ಸಂವಿಧಾನದ ಮಹತ್ವ ಪ್ರತಿಯೊಬ್ಬರು ತಿಳಿದುಕೊಳ್ಳಿ: ಮಲ್ಲಾಪುರ
Team Udayavani, Nov 28, 2019, 4:45 AM IST
ಮಡಿಕೇರಿ: ಇಡೀ ಜಗತ್ತಿನಲ್ಲಿಯೇ ಬೃಹತ್ ಲಿಖೀತ ಸಂವಿಧಾನ ಹೊಂದಿರುವ ರಾಷ್ಟ್ರದಲ್ಲಿ, ಸಂವಿಧಾನವು ಪವಿತ್ರ ಮಹಾಗ್ರಂಥವಾಗಿದ್ದು, ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಎಫ್ಎಂಕೆಎಂಸಿ ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತಾಶ್ರಯದಲ್ಲಿ ನಗರದ ಎಫ್ಎಂಕೆಎಂಸಿ ಕಾಲೇಜಿನಲ್ಲಿ ಮಂಗಳವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಷ್ಟ್ರದ ಸಂವಿಧಾನದಲ್ಲಿ 25 ವಿಭಾಗಗಳಲ್ಲಿ 448 ವಿಧಿಗಳು, 12 ಪರಿಚ್ಛೇದಗಳು, 5 ಅನುಬಂಧಗಳು ಇವೆ. ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಸಂಪೂರ್ಣ ಕೈಬರಹದಲ್ಲಿ ಬರೆದು ಕ್ಯಾಲಿಗ್ರಾಫ್ ಮಾಡಲಾಗಿದೆ. ಸಂವಿಧಾನದ ಮೂಲ ಪ್ರತಿಗಳನ್ನು ಸಂಸತ್ತಿನ ಗ್ರಂಥಾಲಯದಲ್ಲಿ ಸಂರಕ್ಷಿಸಿಡಲಾಗಿದೆ ಎಂದರು.
1949ರ ನವೆಂಬರ್, 26 ರಂದು ಸಂವಿಧಾನವನ್ನು ಸಂವಿಧಾನ ಸಭೆಯಲ್ಲಿ ಅಂಗೀಕರಿಸಲಾಯಿತು. ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ಪ್ರತಿಯನ್ನು ಸಭೆಯಲ್ಲಿ ಮಂಡಿಸಿದರು. ಅದರಂತೆ 1950 ಜನವರಿ, 26 ರಂದು ಸಂಪೂರ್ಣ ಜಾರಿಯಾಗಿ ಅಂದಿನಿಂದಲೇ ಗಣರಾಜ್ಯ ದಿನವಾಗಿ ಆಚರಿಸಿಕೊಂಡು ಬರಲಾಗಿದೆ ಎಂದು ವಿ.ವಿ.ಮಲ್ಲಾಪುರ ಅವರು ವಿವರಿಸಿದರು.
ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ತಿಳಿಸಲಾಗಿದ್ದು, ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹೇಳಿದರು.
ಪುತ್ತೂರಿನ ವಕೀಲರ ಸಂಘದ ಮಾಜಿ ಅಧ್ಯಕ್ಷ ಹಾಗೂ ವಿವೇಕಾನಂದ ಕಾನೂನು ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಕೆ.ಆರ್.ಆಚಾರ್ಯ ಅವರು ಮಾತನಾಡಿ ಸಂವಿಧಾನ ಪ್ರಸ್ತಾವನೆಯಲ್ಲಿ ಭಾರತದ ಪ್ರಜೆಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ, ಪ್ರಜಾಸತ್ತಾತ್ಮಕ ಗಣತಂತ್ರ ರಾಷ್ಟ್ರವೆಂದು ಹೇಳಲಾಗಿದೆ ಎಂದರು.
ಪ್ರತಿಯೊಬ್ಬರಲ್ಲಿಯೂ ಕಾನೂನಿನ ಪ್ರಜ್ಞೆ ಇರಬೇಕು. ಕಾನೂನು ಇಲ್ಲದ ಸಮಾಜ ಊಹಿಸಿಕೊಳ್ಳುವುದು ಅಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಸಂವಿಧಾನ ಪ್ರಸ್ತಾವನೆಯನ್ನು ತಿಳಿದುಕೊಳ್ಳಬೇಕು. ರಾಷ್ಟ್ರದ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ದೇಶದ ಸಂವಿಧಾನ ರಕ್ಷಣೆ ಮಾಡಿ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು ಎಂದರು.
ಎಫ್ಎಂಕೆಎಂಸಿ ಕಾಲೇಜಿನ ಪ್ರಾಂಶುಪಾಲ ಜಗತ್ ತಿಮ್ಮಯ್ಯ, ಜಿಲ್ಲಾ ಕಾನೂನು ಸೇವಾ ಪ್ರಾದಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ , ವಕೀಲರ ಸಂಘದ ಅಧ್ಯಕ್ಷ ಕೆ.ಎಸ್.ಕವನ್, ಅಖೀಲ ಭಾರತೀಯ ಅಧಿವಕ್ತ ಪರಿಷತ್‌ನ ಅಧ್ಯಕ್ಷ ಪಿ.ಕೃಷ್ಣಮೂರ್ತಿಉಪಸ್ಥಿತರಿದ್ದರು. ಸಾಕ್ಷತ್ ಕಾರ್ಯಕ್ರಮ ನಿರೂಪಿಸಿದರು, ಜಯಪ್ಪ ಸ್ವಾಗತಿಸಿ, ವಂದಿಸಿದರು.
ಪ್ರತಿಜ್ಞಾವಿಧಿ
ಜಿಲ್ಲಾಡಳಿತ ವತಿಯಿಂದ ನಡೆದ ಸಂವಿಧಾನ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಭಾರತದ ಜನತೆ ಯಾದ ನಾವು, ಭಾರತ ವನ್ನು ಸಾರ್ವಭೌಮ, ಸಮಾಜ ವಾದಿ, ಧರ್ಮ ನಿರಪೇಕ್ಷ, ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ, ಭಾರತದ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯ, ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ ದೊರೆಯುವಂತೆ ಮಾಡುವುದಕ್ಕಾಗಿ; ವ್ಯಕ್ತಿ ಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಬ್ರಾತೃತ್ವ ಭಾವನೆ ಮೂಡಿಸುವುದಕ್ಕೆ ದೃಢಸಂಕಲ್ಪ ಮಾಡಿ, ಸಂವಿಧಾನ ಸಭೆಯಲ್ಲಿ 1949ನೆಯ ಇಸವಿಯ ನವೆಂಬರ್ ತಿಂಗಳ 26ನೇ ದಿನದಂದು ಈ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡು ಅಂಗೀಕರಿಸಿ, ಶಾಸನವಾಗಿ ವಿಧಿಸಿಕೊಂಡಿದ್ದೇವೆ ಎಂದು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.