ಅಮ್ಮ ಪ್ರಶಸ್ತಿ ವಿಶ್ವ ಕನ್ನಡ ಸಮ್ಮೇಳನಕ್ಕೆ ಸಮ
ಕಲಬುರಗಿ ಜಿಲ್ಲೆ ಪ್ರವಾಸಿ ಕೇಂದ್ರವಾಗಲಿಖುದ್ದಾಗಿ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿ
Team Udayavani, Nov 27, 2019, 10:43 AM IST
ಸೇಡಂ: ಸಚಿವರ ಕಾರು ಚಾಲಕರಿಗೂ ರಾಜ್ಯೋತ್ಸವ ಪ್ರಶಸ್ತಿ ನೀಡುತ್ತಿರುವ ಇಂತಹ ಕಾಲದಲ್ಲಿ ‘ಅಮ್ಮ’ನ ಹೆಸರಲ್ಲಿ ಕೊಡಮಾಡುತ್ತಿರುವ ಅಮ್ಮ ಪ್ರಶಸ್ತಿ ವಿಶ್ವ ಕನ್ನಡ ಸಮ್ಮೇಳನಕ್ಕೆ ಸಮ ಎಂದು ಹಿರಿಯ ಸಂಗೀತ ನಿರ್ದೇಶಕ, ನಟ ವಿ. ಮನೋಹರ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗ ಮಂಟಪದಲ್ಲಿ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ ಪ್ರತಿಷ್ಠಾನ ಹಮ್ಮಿಕೊಂಡ ರಾಜ್ಯ ಮಟ್ಟದ ಅಮ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಕಲಬುರಗಿ ಜಿಲ್ಲೆ ಹಲವಾರು ಐತಿಹಾಸಿಕ ಕೋಟೆ ಕೊತ್ತಲಗಳನ್ನು ಹೊಂದಿದೆ. ರಾಜ ಮಹಾರಾಜರ ಆಳ್ವಿಕೆಯ ಕೇಂದ್ರಗಳಾಗಿ ಕಂಗೊಳಿಸಿದೆ. ಈ ಭಾಗವನ್ನು ಪ್ರವಾಸಿ ಕೇಂದ್ರವಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುತುವರ್ಜಿವಹಿಸಬೇಕು ಎಂದರು.
ಜನರು ಸರ್ಕಾರದ ಮೇಲೆ ಅವಲಂಬಿತರಾಗದೆ ಖುದ್ದಾಗಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗುವ ಪ್ರಯತ್ನ ಮಾಡಬೇಕು. ಸ್ವಚ್ಛ ಭಾರತ ಅಭಿಯಾನ ಎಷ್ಟರ ಮಟ್ಟಿಗೆ ಸಾಕಾರವಾಗಿದೆ ಎನ್ನುವುದನ್ನು ಮನಗಾಣಬೇಕು. ತಾಯಿ ನಾಡಿನ ಹಿರಿಮೆ ಬೆಳೆಸುವುದರೊಂದಿಗೆ ಐತಿಹಾಸಿಕ ಸ್ವತ್ತನ್ನು ಸಂರಕ್ಷಿಸಿಕೊಳ್ಳಬೇಕು ಎಂದು ಹೇಳಿದರು.
ಹಿರಿಯ ಪತ್ರಕರ್ತ, ಸಾಹಿತಿ ಜಿ.ಎನ್. ಮೋಹನ್ ಮಾತನಾಡಿ, ಭಾರತಕ್ಕೆ ಡಾ| ಬಿ.ಆರ್. ಅಂಬೇಡ್ಕರ್ ನೀಡಿದ ಸಂವಿಧಾನದಂತೆ ಪ್ರತಿ ಮನೆಗೆ ಅಮ್ಮನೇ ಸಂವಿಧಾನವಿದ್ದಂತೆ. ಕಲಬುರಗಿ ಪತ್ರಿಕೋದ್ಯಮಕ್ಕೆ ಶಕ್ತಿ ಕೊಟ್ಟ ನೆಲವಾಗಿದೆ. ಬರುವ ದಿನಗಳಲ್ಲಿ 20ನೇ ವರ್ಷದ ಅಮ್ಮ ಪ್ರಶಸ್ತಿ ಕಾರ್ಯಕ್ರಮ ಬೆಂಗಳೂರು ಮತ್ತು ಸೇಡಂನಲ್ಲಿ ಏಕಕಾಲಕ್ಕೆ ಆಯೋಜನೆ ಮಾಡುವ ಕುರಿತು ನಿರ್ಧರಿಸಲಾಗಿದೆ ಎಂದರು.
ಗುಲಬರ್ಗಾ ವಿವಿ ಕುಲಪತಿ ಡಾ| ಪರಿಮಳ ಅಂಬೇಕರ್, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಸಾಹಿತಿ ಜೋಗಿ ಮಾತನಾಡಿದರು. ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ಸಂತೋಷಿರಾಣಿ ಪಾಟೀಲ ತೇಲ್ಕೂರ, ಪ್ರತಿಷ್ಠಾನದ ಅಧ್ಯಕ್ಷೆ ರತ್ನಕಲಾ ಮುನ್ನೂರು ವೇದಿಕೆಯಲ್ಲಿದ್ದರು.
ಹಿರಿಯ ಪತ್ರಕರ್ತ ಪ್ರಭಾಕರ ಜೋಶಿ ಪ್ರಾಸ್ತಾವಿಕ ಮಾತನಾಡಿದರು. ಸಂಚಾಲಕ, ಹಿರಿಯ ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ ನಿರೂಪಿಸಿದರು. ಮಹೇಂದ್ರ ಭಜಂತ್ರಿ ಪ್ರಾರ್ಥಿಸಿದರು. ಬಿ.ಹೆಚ್. ನಿರಗುಡಿ ಸ್ವಾಗತಿಸಿ, ವಂದಿಸಿದರು. ಸಾಹಿತಿ ಜಮೀಲ್ ಸಾವಣ್ಣ, ಸುಜಿತಕುಮಾರ, ಮಾಜಿ ಉಪ ಸಭಾಪತಿ ಚಂದ್ರಶೇಖರರೆಡ್ಡಿ ಮದನಾ, ಗುಲಬರ್ಗಾ ವಿವಿಯ ಹೆಚ್.ಟಿ. ಪೋತೆ, ಸುಜಾತಾ ಜಂಗಮಶೆಟ್ಟಿ, ಸುರೇಶ ಬಡಿಗೇರ, ಅನಂತರೆಡ್ಡಿ ಬಟಗೇರಾ, ಪಿ.ಎಂ. ಮಣ್ಣೂರ, ಜಯಶ್ರೀ ಐನಾಪುರ, ಶಿವಶರಣರೆಡ್ಡಿ, ಸಂಗಯ್ಯ ಕೊಂತನಪಲ್ಲಿ, ವಿಜಯಲಕ್ಷ್ಮೀ, ಅಶೋಕ ತೊಟ್ನಳ್ಳಿ, ಭೀಮಣ್ಣ ಆಡಕಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
MUST WATCH
ಹೊಸ ಸೇರ್ಪಡೆ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.