5ಜಿ 5 ವರ್ಷ ತಡವಾಗುವ ಸಾಧ್ಯತೆ
Team Udayavani, Nov 26, 2019, 10:23 PM IST
ಹೊಸದಿಲ್ಲಿ: ಭಾರತದಲ್ಲಿ 5ಜಿ ಮೊಬೈಲ್ ಸೇವೆ ಬೇಗ ಆರಂಭವಾಗುವ ಸಾಧ್ಯತೆ ಕಾಣುತ್ತಿಲ್ಲ. ಅಮೆರಿಕ, ಚೀನ ಸೇರಿದಂತೆ ಉಳಿದೆರಡು ರಾಷ್ಟ್ರಗಳಲ್ಲಿ ಈಗಾಗಲೇ 5ಜಿ ಸೇವೆ ಬಂದಿದ್ದು, ಮುಂದಿನ ವರ್ಷ ಭಾರತದಲ್ಲಿ 5ಜಿ ಸೇವೆ ದೊರೆಯಲಿದೆ ಎಂದು ಹೇಳಲಾಗುತ್ತಿತ್ತು.
ಆದರೆ ಪ್ರಸ್ತುತ ವಿದ್ಯಮಾನಗಳು ಹೇಳುವಂತೆ ಮುಂದಿನ 5 ವರ್ಷಗಳ ಕಾಲ ಭಾರತದಲ್ಲಿ ಯಾವುದೇ 5ಜಿ ಸೇವೆಗಳು ದೊರೆಯುವ ಸಾಧ್ಯತೆ ಇಲ್ಲ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂಬರುವ ವರ್ಷದಲ್ಲಿ 5ಜಿ ದೇಶಕ್ಕೆ ಕಾಲಿಡಬೇಕಿತ್ತು. ಆದರೆ ಭಾರತದಲ್ಲಿ ಅದಕ್ಕೆ ಸಿದ್ಧತೆಗಳು ಪೂರ್ಣಗೊಳ್ಳದೇ ಇದ್ದ ಕಾರಣ ಬೇಗ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ.
ಈ ಕುರಿತಂತೆ ಮಾಹಿತಿ ನೀಡಿರುವ ಸೆಲ್ಯುಲರ್ ಅಪರೇಶನ್ ಅಸೋಷಿಯೇಶನ್ ಆಫ್ ಇಂಡಿಯಾ (ಸಿಓಎಐ)ದ ನಿರ್ದೇಶಕ ರಂಜನ್ ಎಸ್. ಮ್ಯಾಥು ಅವರು ಇಲ್ಲಿ 5ಜಿ ಸೇವೆಗೆ ಸ್ಪೆಕ್ಟ್ರಂಗಳು, ಹೊಸ ಬ್ಯಾಂಡ್ಗಳು ಮತ್ತು ಕೆಲವು ಮೂಲ ಸೌಕರ್ಯಗಳ ಅಲಭ್ಯತೆ ಕಾರಣ 5 ವರ್ಷಗಳು ಮುಂದೆ ಹೋಗುವ ಸಾಧ್ಯತೆ ಇದೇ ಎಂದು ಹೇಳಿದ್ದಾರೆ. ರಂಜನ್ ಎಸ್. ಮ್ಯಾಥು ಅವರು ಏರ್ಟೆಲ್, ರಿಲಾಯನ್ಸ್ ಜಿಯೋ, ವಡಫೋನ್ ಐಡಿಯಾ ಸಂಸ್ಥೆಗಳನ್ನು ಪ್ರತಿನಿಧಿಸುತ್ತಿದ್ದಾರೆ. 4ಜಿ ಮೊಬೈಲ್ ಸೇವೆಗಿಂತ 5ಜಿ 100 ಪಟ್ಟು ವೇಗವನ್ನು ಹೊಂದಿದೆ. ಚಲನಚಿತ್ರಗಳು ಕೆಲವೇ ಸೆಕೆಂಡುಗಳಲ್ಲಿ ಡೌನ್ಲೋಡ್ ಆಗುವಷ್ಟು ವೇಗವನ್ನು ಅದು ಒದಗಿಸುತ್ತದೆ. 4ಜಿ ಡಾಟಾ ಯೋಜನೆಗಳಿಗೆ ಹೋಲಿಸಿದರೆ 5ಜಿ ದುಬಾರಿಯೂ ಹೌದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.