“ಮಹಾ” ರಾಜಕೀಯ; ಬಿಜೆಪಿಯ ಕಾಳಿದಾಸ್ ನೇಮಕ, ಪ್ರೋ ಟೆಮ್ ಸ್ಪೀಕರ್ ಅಂದರೆ ಏನು?
Team Udayavani, Nov 26, 2019, 6:59 PM IST
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಪ್ರೋ-ಟೆಮ್ (ಹಂಗಾಮಿ) ಸ್ಪೀಕರ್ ಆಗಿ ಬಿಜೆಪಿಯ ಕಾಳಿದಾಸ್ ಕೋಳಂಬ್ಕರ್ ಅವರನ್ನು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಮಂಗಳವಾರ ಆಯ್ಕೆ ಮಾಡಿದ್ದು, ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಈ ಮೂಲಕ ಬುಧವಾರ ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
8 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕಾಳಿದಾಸ್ ಅವರು ನೂತನ ಸ್ಪೀಕರ್ ಆಯ್ಕೆಯಾಗುವವರೆಗೆ ಹಂಗಾಮಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಬುಧವಾರ ಬೆಳಗ್ಗೆ 8ಗಂಟೆಗೆ ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಕಲಾಪ ನಡೆಯಲಿದ್ದು, ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಶಿವಸೇನಾದಲ್ಲಿ ಒಂದು ಬಾರಿ ಶಾಸಕರಾಗಿದ್ದ ಕಾಳಿದಾಸ್ ಅವರು ಆ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. 2019ರಲ್ಲಿ ಕಾಂಗ್ರೆಸ್ ತೊರೆದಿದ್ದ ಕಾಳಿದಾಸ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಕೋಳಂಬ್ಕರ್ ಅವರು ವಾಡ್ಲಾ ಕ್ಷೇತ್ರದ ಶಾಸಕರಾಗಿದ್ದಾರೆ. ಪ್ರೋ ಟೆಮ್ ಸ್ಪೀಕರ್ ಆಗಿ ರಾಜ್ಯಪಾಲರು ವಿಧಾನಸಭೆಯಲ್ಲಿ ಪ್ರಮಾಣವಚನ ಬೋಧಿಸಲಿದ್ದು, ನಂತರ ವಿಧಾನಸಭೆಯಲ್ಲಿ ನೂತನವಾಗಿ ಆಯ್ಕೆಯಾದ 287 ಶಾಸಕರಿಗೂ ಪ್ರಮಾಣವಚನ ಬೋಧಿಸಲಿದ್ದಾರೆ ಎಂದು ರಾಜಭವನದ ಅಧಿಕಾರಿಗಳು ತಿಳಿಸಿದ್ದಾರೆ.
ನಾಟಕೀಯ ಬೆಳವಣಿಗೆಯಲ್ಲಿ ಮಂಗಳವಾರ ಮಧ್ಯಾಹ್ನ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕಾಳಿದಾಸ್ ಅವರನ್ನು ಪ್ರೋ ಟೆಮ್ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ.
ಏನಿದು ಪ್ರೋ ಟೆಮ್?
ಪ್ರೋ ಟೆಮ್ ಲ್ಯಾಟೀನ್ ಭಾಷೆಯ ಪದವಾಗಿದೆ. Pro tem ಅಂದರೆ ತಾತ್ಕಾಲಿಕ ಎಂಬ ಅರ್ಥ ಹೊಂದಿದೆ. ಚುನಾವಣೆ ನಂತರ ನಡೆಯಲಿರುವ ಮೊದಲ ಬಾರಿ ವಿಧಾನಸಭೆಯ ಅಥವಾ ಸಂಸದೀಯ ಕಲಾಪ ನಡೆಯುವ ಮೊದಲು ಪ್ರೋ ಟೆಮ್ ಸ್ಪೀಕರ್ ಅವರನ್ನು ಆಯ್ಕೆ ಮಾಡಲಾಗುತ್ತದೆ. ನೂತನವಾಗಿ ಆಯ್ಕೆಯಾದ ಶಾಸಕರು ಅಥವಾ ಸಂಸದರಿಗೆ ಪ್ರಮಾಣವಚನ ಬೋಧಿಸುವ ಹೊಣೆಗಾರಿಕೆ ಹಂಗಾಮಿ ಸ್ಪೀಕರ್ ಅವರದ್ದಾಗಿದೆ. ನಂತರ ಕಾಯಂ ಸ್ಪೀಕರ್ ಆಯ್ಕೆಯ ಚುನಾವಣೆ ನಡೆಸುತ್ತಾರೆ. ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಇದೀಗ ಕಾಳಿದಾಸ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ. ನಾಳೆ ನೂತನ ಶಾಸಕರಿಗೆ ಪ್ರಮಾಣವಚನ ಬೋಧಿಸಲಿದ್ದು, ವಿಶ್ವಾಸ ಮತ ಯಾಚನೆಯ ಹೊಣೆಗಾರಿಕೆ ಇವರ ಮೇಲಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.