ಪಕ್ಷಗಳ ನೈತಿಕತೆ ಕುಸಿತ: ಪೇಜಾವರ ಶ್ರೀ ವಿಷಾದ
Team Udayavani, Nov 28, 2019, 5:10 AM IST
ಉಡುಪಿ: ಮಹಾರಾಷ್ಟ್ರದಲ್ಲಿ ಆದ ಬೆಳವಣಿಗೆಯಿಂದ ಎಲ್ಲ ರಾಜಕೀಯ ಪಕ್ಷಗಳ ನೈತಿಕತೆ ಕುಸಿದಿರುವುದು ನೋಡಿ ಬೇಸರವಾಗುತ್ತಿದೆ ಎಂದು ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದು ಪಕ್ಷಕ್ಕೆ ಬಹುಮತ ಬಾರದೆ ಇದ್ದಾಗ ಎಲ್ಲ ಪಕ್ಷಗಳೂ ಸೇರಿ ಸರಕಾರ ರಚಿಸಬಹುದು ಎಂದು ಹಿಂದೆಯೇ ಹೇಳಿದ್ದೆ. ಈಗ ನೈತಿಕತೆ ಇಲ್ಲದೆ ರಾಜಕೀಯ ಬೆಳವಣಿಗೆ ನಡೆಯುತ್ತಿರುವುದು ಸರಿಯಲ್ಲ ಎಂದರು. ಶಿವಸೇನೆ, ಕಾಂಗ್ರೆಸ್, ಎನ್‌ಸಿಪಿ ಒಂದಾಗುವುದು, ಬಿಜೆಪಿ ಎನ್‌ಸಿಪಿ ಒಂದಾಗುವುದು ನೈತಿಕತೆ ಇಲ್ಲದಿರುವುದನ್ನು ಸೂಚಿಸುತ್ತದೆ. ಜನರೂ ಇದೇ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.
ತ್ಯಾಗ ಅನಿವಾರ್ಯ
ಕರ್ನಾಟಕದ ಕುರಿತು ಪ್ರಶ್ನಿಸಿದಾಗ ಬಹುಮತ ಬಾರದೆ ಇದ್ದಾಗ ಮತ್ತೆ ಚುನಾವಣೆ ನಡೆಸಬೇಕಾಗುತ್ತದೆ. ಸರ್ವಪಕ್ಷಗಳ ಸರಕಾರ ಆಗಬೇಕಾದರೆ ಕೆಲವರು ತ್ಯಾಗ ಮಾಡಬೇಕಾಗುತ್ತದೆ. ಉದಾರತೆ ಇದ್ದರೆ ಮಾತ್ರ ಇದು ಸಾಧ್ಯವಾಗುತ್ತದೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಮುಸ್ಲಿಮರ ಒಂದು ವರ್ಗ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಅಪೀಲು ಸಲ್ಲಿಸುವುದಿಲ್ಲವೆಂದು ತಿಳಿಸಿದೆ ಎಂದರು. ಮುಸ್ಲಿಮ್ ಕಾನೂನು ಮಂಡಳಿ ಅರ್ಜಿ ಸಲ್ಲಿಸುತ್ತದೆ ಎಂದು ಹೇಳಿದಾಗ ನ್ಯಾಯಾಲಯ ಈ ಅರ್ಜಿಯನ್ನು ಸ್ವೀಕರಿಸುತ್ತದೋ ಎಂದು ನೋಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್ ಸ್ಟಾರ್
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.