ಬಿಎಸ್‌ವೈ ಪಾಪದ ಹಣದಲ್ಲಿ ಮತದಾರರ ಖರೀದಿಗೆ ಯತ್ನ


Team Udayavani, Nov 27, 2019, 3:00 AM IST

bsy-papada

ಚಿಕ್ಕಬಳ್ಳಾಪುರ: ಸಿಂ ಯಡಿಯೂರಪ್ಪ ಕೊಟ್ಟಿರುವ ಪಾಪದ ಹಣದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಮತದಾರರ ಖರೀದಿಗೆ ಮುಂದಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯೊಂದಿಗೆ ಚೆಲ್ಲಾಟವಾಡುತ್ತಿರುವ ಹಣದ ಅಹಂಕಾರಿ ಸುಧಾಕರ್‌ಗೆ ಕ್ಷೇತ್ರದ ಜನ ತಕ್ಕಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ, ಅನರ್ಹ ಶಾಸಕ, ಬಿಜೆಪಿ ಅಭ್ಯರ್ಥಿ ಸುಧಾಕರ್‌ ವಿರುದ್ಧ ವಾಗ್ಧಾಳಿ ನಡೆಸಿದರು.

ಚರ್ಚೆಗೆ ಪಂಥಾಹ್ವಾನ: ಜೆಡಿಎಸ್‌ ಅಭ್ಯರ್ಥಿ ಎ.ರಾಧಾಕೃಷ್ಣ ಪರ ತಾಲೂಕಿನ ನಂದಿ ಗ್ರಾಮದಲ್ಲಿ ಭರ್ಜರಿ ರೋಡ್‌ ಶೋ ನಡೆಸಿ ಮತಯಾಚನೆ ಮಾಡಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಯಾರ್ಯಾರ ಕೊಡುಗೆ ಏನು ಎಂಬುದರ ಬಗ್ಗೆ ಸಾರ್ವಜನಿಕವಾಗಿ ನಾನು ಬಹಿರಂಗ ಚರ್ಚೆ ಸಿದ್ಧನಾಗಿದ್ದು, ಬೇಕಾದರೆ ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪ, ಅನರ್ಹ ಶಾಸಕ ಸುಧಾಕರ್‌ ಬರಲಿ ಎಂದು ಬಹಿರಂಗವಾಗಿ ಪಂಥಾಹ್ವಾನ ನೀಡಿದರು.

ಮೆಡಿಕಲ್‌ ಕಾಲೇಜು ಕಿತ್ತುಕೊಂಡಿಲ್ಲ: ಸುಧಾಕರ್‌ ತಲೆಗೆ ಟೋಪನ್‌ ಹಾಕಿ ಪ್ರತಿ ಚುನಾವಣೆಯಲ್ಲಿ ಮತದಾರರಿಗೆ ಕುಕ್ಕರ್‌, ಮಿಕ್ಸಿ, ಸೀರೆ ನೀಡಿ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾನೆ. ಚಿಕ್ಕಬಳ್ಳಾಪುರಕ್ಕೆ ಮಂಜೂರಾಗಿದ್ದ ಮೆಡಿಕಲ್‌ ಕಾಲೇಜು ನಾವು ಕಿತ್ತುಕೊಂಡಿಲ್ಲ. 2015-16 ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್‌ ಕಾಲೇಜು ಘೋಷಣೆ ಮಾಡಿದ್ದರು. ಆದರೆ ಹಣ ಕೊಡದೇ ಸ್ಥಾಪನೆ ಆಗಲಿಲ್ಲ.

ಆದರೆ ಮೈತ್ರಿ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್‌ ತಮ್ಮ ಕ್ಷೇತ್ರಕ್ಕೆ ಮೆಡಿಕಲ್‌ ಕಾಲೇಜು ಮಂಜೂರು ಮಾಡಿಸಿಕೊಂಡರು. ಆದರೆ ಚಿಕ್ಕಬಳ್ಳಾಪುರಕ್ಕೆ ಮಂಜೂರಾಗಿದ್ದ ಮೆಡಿಕಲ್‌ ಕಾಲೇಜು ಕಿತ್ತುಕೊಂಡಿದ್ದಲ್ಲ. ಬದಲಾಗಿ ಕನಕಪುರಕ್ಕೆ ಮೈತ್ರಿ ಸರ್ಕಾರ ಮಂಜೂರು ಮಾಡಿದ್ದ ಮೆಡಿಕಲ್‌ ಕಾಲೇಜುನ್ನು ಯಡಿಯೂರಪ್ಪ ಚಿಕ್ಕಬಳ್ಳಾಪುರಕ್ಕೆ ಕೊಟ್ಟಿದ್ದಾರೆ ಎಂದು ದೂರಿದರು.

ಕಮಿಷನ್‌ ಪಡೆಯಲು ಮಂಜೂರು: ಮಂಚೇನಹಳ್ಳಿ ತಾಲೂಕು ಆಗಲ್ಲ. ಇದೆಲ್ಲಾ ಚುನಾವಣೆ ಗಿಮಿಕ್‌ ಅಷ್ಟೆ. ಸುಧಾಕರ್‌ಗೆ ತಾಕತ್ತು ಇದ್ದಿದ್ದರೆ ಸಿದ್ದರಾಮಯ್ಯ ಸರ್ಕಾರದಲ್ಲಿ ಜಿಲ್ಲೆಗೆ ಮೆಡಿಕಲ್‌ ಕಾಲೇಜು ತರಬಹುದಿತ್ತು ಎಂದರು. ಎರಡು ಚುನಾವಣೆಯಲ್ಲಿ ಗೆದ್ದರೂ ಕ್ಷೇತ್ರ ಅಭಿವೃದ್ಧಿ ಮಾಡಿಲ್ಲ. ಆತನ ಆಸ್ತಿ ದುಪ್ಪಟ್ಟಾಗಿರುವುದು ಬಿಟ್ಟರೆ ಜನರ ಆರ್ಥಿಕ ಪರಿಸ್ಥಿತಿ ಹಾಗೆ ಇದೆ. ಮೆಡಿಕಲ್‌ ಕಾಲೇಜು ಕಮಿಷನ್‌ ಪಡೆಯಲು ಅಷ್ಟೇ ಜಿಲ್ಲೆಗೆ ಮಂಜೂರು ಮಾಡಲಾಗಿದೆ ಎಂದು ಟೀಕಿಸಿದರು.

ಕತ್ತು ಹಿಸುಕುವ ಕೆಲಸ: ಎತ್ತಿನಹೊಳೆ ಯೋಜನೆ ನೀರು ಈ ಭಾಗಕ್ಕೆ ಹರಿಯಲ್ಲ ಎಂದು ನಾನು ಮೊದಲೇ ಹೇಳಿದ್ದೆ. ಯಾರು ನನ್ನ ಮಾತು ನಂಬಲಿಲ್ಲ ಎಂದರು. ಒಂದು ಕಡೆ ಅನಿತಕ್ಕ ನಮಗೆ ನೆಂಟರು ಎಂದು ಹೇಳಿಕೊಂಡು ತಿರುಗುತ್ತಾನೆ. ನನಗೆ ರಾಜಕೀಯವಾಗಿ ಕತ್ತು ಹಿಸುಕುವ ಕೆಲಸ ಮಾಡಿದ್ದಾನೆ ಎಂದರು.

ಹುಣಸೂರು ಬಿಜೆಪಿ ಅಭ್ಯರ್ಥಿ ವಿಶ್ವನಾಥ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ, ವಿಶ್ವನಾಥ ಇದು ರಾಜಕೀಯ ಧ್ರುವೀಕರಣ ಅಂತ ಹೇಳಿದ್ದಾರೆ. ಖಂಡಿತ ಅಲ್ಲ. ಇದು ರಾಜಕೀಯ ಶುದ್ಧೀಕರಣ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯೊಂದಿಗೆ ಚೆಲ್ಲಾಟವಾಡುತ್ತಿರುವ ಬಿಜೆಪಿಗೆ ಉಪ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದಾರೆ ಎಂದರು. ಸುಧಾಕರ್‌ ಅಂತಹ ನಾಯಲಾಕ್‌ ಜನಪ್ರತಿನಿಧಿಯನ್ನು ಮನೆಗೆ ಕಳಿಸಬೇಕು. ಅನರ್ಹ ಶಾಸಕ ಮತ್ತೆ ಗೆದ್ದು ಬಂದರೆ ಕ್ಷೇತ್ರದ ಜನರಿಗೆ ಭವಿಷ್ಯ ಇರುವುದಿಲ್ಲ ಎಂದರು.

ಜೆಡಿಎಸ್‌ ಅಭ್ಯರ್ಥಿ ಎ.ರಾಧಾಕೃಷ್ಣ, ಜೆಡಿಎಸ್‌ ಎಚ್‌.ಕೆ.ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಶಾಸಕರಾದ ಜೆ.ಕೆ.ಕೃಷ್ಣಾರೆಡ್ಡಿ, ನಿಸರ್ಗ ನಾರಾಯಣಸ್ವಾಮಿ, ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಜಿಪಂ ಸದಸ್ಯರಾದ ಕೆ.ಸಿ.ರಾಜಾಕಾಂತ್‌, ಕೆ.ಎಂ.ಮುನೇಗೌಡ, ಮುಖಂಡರಾದ ಬಾಲಕುಂಟಹಳ್ಳಿ ಮುನಿಯಪ್ಪ, ಅವುಲುಕೊಂಡರಾಯಪ್ಪ, ಕೆ.ಆರ್‌.ರೆಡ್ಡಿ, ಆರ್‌.ಮಟಮಪ್ಪ, ನಂದಿ ಮೂರ್ತಿ, ರವಿಕುಮಾರ್‌ ಉಪಸ್ಥಿತರಿದ್ದರು.

ಮಧ್ಯಂತರ ಚನಾವಣೆಗೆ ಸಿದ್ಧ-ಎಚ್‌ಡಿಕೆ: ಉಪ ಚುನಾವಣೆಯ ಬಳಿಕ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾದರೆ ಎದುರಿಸಲು ಜೆಡಿಎಸ್‌ ಸಿದ್ಧವಾಗಿದೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದರು. ಜೆಡಿಎಸ್‌ ಅಭ್ಯರ್ಥಿ ಎ.ರಾಧಾಕೃಷ್ಣ ಪರ ಮತಯಾಚನೆ ನಡೆಸಲು ಆಗಮಿಸಿದ್ದ ವೇಳೆ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ,

ಪದೇ ಪದೆ ಸಿದ್ದರಾಮಯ್ಯ ಮಧ್ಯಂತರ ಚುನಾವಣೆಗೆ ಕಾಂಗ್ರೆಸ್‌ ಸಿದ್ಧವಾಗಿದೆ ಎಂಬ ಹೇಳಿಕೆ ನೀಡುತ್ತಿರುವ ಕುರಿತು ಪ್ರತಿಕ್ರಿಯಿಸಿ, ಉಪ ಚುನಾವಣೆ ಫ‌ಲಿತಾಂಶ ಬರುವವರೆಗೂ ಏನು ಹೇಳಕ್ಕೆ ಆಗುವುದಿಲ್ಲ ಎಂದರು. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಅನುಕೂಲ ಮಾಡಲು ಜೆಡಿಎಸ್‌ ಅಭ್ಯರ್ಥಿಯನ್ನು ಕೊನೆ ಕ್ಷಣದಲ್ಲಿ ಬದಲಾವಣೆ ಮಾಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಕ್ಷೇತ್ರದಲ್ಲಿ ಜೆಡಿಎಸ್‌ ಗೆಲುವು ಸಾಧಿಸಲಿದೆ ಎಂದರು.

ಟಾಪ್ ನ್ಯೂಸ್

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.