ಕ್ಷಯ ರೋಗ ಪತ್ತೆ ಆಂದೋಲನ
Team Udayavani, Nov 26, 2019, 1:27 PM IST
ಹೂವಿನಹಿಪ್ಪರಗಿ: ಗ್ರಾಮೀಣ ಭಾಗದ ಜನರ ಆರೋಗ್ಯ ಕಾಪಾಡಲು ಸರಕಾರ ಹಲವು ಆರೋಗ್ಯಕರ ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳ ಉಪಯೋಗ ಪಡೆದು ರೋಗ ಮುಕ್ತರಾಗಿ ಎಂದು ಹೂವಿನಹಿಪ್ಪರಗಿ ವಲಯ ಆರೋಗ್ಯಶಿಕ್ಷಣಾಕಾರಿ ಡಾ| ಬಿ.ಎಸ್. ಪಾಟೀಲ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ರೋಗ ಅಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಾಡಗಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪರಿಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣಾ ಕಾರ್ಯಕ್ರಮ ಹಾಗೂ ಕ್ಷಯ ರೋಗ ಪತ್ತೆ ಆದೋಲನ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎರಡು ವಾರಕ್ಕಿಂತ ಹೆಚ್ಚು ಕೆಮ್ಮು ನೆಗಡಿ, ಜ್ವರದಿಂದ ಬಳಲುತ್ತಿದ್ದರೆ, ಕೆಲವು ವೇಳೆ ಕಪ ಜೊತೆಗೆ ರಕ್ತಸ್ರಾವ ಕಾಣುತ್ತದೆ, ಜ್ವರವು ವಿಶೇಷವಾಗಿ ರಾತ್ರಿ ವೇಳೆ ಹೆಚ್ಚು ಕಾಣಿಸುತ್ತದೆ. ದೇಹದ ತೂಕದಲ್ಲಿ ಭಾರಿ ಇಳಿಕೆ, ದೇಹದಲ್ಲಿ ಬೆವರು ಬೀಡುವುದು, ಹಸಿವಾಗದಿರುವುದು ಕ್ಷಯ ರೋಗದ ಮುಖ್ಯ ಲಕ್ಷಣಗಳು ಎಂದು ಹೇಳಿದರು.
ನಿರಂತರ ಚಿಕಿತ್ಸೆಯಿಂದ ಕ್ಷಯ ರೋಗವನ್ನು ನಿಯಂತ್ರಣಕ್ಕೆ ಬರುತ್ತದೆ. ಟಿಬಿ ರೋಗವು ಶಾಸ್ವಕೋಶಕ್ಕೆ ಅಲ್ಲದೆ ದೇಹದ ಎಲ್ಲ ಭಾಗಕ್ಕೆ ಹರಡಬಹುದು. ಡಿ. 10ರವರೆಗೆ ಕ್ಷಯ ರೋಗ ಪತ್ತೆ ಹಚ್ಚುವಹಾಗೂ ಪ್ರತಿಯೊಂದು ಮನೆ ಮನೆಗೆ ತೆರಳಿ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದರು. ಈ ವೇಳೆ ಕಿರಿಯ ಆರೋಗ್ಯ ಸಹಾಯಕ ಎಂ.ಎಸ್. ಬಾಗೇವಾಡಿ, ಮಹಿಳಾ ಆರೋಗ್ಯ ಸಾಹಾಯಕಿ ಎನ್.ಎಚ್. ನಿವಾಳಕೋಡಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಆಂದೋಲನಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.