗಿದೆ.

ಟಾಪ್ ನ್ಯೂಸ್

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ

Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ED ಬಿಜೆಪಿಯ ಅಂಗ ಸಂಸ್ಥೆಯೇ… ಸಚಿವ ಎಚ್.ಕೆ.ಪಾಟೀಲ್ ಗರಂ

Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ

1-ad-sdasd

Dharwad; 50 ಮಠಾಧೀಶರ ಸಭೆ: ಲಿಂಗಾಯತ ಧರ್ಮದ ಅಸ್ಮಿತೆ ಕಾಪಾಡುವ ಉದ್ದೇಶ

Dharwad: ಉಪನೋಂದಣಿ ಕಚೇರಿ ವಿದ್ಯುತ್ ಕಟ್ : ಸಾರ್ವಜನಿಕರ ಪರದಾಟ

Dharwad: ಉಪನೋಂದಣಿ ಕಚೇರಿ ವಿದ್ಯುತ್ ಕಟ್ : ಸಾರ್ವಜನಿಕರ ಪರದಾಟ

Dharwad: Minister Santhosh Lad objected to Vice President Jagdeep Dhankar’s speech

Dharwad: ಉಪರಾಷ್ಟ್ರಪತಿ ಜಗದೀಪ್ ಧನಕರ್ ಭಾಷಣಕ್ಕೆ ಸಚಿವ ಲಾಡ್ ಆಕ್ಷೇಪ

3-dharwad

Dharwad: ಮನೆ ಪಕ್ಕದ ಬಾವಿಗೆ ಹಾರಿ ವೃದ್ದ ಆತ್ಮಹತ್ಯೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

puttige-8-

Puthige Matha: ವಿಶ್ವ ಗೀತಾ ಪರ್ಯಾಯಕ್ಕೆ‌ ಇಂದಿಗೆ ವರ್ಷ ಪೂರ್ಣ

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.