ದ್ವೀಪದಲ್ಲಿ ರಾತ್ರಿ ಕಳೆದ ನಾಲ್ವರು!
ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ನಡೆದ ಘಟನೆ ; ಏರಿದ ನೀರಿನ ಮಟ್ಟ; ತಪ್ಪಿದ ಕೊನೆಯ ಬೋಟ್
Team Udayavani, Nov 25, 2019, 5:05 AM IST
ಮಲ್ಪೆ: ಪ್ರವಾಸಿಗರನ್ನು ಕರೆದೊಯ್ಯುವ ಕೊನೆಯ ಬೋಟ್ ತಪ್ಪಿದ ಕಾರಣ ವಿಹಾರಕ್ಕೆ ಬಂದಿದ್ದ ಕೇರಳ ಮೂಲದ ಮಹಿಳೆ ಸಹಿತ ನಾಲ್ವರು ಶನಿವಾರ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲೇ ರಾತ್ರಿ ಕಳೆದ ಘಟನೆ ನಡೆದಿದೆ.
ಕೇರಳದ ಕೊಚ್ಚಿನ್ ನಿವಾಸಿ ಗಳಾದ ಜಸ್ಟಿನ್ (34), ಶೀಜಾ (33), ಜೋಶ್ (28) ಮತ್ತು ಹರೀಶ್ (17) ಶನಿವಾರ ರಾತ್ರಿ ಪೂರ್ತಿ ದ್ವೀಪದಲ್ಲಿ ದ್ದರು. ಅವರನ್ನು ರವಿವಾರ ಬೆಳಗ್ಗೆ 7.30ಕ್ಕೆ ತೀರಕ್ಕೆ ಸುರಕ್ಷಿತವಾಗಿ ಕರೆದುಕೊಂಡು ಬರಲಾಗಿದೆ. ಮಲ್ಪೆ ಠಾಣೆಯ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದು, ಸುರಕ್ಷಿತವಾಗಿ ಕೇರಳಕ್ಕೆ ಕಳುಹಿಸಿದ್ದಾರೆ.
ಜಸ್ಟಿನ್ ಮತ್ತು ಶೀಜಾ ಕೇರಳದಲ್ಲಿ ಹೋಮ್‌ಸ್ಟೇಯಂತಹ ಸಣ್ಣ ಉದ್ಯಮ ನಡೆಸುತ್ತಿದ್ದು, ಜೋಶ್ ಇವರೊಂದಿಗೆ ಕೆಲಸಕ್ಕಿರುವಾತ ಎನ್ನಲಾಗಿದೆ. ಹರೀಶ್ 17 ವರ್ಷದೊಳಗಿನ ಕೊಚ್ಚಿನ್ ಫುಟ್ಬಾಲ್ ಅಕಾಡೆಮಿಯ ಗೋಲ್‌ಕೀಪರ್ ಆಗಿದ್ದ ಎಂದು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಈ ನಾಲ್ವರು ನ. 21ರಂದು ಕೇರಳದಿಂದ ರೈಲಿನಲ್ಲಿ ಹೊರಟು ಉಡುಪಿಗೆ ಬಂದಿ ದ್ದರು. ಉಡುಪಿಯ ವಿವಿಧ ಸ್ಥಳಗಳನ್ನು ಸಂದರ್ಶಿಸಿದ ಬಳಿಕ ನ. 22ರಂದು ಗೋವಾಕ್ಕೆ ತೆರಳಿ, ನ. 23ರಂದು ಮತ್ತೆ ಉಡುಪಿಗೆ ಬಂದಿದ್ದರು. ಅಪರಾಹ್ನ 12.30ಕ್ಕೆ ಸೈಂಟ್ ಮೇರಿಸ್ ದ್ವೀಪ ತಲುಪಿದ್ದರು ಎನ್ನಲಾಗಿದೆ.
ಬಂಡೆ ಮೇಲೆ ಏರಿದ್ದರು!
ಸೈಂಟ್ ಮೇರಿಸ್ ದ್ವೀಪದಲ್ಲಿ ವಿಹರಿಸುತ್ತ ಈ ನಾಲ್ವರು ದೊಡ್ಡ ಬಂಡೆಯೊಂದನ್ನು ಏರಿದ್ದರು. ಸಂಜೆ ಬಂಡೆಯ ಸುತ್ತ ನೀರಿನ ಮಟ್ಟ ಏರಿದ್ದರಿಂದ ಇಳಿದು ಬರಲು ಅವರಿಗೆ ಸಾಧ್ಯವಾಗಲಿಲ್ಲ. ನೀರಿನ ಮಟ್ಟ ಸ್ವಲ್ಪ ಇಳಿಯುತ್ತಿದ್ದಂತೆ ಬೋಟ್ ಹೊರಡುವ ಸ್ಥಳಕ್ಕೆ ಈ ನಾಲ್ವರು ಬಂದಾಗ ಕೊನೆಯ ಬೋಟ್ ದ್ವೀಪದಿಂದ ಮಲ್ಪೆಗೆ ವಾಪಸಾಗಿತ್ತು.
“ಸಂಪರ್ಕ ಸಾಧ್ಯವಾಗಿಲ್ಲ’
ಯಾರನ್ನೂ ಸಂಪರ್ಕಿಸಲು ಸಾಧ್ಯವಾಗದೆ ಈ ನಾಲ್ವರು ಇಡೀ ರಾತ್ರಿ ದ್ವೀಪದಲ್ಲೇ ಕಳೆಯುವಂತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರವಿವಾರ ಬೆಳಗ್ಗೆ ಬೋಟ್‌ನವರು ಈ ನಾಲ್ವರನ್ನು ಗಮನಿಸಿದ್ದು, ವಿಚಾರಿಸಿ ತೀರಕ್ಕೆ ಕರೆತಂದಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದು, ದ್ವೀಪದಲ್ಲಿ ರಾತ್ರಿ ವಾಸ್ತವ್ಯ ಹೂಡಲು ಅವಕಾಶವಿಲ್ಲವಾದುದರಿಂದ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.
ಹೆಚ್ಚುವರಿ ಭದ್ರತಾ
ಸಿಬಂದಿ ನೇಮಕ
ಕೊನೆಯ ಬೋಟ್ ತಪ್ಪಿಹೋದ ಪರಿಣಾಮ ನಾಲ್ವರು ಪ್ರವಾಸಿಗರು ಸೈಂಟ್ ಮೇರಿಸ್ ದ್ವೀಪದಲ್ಲಿ ರಾತ್ರಿ ಉಳಿದುಕೊಂಡಿರುವುದು ವಿಚಾರಣೆ ಯಿಂದ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳದ ಸ್ಥಳೀಯ ಪೊಲೀಸ್ ಠಾಣೆಯಿಂದ ಮಾಹಿತಿ ಕಲೆ ಹಾಕಿದ್ದೇವೆ. ನಾಲ್ವರು ಕೊಟ್ಟ ಹೇಳಿಕೆ ಹೊಂದಾಣಿಕೆಯಾಗಿರುವುದರಿಂದ ಕಳುಹಿಸಿಕೊಟ್ಟಿದ್ದೇವೆ. ಪ್ರವಾಸಿಗರ ಸುರಕ್ಷತೆ ಮುಖ್ಯವಾಗಿರುವ ಹಿನ್ನೆಲೆಯಲ್ಲಿ ದ್ವೀಪದಲ್ಲಿ ಹೆಚ್ಚಿನ ಭದ್ರತಾ ಸಿಬಂದಿ ನಿಯೋಜಿಸುವಂತೆ ಸೂಚಿಸುತ್ತೇವೆ.
-ನಿಶಾ ಜೇಮ್ಸ್,ಎಸ್ಪಿ ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.