ಹೈನುಗಾರಿಕೆ ದೇಶದ ಆರ್ಥಿಕತೆಯ ಬೆನ್ನೆಲುಬು: ಜಗದೀಶ್‌

ಉಡುಪಿಯಲ್ಲಿ ರಾಷ್ಟ್ರೀಯ ಹಾಲು ದಿನಾಚರಣೆ ಉದ್ಘಾಟನೆ

Team Udayavani, Nov 27, 2019, 4:55 AM IST

as-31

ಉಡುಪಿ: ಭಾರತದಲ್ಲಿ 1970ನೇ ಇಸವಿಯ ಮೊದಲು ಹಾಲನ್ನು ಆಮದು ಮಾಡಿಕೊಳ್ಳುವ ಪರಿಸ್ಥಿತಿ ಇತ್ತು. ಆದರೆ ಪ್ರಸ್ತುತ ಹಾಲು, ಹಾಲಿನ ಉತ್ಪನ್ನಗಳನ್ನು ರಫ್ತು ಮಾಡುವ ಮಟ್ಟಕ್ಕೆ ಬೆಳೆದಿದ್ದೇವೆ. ಪ್ರಸ್ತುತ ಭಾರತದ ಆರ್ಥಿಕತೆಗೆ ಹೈನುಗಾರಿಕೆ ಬೆನ್ನೆಲುಬಾಗಿ ನಿಂತಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಅಭಿಪ್ರಾಯಪಟ್ಟರು.

ಕ್ಷೀರಕ್ರಾಂತಿಯ ಪಿತಾಮಹ ಖ್ಯಾತಿಯ ಡಾ| ವರ್ಗೀಸ್‌ ಕುರಿಯನ್‌ ಜನ್ಮ ದಿನಾಚರಣೆ ಪ್ರಯುಕ್ತ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಆಶ್ರಯದಲ್ಲಿ ಅಜ್ಜರಕಾಡು ಟೌನ್‌ಹಾಲ್‌ನಲ್ಲಿ ಮಂಗಳವಾರ ನಡೆದ ಶುದ್ಧ ಹಾಲು ಉತ್ಪಾದನೆಯ ಮಹತ್ವ, ಮೇಘ ತಂತ್ರಜ್ಞಾನ ಸಾಫ್ಟ್ ವೇರ್‌ ಬಿಡುಗಡೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಒಕ್ಕೂಟ ಪ್ರಥಮ
ಹಾಲು ಉತ್ಪಾದಕರಿಗೆ ನ್ಯಾಯವಾಗಿ ಸಿಗುವ ಲಾಭಾಂಶ ವರ್ಗಾವಣೆಯಲ್ಲಿ ದ.ಕ. ಹಾಲು ಉತ್ಪಾದಕರ ಒಕ್ಕೂಟ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಹಾಲಿನ ಕೊರತೆಯಿದ್ದ ದೇಶದಲ್ಲಿ ಹಾಲಿನ ಪ್ರವಾಹ ಹರಿಸುವ ಸಾಧನೆಯ ಹಾದಿ ತೋರಿದ ಡಾ| ವರ್ಗೀಸ್‌ ಕುರಿಯನ್‌ ಅವರ ಸ್ಮರಣೆ ಅತ್ಯಗತ್ಯ ಎಂದು ಹೇಳಿದರು.

ಮಿಲ್ಕೊ ಸಾಫ್ಟ್ವೇರನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತೆ, ಪ್ರಗತಿಪರ ರೈತ ಮಹಿಳೆ ಕವಿತಾ ಮಿಶ್ರಾ ಬಿಡುಗಡೆಗೊಳಿಸಿ, ಗ್ರಾಮೀಣ ಪ್ರದೇಶದಲ್ಲಿ ತಂತ್ರಜ್ಞಾನ ಬಳಕೆ, ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಅಭಿವೃದ್ಧಿ’ ಕುರಿತು ತಾಂತ್ರಿಕ ಉಪನ್ಯಾಸ ನೀಡಿದರು. ಶುದ್ಧ ಹಾಲು ಉತ್ಪಾದನೆಯ ಮಹತ್ವದ ಬಗ್ಗೆ ಬೆಂಗಳೂರು ಪ್ರಾದೇಶಿಕ ಡೈರಿ ಸೈನ್ಸ್‌ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ| ರಾಮಚಂದ್ರ ಬಿ. ಅವರು ಉಪನ್ಯಾಸ ನೀಡಿದರು.

ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ| ಜಿ.ವಿ. ಹೆಗಡೆ ಪ್ರಸ್ತಾವನೆಗೈದು, ಒಕ್ಕೂಟದ 725 ಸಹಕಾರ ಸಂಘ ಗಳಲ್ಲಿ 648 ಸ್ವಯಂಚಾಲಿತ ಹಾಲು ಸಂಗ್ರ ಹಣಾ ಘಟಕಗಳಿವೆ. ಒಕ್ಕೂಟವು ತನ್ನದೇ ಆದ ಮೇಘ ತಂತ್ರಜ್ಞಾನ ಆಧಾರಿತ ಸಾಫ್ಟ್ವೇರ್‌ ಅಭಿವೃದ್ಧಿಪಡಿಸಿದ್ದು, ಮುಂದಿನ ದಿನಗಳಲ್ಲಿ ಮಾಹಿತಿಗಳನ್ನು ಹೈನುಗಾರರ ಮೊಬೈಲ್‌ಗೆ ತಲುಪಿಸ ಲಾಗುವುದು ಎಂದರು.

ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ಎ. ಜಗದೀಶ ಕಾರಂತ, ಹದ್ದೂರು ರಾಜೀವ ಶೆಟ್ಟಿ, ಸುಧಾಕರ ಶೆಟ್ಟಿ, ಸಾಣೂರು ನರಸಿಂಹ ಕಾಮತ್‌, ಸುಭದ್ರ ರಾವ್‌, ಸವಿತಾ ಎನ್‌. ಶೆಟ್ಟಿ, ಸ್ಮಿತಾ ಆರ್‌. ಶೆಟ್ಟಿ ಉಪಸ್ಥಿತರಿದ್ದರು.

ಸಮ್ಮಾನ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಂಕರನಾರಾಯಣ ಹಾ.ಉ.ಸ.ಸಂಘದ ಕಾರ್ಯದರ್ಶಿ ಎಸ್‌. ದಯಾನಂದ ರಾವ್‌ ಅವರನ್ನು ಸಮ್ಮಾನಿಸಲಾಯಿತು. ಸಾಫ್ಟ್ವೇರ್‌ ಅಭಿವೃದ್ಧಿಪಡಿಸಿದ ಹರಿವರ್ಮ ಅವರನ್ನು ಅಭಿನಂದಿಸಲಾಯಿತು. ನಂದಿನಿ ಡೀಲರ್‌ಗಳ ಪ್ರತಿಭಾವಂತ ಮಕ್ಕಳಿಗೆ ಪ್ರಶಸ್ತಿ ವಿತರಿಸಲಾಯಿತು. ಉಭಯ ಜಿಲ್ಲೆಗಳ ನಂದಿನಿ ಡೀಲರ್‌ಗಳನ್ನು ಗುರುತಿಸಿ ಗೌರವಿಸಲಾಯಿತು. ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಸ್ವಾಗತಿಸಿದರು. ಸಹಾಯಕ ವ್ಯವಸ್ಥಾಪಕರಾದ ಸುಧಾಕರ್‌, ಜಾನೆಟ್‌ ರೋಸಾರಿಯೋ ನಿರೂಪಿಸಿದರು. ವ್ಯವಸ್ಥಾಪಕ ಡಾ| ನಿತ್ಯಾನಂದ ಭಕ್ತ ಅವರು ವಂದಿಸಿದರು.

ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ್‌ ಹೆಗ್ಡೆ ಮಾತನಾಡಿ, ರೈತ ಮಹಿಳೆಯರ ಸ್ವಾಲಂಬಿ ಬದುಕಿಗೆ ಹೈನುಗಾರಿಕೆ ಪೂರಕವಾಗಿದೆ. ರಾಜ್ಯದ 14 ಒಕ್ಕೂಟಗಳಲ್ಲಿ ದ.ಕ.ಹಾ.ಉ. ಒಕ್ಕೂಟ ಹಾಲು ಉತ್ಪಾದನೆ ಮತ್ತು ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿದೆ. 1.20 ಲಕ್ಷದ ಸದಸ್ಯರಿರುವ 725 ಸಂಘಗಳಿಗೆ ಅನುಕೂಲವಾಗುವಂತೆ ಸಾಫ್ಟ್ ವೇರ್‌ ಅಭಿವೃದ್ಧಿಪಡಿಸಲಾಗಿದೆ ಎಂದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.