ಆಯ್ದ ಕ್ಷೇತ್ರಗಳತ್ತ ಬಿಜೆಪಿ ವಿಶೇಷ ಒತ್ತು
Team Udayavani, Nov 27, 2019, 3:05 AM IST
ಬೆಂಗಳೂರು: ಉಪಚುನಾವಣೆ ನಡೆಯಲಿರುವ 15 ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿರುವ ಬಿಜೆಪಿ, ತೀವ್ರ ಹಣಾಹಣಿ ಕ್ಷೇತ್ರಗಳತ್ತ ವಿಶೇಷ ಗಮನ ಹರಿಸಲು ಮುಂದಾಗಿದೆ. ಮುಖ್ಯವಾಗಿ ಕೆ.ಆರ್.ಪೇಟೆ, ಹುಣಸೂರು, ಯಶವಂತಪುರ, ಹೊಸಕೋಟೆ ಹಾಗೂ ರಾಣೆಬೆನ್ನೂರು ಕ್ಷೇತ್ರದಲ್ಲಿ ತೀವ್ರ ಸ್ಪರ್ಧೆ ನಿರೀಕ್ಷೆ ಹಿನ್ನೆಲೆಯಲ್ಲಿ ವ್ಯಾಪಕ ಪ್ರಚಾರದ ಜತೆಗೆ ಸಂಘಟನೆಗೆ ಒತ್ತು ನೀಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ.
ಮೇಲ್ಕಂಡ 5 ಕ್ಷೇತ್ರಗಳಲ್ಲಿ ತೀವ್ರ ಹಣಾಹಣಿ ಕಂಡು ಬಂದ ಹಿನ್ನೆಲೆಯಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಕಾರ್ಯತಂತ್ರ ಹಣೆಯಲಾಗುತ್ತಿದೆ. ಸ್ಥಳೀಯ ಸಣ್ಣ ಪುಟ್ಟ ಮುಖಂಡರು, ಹಿರಿಯರ ವಿಶ್ವಾಸ ಗಳಿಸುವುದು. ಹಿನ್ನೆಡೆ ಆಗಬಹುದೆಂಬ ಪ್ರದೇಶಗಳಲ್ಲಿ ಇನ್ನಷ್ಟು ಬಿರುಸಿನ ಪ್ರಚಾರ ನಡೆಸುವುದು. ಯಾರನ್ನೂ ಕಡೆಗಣಿಸದೆ ಬೆಂಬಲ ಪಡೆದು ಸಂಘಟಿತವಾಗಿ ಪ್ರಚಾರ ನಡೆಸುವ ಕಾರ್ಯಕ್ಕೆ ಒತ್ತು ನೀಡಲಾಗಿದೆ ಎಂದು ಮೂಲಗಳು ಹೇಳಿವೆ.
ಬಚ್ಚೇಗೌಡರ ನಡೆಯತ್ತ ಚಿತ್ತ: ಹೊಸಕೋಟೆ ಕ್ಷೇತ್ರದಲ್ಲಿ ಈವರೆಗೆ ಸಂಸದ ಬಚ್ಚೇಗೌಡ ಪ್ರಚಾರಕ್ಕಿಳಿಯದಿರುವ ಬಗ್ಗೆಯೂ ಪಕ್ಷದಲ್ಲಿ ಚರ್ಚೆಯಾಗುತ್ತಿದೆ. ಪಕ್ಷ ಚಿಕ್ಕಬಳ್ಳಾಪುರ ಕ್ಷೇತ್ರದ ಉಸ್ತುವಾರಿಯಾಗಿ ನೇಮಕ ಮಾಡಿದ್ದರೂ ಬಚ್ಚೇಗೌಡರು ಪ್ರಚಾರ ನಡೆಸದಿರುವುದು ಸರಿಯಲ್ಲ. ಈ ಬಗ್ಗೆ ಸ್ಪಷ್ಟನೆ ಪಡೆಯಬೇಕು. ಒಂದೊಮ್ಮೆ ಸ್ಪಂದಿಸದಿದ್ದರೆ ನೋಟಿಸ್ ನೀಡುವ ಬಗ್ಗೆ ಚಿಂತಿಸಬೇಕು ಎಂಬ ಮಾತು ಪಕ್ಷದಲ್ಲೇ ಕೇಳಿಬಂದಿದೆ.
ಇನ್ನೊಂದೆಡೆ ಸದ್ಯಕ್ಕೆ ಬಚ್ಚೇಗೌಡರ ವಿರುದ್ಧ ಕ್ರಮ ಕೈಗೊಂಡರೆ ಅದು ಉಪಚುನಾವಣೆ ಮೇಲೆ ಪರಿಣಾಮ ಬೀರಬಹುದು. ಅದು ಪಕ್ಷದ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್ ಅವರ ಹಿನ್ನೆಡೆಗೂ ಕಾರಣವಾಗಬಹುದು. ಹೀಗಾಗಿ ಸದ್ಯಕ್ಕೆ ಯಾವುದೇ ಕ್ರಮ ಜರುಗಿಸುವುದು ಒಳಿತು. ಚುನಾವಣಾ ಫಲಿತಾಂಶ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದು ಸೂಕ್ತ ಎಂಬ ಅಭಿಪ್ರಾಯವೂ ಇದೆ. ಈ ಬಗ್ಗೆ ಪಕ್ಷದ ಮಟ್ಟದಲ್ಲೇ ಚರ್ಚೆ ನಡೆದಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.