ಧರ್ಮಸ್ಥಳ ಲಕ್ಷದೀಪೋತ್ಸವ : ಭಾವೈಕ್ಯತೆಯ ಮೌಲ್ಯ ಮನಗಾಣಿಸಿದ ಪಾದಯಾತ್ರೆ


Team Udayavani, Nov 24, 2019, 8:11 PM IST

Padayatre-730

ಅಂದು ಉಜಿರೆ ಎಂದಿನಂತಿರಲಿಲ್ಲ. ಎಲ್ಲಿ ನೋಡಿದರೂ ಕಿಕ್ಕಿರಿದು ನೆರೆದ ಜನಸ್ತೋಮ. ಭಕ್ತಿ ಭಾವದಿಂದ ಮಂಜುನಾಥನನ್ನು ನೆನೆಯುತ್ತಾ, ಧರ್ಮಸ್ಥಳದ ಕಡೆಗೆ ಕಾಲ್ನಡಿಗೆಯಲ್ಲಿ ಮಕ್ಕಳು ಹಿರಿಯರೆನ್ನದೆ ಮುನ್ನಡೆಯುವ ಉತ್ಸಾಹ. ಧರ್ಮಸ್ಥಳದ ಲಕ್ಷದೀಪೋತ್ಸವ ಪ್ರಯುಕ್ತ ಏರ್ಪಟ್ಟ ಪಾದಯಾತ್ರೆಯ ಚಿತ್ರಣ ಇದು. ಶುಕ್ರವಾರ ಸಂಜೆ ಉಜಿರೆಯಿಂದ ಧರ್ಮಸ್ಥಳದವರೆಗೆ ಈ ಭಕ್ತ ಯಾತ್ರೆಯದ್ದೇ ಸೊಗಸು. ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಹಲವರು ಧರ್ಮಸ್ಥಳದೆಡೆಗಿನ ಭಕ್ತಿ ಭಾವದ ನಡಿಗೆಯನ್ನು ಸಂಭ್ರಮಿಸಿದರು. ಈ ಮೂಲಕ ಏಳನೇ ವರ್ಷದ ಪಾದಯಾತ್ರೆಯು ಭಿನ್ನವೆನ್ನಿಸಿತು.

ವಿವಿದೆಡೆಗಳಿಂದ ಆಗಮಿಸಿದ ಭಕ್ತರು ವಿವಿಧ ವಲಯಗಳ ಹೆಸರಿನ ತಂಡಗಳೊಂದಿಗೆ ನಡೆಯುತ್ತಿದ್ದರು. ಉಜಿರೆ, ಧರ್ಮಸ್ಥಳ, ಬೆಳ್ತಂಗಡಿ, ಚಾರ್ಮಾಡಿ, ಕೊಕ್ಕಡ, ಮಡಂತ್ಯಾರು, ಗುರುವಾಯನಕೆರೆ, ಹೊಸಂಗಡಿ, ವೇಣೂರು, ಅಳದಂಗಡಿ, ನಾರಾವಿ ಮತ್ತು ಕಣಿಯೂರು ವಲಯಗಳ ತಂಡಗಳು ಒಟ್ಟಾಗಿ ಹೆಜ್ಜೆ ಹಾಕಿದವು.


ಶ್ರೀಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಬೋಧಕೇತೆ ಸಿಬ್ಬಂದಿ ಪಾಲ್ಗೊಂಡಿದ್ದರು. ಉಜರೆಯ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಿಂದ ಆರಂಭವಾದ ಪಾದಯಾತ್ರೆಯು ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸನ್ನಿಧಿಯಲ್ಲಿ ಸಮಾರೋಪಗೊಂಡಿತು. ವಿವಿಧ ಕಡೆಗಳಿಂದ ಆಗಮಿಸಿದ ಭಕ್ತವೃಂದ ಶಿವಧ್ಯಾನ, ಭಜನೆ ಹಾಡುತ್ತಾ ಹೆಜ್ಜೆ ಇರಿಸಿದರು.

ಕಣ್ಣು ಹಾಯಿಸಿದ ಕಡೆಗೆಲ್ಲಾ ಭಕ್ತರು. ಅಮ್ಮನ ಕೈ ಹಿಡಿದ ಕಂದಮ್ಮ, ತಂದೆಯ ಹೆಗಲೇರಿದ ಬಾಲಕ, ಪಿಸುಗುಡುತ್ತಾ ಸಾಗುತ್ತಿದ್ದ ತರುಣಿಯರು, ದೇಹ ಸ್ಪಂದಿಸದಿದ್ದರೂ ಮಂಜುನಾಥನ ಕಾಣುವ ತವಕದಿಂದ ನಡೆದು ಬರುತ್ತಿದ್ದ ಮುನ್ನಡೆದ ಹಿರಿಯರು. ಎಲ್ಲರ ಮೊಗದಲ್ಲಿ ಭಕ್ತಿಯ ಭಾವವೇ ಎದ್ದುಕಾಣುತ್ತಿತ್ತು.

ಪಾದಯಾತ್ರೆಯ ವೇಳೆ ಮುಂಜಾಗ್ರತಾ ಕ್ರಮವಾಗಿ ಆಂಬ್ಯುಲೆನ್ಸ್ ವಾಹನಗಳಿದ್ದು, ಆಯಾಸ ಮತ್ತು ಬಾಯಾರಿಕೆಗೆ ತಂಪು ಪಾನೀಯ ಹಾಗೂ ನೀರಿನ ವ್ಯವಸ್ಥೆುತ್ತು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾಾನದ ಆಡಳಿತ ಮೊಕ್ತೇಸರ ‘ಜಯರಾಘವ ಪಡ್ವೆಟ್ನಾಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಪಾದಯಾತ್ರೆಗೆ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಲಕ್ಷ್ಮಿಗ್ರೂಪ್ ಇಂಡಸ್ಟ್ರೀಸ್‌ನ ಸ್ವಯಂ ಸೇವಕರು, ಸಾರ್ವಜನಿಕ ಸ್ವಯಂ ಸೇವಕರು ಮತ್ತು ಪೊಲೀಸ್ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದರು.

ಧರ್ಮಸ್ಥಳದಲ್ಲಿ ಪಾದಯಾತ್ರೆ ಸಮಾರೋಪಗೊಂಡ ನಂತರ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಮಾತುಗಳು ಭಕ್ತವೃಂದದ ಮನಗೆದ್ದವು. ಲಕ್ಷದೀಪೋತ್ಸವದ ಸಂದರ್ಭದಲ್ಲಿ ಎಲ್ಲರೂ ಒಟ್ಟಾಗಿ ನಡೆದು ಶ್ರೀ ಮಂಜುನಾಥೇಶ್ವರ ಸನ್ನಿಧಿಗೆ ತಲುಪಿಕೊಳ್ಳುವುದನ್ನು ಭಾವೈಕ್ಯತೆಯ ವೈಶಿಷ್ಟ್ಯ ಎಂದು ಅವರು ವಿಶ್ಲೇಸಿದರು. ಇಡೀ ವರ್ಷದ ಬದುಕಿಗೆ ಬೇಕಾಗುವ ದೈಹಿಕ ಶಕ್ತಿಯನ್ನು ಪಡೆಯುವುದಕ್ಕೆ ಈ ಪಾದಯಾತ್ರೆ ನೆರವಾಗುತ್ತದೆ ಎಂದು ಹೇಳಿದ್ದು ಪಾದಯಾತ್ರಿಗಳೊಳಗೆ ಹೊಸ ಹುಮ್ಮಸ್ಸು ಮೂಡಿಸಿತು.

ಬರಹ: ಧೃತಿ ಅಂಚನ್ ; ಚಿತ್ರ: ಶಿವಪ್ರಸಾದ್ ಹಳುವಳ್ಳಿ


ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.