ಅಯೋಧ್ಯೆ ತೀರ್ಪು : ಮೇಲ್ಮನವಿ ಸಲ್ಲಿಸಿದರೆ ಸಾಮರಸ್ಯಕ್ಕೆ ಅಡ್ಡಿ
Team Udayavani, Nov 25, 2019, 1:13 AM IST
ಹೊಸದಿಲ್ಲಿ: ಸುಪ್ರೀಂ ಕೋರ್ಟ್ ಅಯೋಧ್ಯೆ ವಿವಾದದ ಕುರಿತು ನೀಡಿರುವ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಅರ್ಜಿ ಸಲ್ಲಿಸಿದರೆ, ಅದು ಮುಸ್ಲಿಮರ ಹಿತಾಸಕ್ತಿಗಾಗಿ ಅರ್ಜಿ ಸಲ್ಲಿಸಿದಂತೆ ಆಗುವುದಿಲ್ಲ. ಬದಲಾಗಿ ದೇಶದಲ್ಲಿ ಕೋಮು ಸಾಮರಸ್ಯ ಹದಗೆಡಿಸಿದಂತಾಗುತ್ತದೆ ಎಂದು ರಾಷ್ಟ್ರೀಯ ಅಲ್ಪಸಂಖ್ಯಾಕರ ಆಯೋಗದ ಅಧ್ಯಕ್ಷ ಘಾಯೋರುಲ್ ಹಸನ್ ರಿಜ್ವಿ ಹೇಳಿದ್ದಾರೆ.
ಅರ್ಜಿ ಸಲ್ಲಿಸುವುದರಿಂದ ನಾವು ರಾಮಮಂದಿರ ನಿರ್ಮಿಸಲು ಅಡ್ಡಗಾಲು ಹಾಕುತ್ತಿದ್ದೇವೆ ಎಂಬ ಭಾವನೆ ಹಿಂದೂಗಳಲ್ಲಿ ಮೂಡುತ್ತದೆ. ಇದಕ್ಕೆ ನಾವು ಅವಕಾಶ ಕೊಡದೇ ದೇಶದ ಏಕತೆಯನ್ನು ಗೌರವಿಸಬೇಕು. ಮಸೀದಿ ನಿರ್ಮಾಣಕ್ಕೆ 5 ಎಕರೆ ಬದಲಿ ಜಾಗ ನೀಡಲಾಗಿದೆ. ಆ ನಿರ್ಧಾರವನ್ನು ಮುಸ್ಲಿಮರು ಸ್ವಾಗತಿಸಬೇಕು ಎಂದು ಅವರು ಹೇಳಿದ್ದಾರೆ.
ತಡೆಯಲು ಸಾಧ್ಯವಿಲ್ಲ: ಈ ನಡುವೆ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ರವಿವಾರ ಜಾರ್ಖಂಡ್ನ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಅವರು, ಮಂದಿರ ನಿರ್ಮಾಣದ ಹಾದಿಯನ್ನು ಸುಪ್ರೀಂ ಕೋರ್ಟ್ ಸುಗಮಗೊಳಿಸಿದೆ. ಅಯೋಧ್ಯೆಯಲ್ಲಿ ಭವ್ಯ ಮಂದಿರ ನಿರ್ಮಾಣವಾಗುವುದು ಖಚಿತ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.