ಗುಂಡಿ ಬಿದ್ದ ರಸ್ತೆಯಲ್ಲಿ ಸವಾರರ ಸರ್ಕಸ್‌: ಸಂಚಾರ ಅಯೋಮಯ


Team Udayavani, Nov 25, 2019, 10:51 AM IST

bk-tdy-1

ಮುಧೋಳ: ತಾಲೂಕಿನ ಹಲಗಲಿ-ವಜ್ಜರಮಟ್ಟಿ ಗ್ರಾಮದ ಸಂಪರ್ಕ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ.

11 ಕಿ.ಮೀ. ಉದ್ದದ ರಸ್ತೆ ನಿರ್ಮಾಣಗೊಂಡ ಬಳಿಕ ದುರಸ್ತಿಯಾಗದ ಕಾರಣ ಡಾಂಬರು ಕಿತ್ತುಬಂದಿದೆ. ಸವಾರರು ರಸ್ತೆಯಲ್ಲಿ ಸಂಚರಿಸುವಾಗ ಸರ್ಕಸ್‌ ಮಾಡುವಂತಾಗಿದೆ. ವಜ್ಜರಮಟ್ಟಿ ಹಲಗಲಿಗೆ ಸಂಪರ್ಕ ಕಲ್ಪಿಸುವ ರಸ್ತೆಯಿಂದ ಮರಿಕಟ್ಟಿ, ಬರಗಿ ಸೇರಿ ತಿಮ್ಮಾಪುರ ಕ್ರಾಸ್‌ಗೆ ತೆರಳಬಹುದು. ಈ ಮಾರ್ಗದಲ್ಲಿ ಸಂಚರಿಸುವುದರಿಂದ ಅಂದಾಜು 15 ಕಿ.ಮೀ. ಅಂತರ ಕಡಿಮೆಯಾಗುವುದರಿಂದ ಸಾರ್ವಜನಿಕರಿಗೆ ಹಣ ಹಾಗೂ ಸಮಯದ ಉಳಿತಾಯವಾಗುತ್ತದೆ.ಆದರೆ, ರಸ್ತೆ ಸಂಪೂರ್ಣ ಹಾಳಾಗಿರುವುದರಿಂದ ಸಾರ್ವಜನಿಕರು ಈ ಮಾರ್ಗದಲ್ಲಿ ಸಂಚರಿಸಲು ಹಿಂದೇಟು ಹಾಕುವಂತಾಗಿದೆ.

ಕೃಷಿಕರ ಓಡಾಟ ಹೆಚ್ಚು: ಮುಧೋಳ ನಗರದಿಂದ ಹಲಗಲಿ ಗ್ರಾಮಕ್ಕೆ ಬಹುತೇಕ ಬಸ್‌ಗಳು ಮಂಟೂರು ಅಮಲಝರಿ ಮಾರ್ಗವಾಗಿ ಓಡಾಡುವುದರಿಂದ ವಜ್ಜರಮಟ್ಟಿ-ಹಲಗಲಿ ಗ್ರಾಮದ ರಸ್ತೆಯಲ್ಲಿ ಕೃಷಿಕರು ಹಾಗೂ ಖಾಸಗಿ ವಾಹನ ಸವಾರರೇ ಹೆಚ್ಚು ಓಡಾಡುತ್ತಾರೆ. ರಸ್ತೆಹಾಳಾಗಿರುವುದರಿಂದ ಕಬ್ಬು ತುಂಬಿದ ಟ್ರಾಕ್ಟರ್‌ ಗಳು ಸಂಚರಿಸುವ ವೇಳೆ ಅಪಘಾತ ಸಂಭವ ಹೆಚ್ಚಿರುತ್ತದೆ. ಬಹುತೇಕ ಕಡೆಯಲ್ಲಿ ಡಾಂಬರು ಕಿತ್ತು ಖಡಿ ಎದ್ದಿದ್ದರಿಂದ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡ ಘಟನೆ ಹಲವಾರು ಬಾರಿ ಈ ರಸ್ತೆಯಲ್ಲಿ ಸಂಭವಿಸಿದೆ.

ಬಸ್‌ ಸೌಕರ್ಯ ಹೆಚ್ಚಲಿ: ಸದ್ಯ ಮುಧೋಳ-ವಜ್ಜರಮಟ್ಟಿ ಮಾರ್ಗವಾಗಿ ಹಲಗಲಿಗೆ ಬೆಳಗ್ಗೆ ಹಾಗೂ ಸಂಜೆ ವೇಳೆ ಮಾತ್ರ ಎರಡು ಬಸ್‌ಗಳು ಸಂಚರಿಸುತ್ತವೆ. ಬಹುತೇಕ ಬಸ್‌ ಗಳು ಮಂಟೂರ ಮಾರ್ಗದಿಂದ ತೆರಳುವುದರಿಂದ ಅಂದಾಜು ಆರು ಕಿ.ಮೀ. ಅಂತರ ಹೆಚ್ಚಾಗುತ್ತದೆ. ಅಲ್ಲದೆ ವಜ್ಜರಮಟ್ಟಿ ಮಾರ್ಗದಲ್ಲಿ ಹಲವು ಶಿಕ್ಷಣ ಸಂಸ್ಥೆಗಳಿವೆ. ಮುಧೋಳ ನಗರದಲ್ಲಿನ ತಹಶೀಲ್ದಾರ್‌ ಕಚೇರಿಯೂ ಇದೇ ಮಾರ್ಗದಲ್ಲಿ ಇರುವುದರಿಂದ ಈ ಮಾರ್ಗದಲ್ಲಿ ಬಸ್‌ ಸೌಕರ್ಯ ಹೆಚ್ಚಿಸುವುದರಿಂದ ಆಡಳಿತಾತ್ಮಕ ಕಾರ್ಯಕ್ಕೆ ಹೆಚ್ಚು ಅನುಕೂಲವಾಗುತ್ತದೆ ಎಂಬುದು ಸಾರ್ವಜನಿಕರ ಅಭಿಪ್ರಾಯ. ಹಲಗಲಿಯಿಂದ ವಜ್ಜರಮಟ್ಟಿಗೆ ತೆರಳಲು ಈ ರಸ್ತೆ ಹೆಚ್ಚು ಅನುಕೂಲವಾಗಿದೆ. ಆದರೆ ರಸ್ತೆ ಹಾಳಾಗಿರುವುದರಿಂದ ರಸ್ತೆಯಲ್ಲಿ ಸಂಚರಿಸುವುದು ಕಷ್ಟವಾಗಿದೆ. ಈ ಮಾರ್ಗ ಸರಿಪಡಿಸಿ ಬಸ್‌ ಸೌಕರ್ಯ ಒದಗಿಸಿದರೆ ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗುತ್ತದೆ.

 

-ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.