ಅಕ್ರಮ ಮದ್ಯ ಮಾರಾಟ: ಅಧಿಕಾರಿಗಳ ಜಾಣಕುರುಡು

ಮದ್ಯಕ್ಕೆ ದಾಸರಾದವರ ಕುಟುಂಬ ಬೀದಿಪಾಲು ಮದ್ಯ ಮಾರಾಟಕ್ಕೆ ಕೆಲ ಅಧಿಕಾರಿಗಳ ಪ್ರೋತ್ಸಾಹ

Team Udayavani, Nov 25, 2019, 2:30 PM IST

25-November-23

„ಎಚ್‌.ಕೆ.ಬಿ. ಸ್ವಾಮಿ
ಸೊರಬ:
ಪಟ್ಟಣ ಸೇರಿ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ, ಕ್ರಮ ಕೈಗೊಳ್ಳಬೇಕಾದ ಅಬಕಾರಿ ಇಲಾಖೆಯ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿರುವುದು ಸಾರ್ವಜನಿಕರಿಂದ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.

ಇಲ್ಲಿನ ಕಾನಕೇರಿ ಸೇರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಕೃಷಿ ಕಾರ್ಮಿಕರು, ಯುವಕರು ಮದ್ಯದ ಚಟಕ್ಕೆ ದಾಸರಾಗುತ್ತಿದ್ದು, ಅವರ ಕುಟುಂಬಗಳು ಬೀದಿ ಪಾಲಾಗುತ್ತಿವೆ. ಗ್ರಾಮೀಣ ಪ್ರದೇಶದ ಗೂಡಂಗಡಿ, ಕಿರಾಣಿ ಅಂಗಡಿಗಳಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ.

ಅಧಿಕಾರಿಗಳಿಂದ ಟಾರ್ಗೆಟ್‌: 2019ರ ಜುಲೈನಿಂದ ಅಕ್ಟೋಬರ್‌ ಅಂತ್ಯದವರೆಗೆ
55050 ಬಾಕ್ಸ್‌ ಮದ್ಯ ಮಾರಾಟದ ಗುರಿಯನ್ನು ವಲಯ ಅಬಕಾರಿ ಇಲಾಖೆ ಹೊಂದಿತ್ತು. ಈ ಪೈಕಿ 51871 ಬಾಕ್ಸ್‌ ಮದ್ಯ ಮಾರಾಟ ಮಾಡಲಾಗಿದೆ. ಕಳೆದ ಜುಲೈನಲ್ಲಿ ಶೇ. 85, ಆಗಸ್ಟ್‌ನಲ್ಲಿ ಶೇ. 99, ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ನಲ್ಲಿ ಶೇ. 97ರಷ್ಟು ಗುರಿ ತಲುಪಲಾಗಿದೆ. ಮೇಲಧಿ ಕಾರಿಗಳಿಂದ ಪ್ರಶಂಸೆ ಪಡೆಯಲು ಸ್ಥಳೀಯ ಮದ್ಯದ ಅಂಗಡಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗುತ್ತಿದೆ.

ಇದರಿಂದ ಮದ್ಯ ಮಾರಾಟಗಾರರು (ಸನ್ನದುದಾರರು) ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುವವರಿಗೆ ಮದ್ಯ ಪೂರೈಕೆ ಮಾಡುತ್ತಿದ್ದು, ಇವರಿಗೆ ಅಬಕಾರಿ ಇಲಾಖೆಯ ಅಧಿಕಾರಿಗಳೇ ಸಾಥ್‌ ನೀಡುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಮದ್ಯ ಮಾರಾಟಗಾರರಿಗೆ ಕಿರುಕುಳ: ಮಾಸಿಕವಾಗಿ ಪ್ರತಿ ಮದ್ಯ ಮಾರಾಟ ಮಳಿಗೆದಾರರಿಗೆ ಅಬಕಾರಿ ಇಲಾಖೆಯಿಂದ ಗುರಿ ನೀಡಲಾಗುತ್ತದೆ. ಗುರಿ ತಲುಪದವರು ಅಧಿ ಕಾರಿಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ತಾಲೂಕಿನಲ್ಲಿ ಅಧಿಕೃತವಾಗಿ 16 ಮಂದಿ ಪರವಾನಗಿ ಪಡೆದವರಾಗಿದ್ದಾರೆ. ಸಿಎಲ್‌2 ಪರವಾನಗಿ ಪಡೆದವರು 9, ಸಿಎಲ್‌7 ಮತ್ತು ಸಿಎಲ್‌ 9 ಪರವಾನಗಿ ಪಡೆದವರು ತಲಾ 2 ಮಂದಿ ಹಾಗೂ ಮೂರು ಎಂಎಸ್‌ಐಎಲ್‌ನ 3 ಮಾರಾಟ ಮಳಿಗೆಗಳು ಕಾರ್ಯ ನಿರ್ವಹಿಸುತ್ತಿವೆ. ಇವುಗಳಲ್ಲಿ ಕೆಲವರು ಇಲಾಖೆಯ ನಿಯಮಗಳನ್ನು ಸಹ ಗಾಳಿಗೆ ತೂರಿ ಮದ್ಯ ಮಾರಾಟ ಮಾಡುತ್ತಿದ್ದರೂ, ಅಧಿಕಾರಿಗಳು ಇದ್ಯಾವುದರ ಪರಿವೇ ಇಲ್ಲದಂತೆ ವರ್ತಿಸುತ್ತಿದ್ದಾರೆ.

ಕೇಸು ಇಲ್ಲ-ಕಂಪ್ಲೆಂಟು ಇಲ್ಲ: ಜುಲೈನಿಂದ ಸೆಪ್ಟೆಂಬರ್‌ವರೆಗೆ ಸ್ಥಳೀಯ ಅಬಕಾರಿ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿ  ಹಲವು ಅನುಮಾನಕ್ಕೆ ಕಾರಣವಾಗುತ್ತದೆ. ಜುಲೈನಲ್ಲಿ ಕೇವಲ 0.090 ಲೀ. ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಆಗಸ್ಟ್‌ನಲ್ಲಿ 0.240 ಲೀ. ಮದ್ಯ, ಸೆಪ್ಟೆಂಬರ್‌ನಲ್ಲಿ 0.400 ಲೀ., ಮದ್ಯ ವಶಪಡಿಸಿಕೊಳ್ಳಲಾಗಿದ್ದು, ಇವೆಲ್ಲವೂ ನೆಪ ಮಾತ್ರಕ್ಕೆ ಎನ್ನುವ ಸತ್ಯ ಮೇಲ್ನೋಟಕ್ಕೆ ಗೋಚರಿಸುತ್ತದೆ. ಇತ್ತ ಅಧಿಕಾರಿಗಳು ಮೇಲಧಿಕಾರಿಗಳಿಂದ ಪ್ರಶಂಸೆಗೆ ಪಾತ್ರರಾಗಲು ಒಂದೆಡೆ ಅಕ್ರಮ ಮದ್ಯ ಮಾರಾಟಕ್ಕೆ ಪ್ರೋತ್ಸಾಹ ನೀಡುತ್ತಿದ್ದರೆ, ಮತ್ತೂಂದೆಡೆ ಸಣ್ಣ ಪುಟ್ಟ ಪ್ರಕರಣಗಳನ್ನು ದಾಖಲಿಸುವ ಮೂಲಕ ದಕ್ಷವಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ ಎಂದು ಸಾರ್ವಜನಿಕರಿಂದ ಮೆಚ್ಚುಗೆಗೆ ಪಾತ್ರರಾಗಲು ಯತ್ನಿಸುತ್ತಿದ್ದಾರೆ. ಒಟ್ಟಾರೆ ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಬೇಲಿಯೇ ಎದ್ದು ಹೊಲ ಮೇಯ್ದಂತೆ ಎನ್ನುವ ಸ್ಥಿತಿ ನಿರ್ಮಾಣವಾಗಿದೆ.

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.