ಕೆರೆ ಏರಿ ಒಡೆದು ನೀರಿನ ಪ್ರವಾಹ; ದ್ವೀಪವಾದ ಹುಳಿಮಾವು


Team Udayavani, Nov 24, 2019, 9:16 PM IST

hulimavu

– ದ್ವೀಪವಾದ ಅರಕೆರೆ
– ನೂರಾರು ಕುಟುಂಬಗಳ ಸ್ಥಳಾಂತರ
– ಕಲ್ಯಾಣ ಮಂಟಪಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ

ಬೆಂಗಳೂರು: ಹೆಚ್ಚು-ಕಡಿಮೆ ಕೇವಲ ಒಂದೂವರೆ ತಿಂಗಳ ಅಂತರದಲ್ಲಿ ನಗರದ ಮೂರನೇ ಕೆರೆಯ ಏರಿ ಒಡೆದು ಅವಾಂತರ ಸೃಷ್ಟಿಸಿದ ಘಟನೆ ಭಾನುವಾರ ಅರಕೆರೆ ವಾರ್ಡ್‌ನಲ್ಲಿ ನಡೆದಿದೆ. ಭರ್ತಿಯಾಗಿದ್ದ ಕೆರೆಯ ಏರಿ ಒಡೆಯುತ್ತಿದ್ದಂತೆ ನೂರಾರು ಮನೆಗಳಿಗೆ ನೀರು ನುಗ್ಗಿದ್ದು, ಕೆಲವೇ ಹೊತ್ತಿನಲ್ಲಿ ಕೆರೆಯ ನೀರು ಒಂದು ಕಿ.ಮೀ.ವರೆಗೂ ವ್ಯಾಪಿಸಿತು. ಪರಿಣಾಮ ಹುಳಿಮಾವು ಅಕ್ಷರಶಃ ದ್ವೀಪವಾಗಿ ಪರಿಣಮಿಸಿತು.

ಸುಮಾರು 20 ಅಡಿಯಷ್ಟು ಕೆರೆ ಏರಿ ಒಡೆದಿದ್ದರಿಂದ 250ರಿಂದ 300 ಮನೆಗಳು ಜಲಾವೃತಗೊಂಡಿದ್ದು, ಅರಕೆರೆಯ ಕೆರೆ ಸುತ್ತಲಿನ ಕಿ.ಮೀ. ವ್ಯಾಪ್ತಿಯಲ್ಲಿ ಕನಿಷ್ಠ ಒಂದರಿಂದ ಗರಿಷ್ಠ ಆರು ಅಡಿಯಷ್ಟು ನೀರು ನಿಂತಿರುವುದು ಕಂಡುಬಂದಿತು. ಇದರಿಂದ ತಗ್ಗುಪ್ರದೇಶದ ಮನೆಗಳಲ್ಲಿನ ದಿನಸಿ ಸಾಮಗ್ರಿಗಳು, ಹಾಸಿಗೆ, ಟಿವಿ, ಮತ್ತಿತರ ವಸ್ತುಗಳು, ವಾಹನಗಳು ನೀರಿನಲ್ಲಿ ತೇಲಾಡಿದವು. ಒಂದೆರಡು ಆಸ್ಪತ್ರೆಗಳಿಗೂ ನೀರು ನುಗ್ಗಿದ್ದರಿಂದ ರೋಗಿಗಳು ಕೂಡ ಪರದಾಡುವಂತಾಯಿತು. ಈ ನಡುವೆ ವಿದ್ಯುತ್‌ ಸಂಪರ್ಕ ಕೂಡ ಕಡಿತಗೊಂಡಿದ್ದರಿಂದ ಜಲಾವೃತಗೊಂಡ ಪ್ರದೇಶವು ಕತ್ತಲೆಯಲ್ಲಿ ಮುಳುಗಿತ್ತು.

ಮಧ್ಯಾಹ್ನ 3ರ ಸುಮಾರಿಗೆ ಈ ಘಟನೆ ನಡೆದಿದ್ದು, ವಾರಾಂತ್ಯದ ರಜಾ ಮೂಡ್‌ನ‌ಲ್ಲಿದ್ದ ನಿವಾಸಿಗಳಿಗೆ ದಿಢೀರ್‌ ನುಗ್ಗಿದ ನೀರು ನೆಮ್ಮದಿ ಕದಡಿತು. ನೂರಾರು ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ಹತ್ತಿರದ ಕಲ್ಯಾಣ ಮಂಟಪಗಳಲ್ಲಿ ತಾತ್ಕಾಲಿಕ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಊಟ, ಕುಡಿಯುವ ನೀರು, ಹೊದಿಕೆಗಳನ್ನು ಕಲ್ಪಿಸಲಾಗಿದೆ. ಈ ಮಧ್ಯೆ ಮಧ್ಯಾಹ್ನ 12ರ ವೇಳೆಗೆ ನೀರು ನಿಧಾನವಾಗಿ ರಸ್ತೆ ಆವರಿಸುತ್ತಿದ್ದಂತೆ ತಗ್ಗುಪ್ರದೇಶಗಳಲ್ಲಿದ್ದ ಕೆಲವರು ಎಚ್ಚೆತ್ತು ಸ್ವಯಂಪ್ರೇರಿತವಾಗಿ ಮನೆಗಳನ್ನು ಖಾಲಿ ಮಾಡಿದ್ದೂ ಇದೆ. ಹುಳಿಮಾವು ಸಂಪೂರ್ಣ ಜಲಾವೃತವಾಗಿದ್ದರಿಂದ ರಸ್ತೆ ಮತ್ತು ಚರಂಡಿಯ ವ್ಯತ್ಯಾಸ ಕೂಡ ಗೊತ್ತಾಗದಂತಾಗಿತ್ತು. ಮಕ್ಕಳು, ಮಹಿಳೆಯರು, ವೃದ್ಧರಿಗೆ ಇದರ ಬಿಸಿ ತುಸು ಜೋರಾಗಿ ತಟ್ಟಿತು.

ಹತ್ತಿರದ ನ್ಯಾನೋ ಆಸ್ಪತ್ರೆಯಂತೂ ಸಂಪೂರ್ಣ ಜಲಾವೃತವಾಗಿತು. ಆಸ್ಪತ್ರೆಯ ನೆಲಮಹಡಿಯಲ್ಲಿ ತೀವ್ರ ನಿಗಾ ಘಟಕ ಇದ್ದುದರಿಂದ ಅಲ್ಲೆಲ್ಲಾ ನೀರು ನುಗಿತು. ವೈದ್ಯಕೀಯ ಉಪಕರಣಗಳು, ಔಷಧಿಗಳು, ರೋಗಿಗಳ “ಕೇಸ್‌ ಹಿಸ್ಟರಿ’ ಎಲ್ಲವೂ ನೀರುಪಾಲಾಯಿತು. ಹುಳಿಮಾವು ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಕೇವಲ 100 ಮೀಟರ್‌ ದೂರ ಕ್ರಮಿಸಲಿಕ್ಕೂ ಮೂರು ಕಿ.ಮೀ. ಸುತ್ತಿ ಬರಬೇಕಾಯಿತು. ಭಾನುವಾರ ಇದ್ದರೂ ಸಂಚಾರದಟ್ಟಣೆ ಉಂಟಾಯಿತು.

ನಾಲ್ಕು ಬೋಟು; ನೂರಾರು ಜನರ ರಕ್ಷಣೆ
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಪಡೆ ಹಾಗೂ ಸಿವಿಲ್‌ ಡಿಫೆನ್ಸ್‌ ತಂಡ, ನೂರಕ್ಕೂ ಅಧಿಕ ಜನರನ್ನು ಸುರಕ್ಷಿತ ಜಾಗಕ್ಕೆ ಕರೆತಂದು ಬಿಟ್ಟಿತು. ಅಲ್ಲದೆ, ನಾಲ್ಕು ಬೋಟುಗಳನ್ನು ನಿಯೋಜಿಸಿದ್ದು, ಅದರಲ್ಲಿಯೂ 30-40 ಜನರನ್ನು ಕರೆತರಲಾಗಿದೆ. ಧ್ವನಿವರ್ಧಕದ ಮೂಲಕವೂ ಸ್ಥಳಾಂತರಗೊಳ್ಳೂವಂತೆ ನಿವಾಸಿಗಳಿಗೆ ಮನವಿ ಮಾಡಲಾಗಿದೆ. ಸುಮಾರು ಆರೇಳು ಕಡೆಗಳಲ್ಲಿ 7 ಅಡಿಗಳಿಗಿಂತ ಹೆಚ್ಚು ನೀರು ನಿಂತಿರುವುದು ಕಂಡುಬಂದಿದೆ. ಸುರಕ್ಷಿತ ಜಾಗಕ್ಕೆ ಬಂದ ಕೆಲವರು, ತಮ್ಮ ಪೈಕಿಯವರು ಅಲ್ಲಿಯೇ (ಜಲಾವೃತಗೊಂಡ ಸ್ಥಳದಲ್ಲಿ) ಉಳಿದಿದ್ದಾರೆ ಎಂದು ಅಲವತ್ತುಕೊಂಡರು. ಅಂತಹವರನ್ನೂ ರಕ್ಷಿಸುವ ಕಾರ್ಯ ನಡೆದಿದೆ ಎಂದು ಸಿವಿಲ್‌ ಡಿಫೆನ್ಸ್‌ ಕ್ಷಿಪ್ರ ಸ್ಪಂದನಾ ಪಡೆಯ ಕಮಾಂಡಿಂಗ್‌ ಆಫೀಸರ್‌ ಚೇತನ್‌ “ಉದಯವಾಣಿ’ಗೆ ಮಾಹಿತಿ ನೀಡಿದರು.

ಈ ನಡುವೆ ಟಿಪ್ಪರ್‌ಗಳಿಂದ ಮಣ್ಣು ತಂದು ಒಡೆದ ಏರಿಯನ್ನು ಮುಚ್ಚು ಕೆಲಸ ನಡೆದಿದೆ. ಸಂಜೆ ಹೊತ್ತಿಗಾಗಲೇ ಏರಿಯಿಂದ ನೀರು ಹರಿಯುವುದು ಸ್ಥಗಿತಗೊಂಡಿತ್ತು. ಅದರ ಪರಿಣಾಮ ಮಾತ್ರ ಮುಂದುವರಿದಿತ್ತು. 132 ಎಕರೆ ವಿಸ್ತೀರ್ಣದ ಕೆರೆ ಬಿಬಿಎಂಪಿಗೆ ಸೇರಿದ್ದು, ಕೆರೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚು ನೀರು ಸಂಗ್ರಹ ಆಗಿತ್ತು ಎನ್ನಲಾಗಿದೆ. ಆದರೆ, ಅಧಿಕೃತವಾಗಿ ಈ ಕೆರೆ ಇನ್ನೂ ಪಾಲಿಕೆಗೆ ಹಸ್ತಾಂತರಗೊಂಡಿಲ್ಲ. ಬಿಡಿಎ ಸುಪರ್ದಿಯಲ್ಲಿಯೇ ಇದೆ ಎಂದು ಮೇಯರ್‌ ಎಂ. ಗೌತಮ್‌ ಕುಮಾರ್‌ ಸ್ಪಷ್ಟಪಡಿಸಿದರು.

ಒಡೆದಿದ್ದರ ಹಿಂದೆ “ಒತ್ತುವರಿ’ ಶಂಕೆ
ಕೆರೆ ಏರಿ ಒಡೆಯಲು ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಆದರೆ, ಒತ್ತುವರಿಗೆ ಅನುಕೂಲಕ್ಕಾಗಿ ಕಿಡಿಗೇಡಿಗಳು ಕೆರೆ ನೀರು ಚರಂಡಿಗೆ ಹರಿಸುವಾಗ ಘಟನೆ ನಡೆದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಕೆರೆ ಭರ್ತಿಯಾದರೆ ಒತ್ತುವರಿ ಮಾಡುವುದು ಅಸಾಧ್ಯ. ಹಾಗಾಗಿ, ರಾಜಕಾಲುವೆ ಅಥವಾ ಚರಂಡಿಗೆ ನೀರು ಹರಿಸುತ್ತಿದ್ದರು. ಈ ವೇಳೆ ಏರಿ ಒಡೆದು ಅವಘಡ ಸಂಭವಿಸಿದೆ ಎನ್ನಲಾಗಿದೆ. ಆದರೆ, ಬಿಡಿಎ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಪೂರ್ವಸಿದ್ಧತೆ ಮಾಡಿಕೊಳ್ಳದೆ, ದುರಸ್ತಿ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಬಿಬಿಎಂಪಿ ಅರಕೆರೆ ವಾರ್ಡ್‌ ಸದಸ್ಯೆ ಭಾಗ್ಯಲಕ್ಷ್ಮೀ ಮುರಳಿ ಆರೋಪಿಸಿದ್ದಾರೆ.

ಕಾಮಗಾರಿ ನಡೆಯುತ್ತಿರಲಿಲ್ಲ; ಮೇಯರ್‌
ಕೆರೆಯಲ್ಲಿ ಯಾವುದೇ ಕಾಮಗಾರಿ ನಡೆಯುತ್ತಿರಲಿಲ್ಲ. ಕೆರೆಯು ಭರ್ತಿಯಾಗಿತ್ತು. ಸ್ಥಳೀಯ ಕೆಲ ಕಿಡಿಗೇಡಿಗಳು ಪೈಪ್‌ ಮೂಲಕ ನೀರನ್ನು ಚರಂಡಿಗೆ ಹರಿಸಲು ಯತ್ನಿಸಿದ್ದು, ನೀರಿನ ಒತ್ತಡಕ್ಕೆ ಕೆರೆ ಒಡೆದಿರುವ ಸಾಧ್ಯತೆ ಇದೆ. ಈ ಸಂಬಂಧ ಸ್ಥಳೀಯ ಪೊಲೀಸ್‌ ಠಾಣೆಗೆ ಪಾಲಿಕೆಯಿಂದ ದೂರು ದಾಖಲಿಸಲಾಗುವುದು.
– ಎಂ.ಗೌತಮ್‌ ಕುಮಾರ್‌, ಮೇಯರ್‌.

ಎಫ್ಐಆರ್‌ ದಾಖಲು
ಕಿಡಿಗೇಡಿಗಳಿಂದ ಈ ಕೃತ್ಯ ಸಂಭವಿಸಿರುವ ಸಾಧ್ಯತೆ ಇದೆ. ಅದೇನೇ ಇರಲಿ, ಘಟನೆ ಬಗ್ಗೆ ಎಫ್ಐಆರ್‌ ದಾಖಲಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
– ಬಿ.ಎಚ್‌. ಅನಿಲ್‌ ಕುಮಾರ್‌, ಆಯುಕ್ತರು, ಬಿಬಿಎಂಪಿ.

ಪಾಲಿಕೆಗೆ ಸಹಕಾರ; ಬಿಡಿಎ
ಹುಳಿಮಾವು ಕೆರೆ ಪ್ರಾಧಿಕಾರದ ಅಧೀನದಲ್ಲಿತ್ತು. ಈ ಹಿಂದೆಯೇ ಬಿಬಿಎಂಪಿಗೆ ಹಸ್ತಾಂತರಿಸಲಾಗಿದೆ. ಆದಾಗ್ಯೂ ಕೆರೆ ಏರಿ ಒಡೆದ ತಕ್ಷಣ ಸಂಬಂಧಪಟ್ಟ ಬಿಡಿಎ ಎಂಜಿನಿಯರ್‌ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಬಿಬಿಎಂಪಿಗೆ ಅಗತ್ಯ ಸಹಕಾರ ನೀಡಲಾಗುತ್ತಿದೆ.
-ಡಾ.ಜಿ.ಸಿ.ಪ್ರಕಾಶ್‌, ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ).

ಟಾಪ್ ನ್ಯೂಸ್

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.