ಸಂವಿಧಾನದ ವಿರುದ್ಧ ಹೇಳಿಕೆ ಅಪಾಯಕಾರಿ


Team Udayavani, Nov 28, 2019, 3:00 AM IST

sanvidhanada

ಚಾಮರಾಜನಗರ: ಕೆಲ ಸಂಘಟನೆಗಳು ಭಾರತ ಸಂವಿಧಾನದ ವಿರುದ್ಧ ಹೇಳಿಕೆ ನೀಡುವ ಮೂಲಕ ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅಗೌರವ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಆರೋಪಿಸಿದರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ಬಹುಜನ ಸಮಾಜ ಪಕ್ಷ ಜಿಲ್ಲಾ ಸಮಿತಿ ವತಿಯಿಂದ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಚನ ಚಳವಳಿ ಹುಟ್ಟಿರುವ ಕರ್ನಾಟಕದ ನೆಲದಲ್ಲೂ ಸಂವಿಧಾನದ ವಿರುದ್ಧ ಹೇಳಿಕೆ ಬರುತ್ತಿರುವುದು ದೇಶಕ್ಕೆ ದೊಡ್ಡ ಅಪಾಯಕಾರಿ ಬೆಳವಣಿಗೆಯಾಗಿದೆ. ಮನುವಾದಿ ಸಂವಿಧಾನದಲ್ಲಿ ಹಿಂದುಳಿದ ವರ್ಗದವರು, ಶೋಷಿತರಿಗೆ ಸಮಾನತೆ ಸಿಕ್ಕಿರಲಿಲ್ಲ. ದೇಶದ ಚರಿತ್ರೆಯಲ್ಲಿ ಅಂಬೇಡ್ಕರ್‌ ಅವರು ಬರೆದಿರುವ ಸಂವಿಧಾನ ಮನುಷ್ಯರ ಪರವಾಗಿದೆ. ಸರ್ವರಿಗೂ ಸಮಪಾಲು, ಸಮಬಾಳು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಇಂತಹ ಸರ್ವ ಶ್ರೇಷ್ಠ ಸಂವಿಧಾನವನ್ನು ಹೆಚ್ಚು ಹೆಚ್ಚು ಓದುವ ಮೂಲಕ ಸಂವಿಧಾನದ ಆಶಯಗಳನ್ನು ಮೈಗೂಡಿಸಿಕೊಂಡು ಸಂವಿಧಾನವನ್ನು ಸಂರಕ್ಷಣೆ ಮಾಡಬೇಕಿದೆ ಎಂದು ಹೇಳಿದರು.

ಸಂವಿಧಾನ ತಿರುಚುವ ಹುನ್ನಾರ: ಉದ್ದೇಶ ಪೂರ್ವಕವಾಗಿ ಭಾರತ ಸಂವಿಧಾನವನ್ನು ತಿರುಚುವ ಹುನ್ನಾರ ನಡೆಯುತ್ತಿದೆ. ಶಿಕ್ಷಣ ಇಲಾಖೆ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ದಿನಾಚರಣೆ ಆಚರಿಸುವಂತೆ ಹೊರಡಿಸಿರುವ ಸುತ್ತೋಲೆ ಕೈಪಿಡಿಯಲ್ಲಿ ಅಂಬೇಡ್ಕರ್‌ ಬಬ್ಬರೇ ಸಂವಿಧಾನ ಬರೆದಿಲ್ಲ ಎಂಬ ತಪ್ಪು ಸಂದೇಶ ಸಾರುವ ಕೆಲಸ ನಡೆದಿದೆ. ಸಂವಿಧಾನದ ವಿರುದ್ಧ ಹೇಳಿಕೆಗಳು ಬಂದಂತಹ ಸಂದರ್ಭಗಳಲ್ಲಿ ಕಠಿಣವಾಗಿ ಪ್ರತಿಕ್ರಿಯಿಸಬೇಕಿದೆ ಎಂದರು.

ಪ್ರತಿಯೊಬ್ಬರು ಸಂವಿಧಾನ ಗೌರವಿಸಿ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ನಾಗಯ್ಯ ಮಾತನಾಡಿ, ಸಂವಿಧಾನಕ್ಕೆ ಗಂಡಾಂತರ ಬಂದಿದೆ. ಅದನ್ನು ತಡೆಯಬೇಕಾದರೆ ಬಿಎಸ್‌ಪಿ ಅಧಿಕಾರ ಹಿಡಿದಾಗ ಮಾತ್ರ ಸಾಧ್ಯವಾಗುತ್ತದೆ. ಸರ್ಕಾರ ಮಾಡುವ ಪ್ರತಿಯೊಂದು ಕಾನೂನು ಸಂವಿಧಾನಕ್ಕೆ ಅನುಗುಣವಾಗಿರಬೇಕಿದೆ. ಸಂವಿಧಾನ ಆಶಯಗಳನ್ನು ಗೌರವಿಸುವುದು ಭಾರತ ದೇಶ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಂಯೋಜಕ ಕೃಷ್ಣಯ್ಯ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಕಾಶ್‌ ಅಮಚವಾಡಿ, ಜಿಲ್ಲಾ ಕಾರ್ಯದರ್ಶಿ ದೌಲತ್‌ ಪಾಷ, ತಾಲೂಕು ಅಧ್ಯಕ್ಷ ಎಸ್‌.ಪಿ.ಮಹೇಶ್‌, ರಾಜೇಂದ್ರ, ಸಿದ್ದರಾಜು, ಶಾಂತರಾಜು, ಬಾಲರಾಜು, ರಂಗಸ್ವಾಮಿ, ಬೈರಲಿಂಗಸ್ವಾಮಿ ಇತರರು ಹಾಜರಿದ್ದರು.

ಟಾಪ್ ನ್ಯೂಸ್

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.