ಎಲ್ಲ ರಾಜ್ಯಗಳಲ್ಲಿನ ಮಾಲಿನ್ಯದ ವರದಿ ನೀಡಿ ಎಂದ ಸುಪ್ರೀಂ ಕೋರ್ಟ್
Team Udayavani, Nov 26, 2019, 5:49 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಎಲ್ಲ ರಾಜ್ಯಗಳಲ್ಲಿನ ವಾಯು ಹಾಗೂ ಕುಡಿಯುವ ನೀರಿನ ಗುಣಮಟ್ಟ, ಆ ರಾಜ್ಯಗಳಲ್ಲಿ ತ್ಯಾಜ್ಯ ವಿಲೇವಾರಿಗೆ ಅಳವಡಿಸಿಕೊಳ್ಳಲಾಗಿರುವ ಕ್ರಮಗಳ ಬಗ್ಗೆ ಸಮಗ್ರ ವರದಿ ನೀಡಬೇಕೆಂದು ಸುಪ್ರೀಂಕೋರ್ಟ್ ಸೋಮವಾರ ಕೇಂದ್ರ, ಎಲ್ಲ ರಾಜ್ಯ ಸರಕಾರಗಳಿಗೆ ಸೂಚಿಸಿದೆ.
ದಿಲ್ಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ ಹಿನ್ನೆಲೆಯಲ್ಲಿ ದೇಶದ ಇನ್ನಿತರ ರಾಜ್ಯಗಳಲ್ಲಿ ಇರಬಹುದಾದ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ದೀಪಕ್ ಗುಪ್ತಾ ಅವರುಳ್ಳ ಪೀಠ, ಎಲ್ಲ ರಾಜ್ಯಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿತು. ಜತೆಗೆ, ದಿಲ್ಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸ್ಮಾಗ್ ಟವರ್ ಸ್ಥಾಪಿಸುವ ಬಗ್ಗೆ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳುವಂತೆ ಕೇಂದ್ರಕ್ಕೆ ತಿಳಿಹೇಳಿತು.
‘ಒಂದೇ ಬಾರಿಗೆ ಕೊಂದುಬಿಡಿ’
ತನ್ನ ಕಟ್ಟುನಿಟ್ಟಿನ ಸೂಚನೆಯ ಹೊರತಾಗಿಯೂ ಪಂಜಾಬ್, ಹರಿಯಾಣಗಳಲ್ಲಿ ಕಳೆಗಳಿಗೆ ಬೆಂಕಿ ಇಡುವ ರೈತರ ಚಟುವಟಿಕೆಗಳನ್ನು ಸಂಪೂರ್ಣವಾಗಿ ತಡೆಗಟ್ಟುವಲ್ಲಿ ಅಲ್ಲಿನ ಸರಕಾರಗಳು ವಿಫಲವಾಗಿರುವುದಕ್ಕೆ ನ್ಯಾಯ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಮಾಲಿನ್ಯಕ್ಕೆ ಮೂಲ ಕಾರಣವಾದ ಕಳೆಗಳ ದಹನವನ್ನು ತಡೆಯಲು ನಿಮ್ಮಿಂದ (ಸರಕಾರಗಳು) ಸಾಧ್ಯವಾಗುತ್ತಿಲ್ಲ. ಈ ಮೂಲಕ ಜನರನ್ನು ಬಲ ವಂತವಾಗಿ ಗ್ಯಾಸ್ ಚೇಬರ್ ನಲ್ಲಿ ಜೀವಿಸುವಂತೆ ಮಾಡಿದ್ದೀರಿ. ಜನರನ್ನು ಹಾಗೆ ನಿಧಾನವಾಗಿ ಕೊಲ್ಲುವುದಕ್ಕಿಂತ, ಒಂದಿಷ್ಟು ಸ್ಫೋಟಕಗಳನ್ನು ತಂದು ಸ್ಫೋಟಿಸಿ ಜನರನ್ನು ಒಂದೇ ಬಾರಿಗೆ ಕೊಂದುಬಿಡಿ’ ಎಂದು ಸರಕಾರಗಳ ವಿರುದ್ಧ ನ್ಯಾಯ ಮೂರ್ತಿಗಳು ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ
Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
MUST WATCH
ಹೊಸ ಸೇರ್ಪಡೆ
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Paddana-Tulu folk songs: ಮರೆಯಾಗದಿರಲಿ ಪಾಡ್ದನನವೆಂಬ ಸಂಸ್ಕೃತಿಯ ಸಂಪರ್ಕ ಕೊಂಡಿ
Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.