ರಾಜಕೀಯ ಧ್ರುವೀಕರಣ: ರಾಜ್ಯದಲ್ಲಿ ಹೊಸ ಚರ್ಚೆ


Team Udayavani, Nov 28, 2019, 6:15 AM IST

aa-42

ಬೆಂಗಳೂರು: ಉಪ ಚುನಾವಣೆ ಫ‌ಲಿತಾಂಶದ ಅನಂತರ ರಾಜ್ಯ ರಾಜಕೀಯದಲ್ಲಿ ಧ್ರುವೀಕರಣ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ ಬೆನ್ನಲ್ಲೇ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು “ಸೋನಿಯಾ ಗಾಂಧಿ ಮನಸ್ಸು ಮಾಡಿದರೆ ಏನಾದರೂ ಆಗಬಹುದು’ ಎಂದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಉಪ ಚುನಾವಣೆಯಲ್ಲಿ ಎಂಟು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲದಿದ್ದರೆ ಸರಕಾರಕ್ಕೆ ಆತಂಕ ಎದುರಾಗಲಿದೆ. ಅಂತಹ ಸನ್ನಿವೇಶದಲ್ಲಿ ಸರಕಾರ ಉಳಿಸಿಕೊಳ್ಳಲು ಬಿಜೆಪಿಗೂ ಜೆಡಿಎಸ್‌ ಅನಿವಾರ್ಯ ವಾಗುತ್ತದೆ. ಮತ್ತೂಂದೆಡೆ ಮಹಾರಾಷ್ಟ್ರ ಬೆಳವಣಿಗೆಗಳಿಂದ ಉತ್ತೇಜಿತವಾಗಿರುವ ಕಾಂಗ್ರೆಸ್‌ ಕೂಡ ಮತ್ತೂಮ್ಮೆ ಮೈತ್ರಿಗೆ ಮುಂದಾಗಬಹುದು. ಇದರ ಆಧಾರದಲ್ಲಿಯೇ ಕುಮಾರಸ್ವಾಮಿ ಮತ್ತು ದೇವೇಗೌಡರು ಪ್ರಚಾರ ಸಭೆಗಳಲ್ಲಿ ಮಾತನಾಡುತ್ತಿದ್ದಾರೆ ಎನ್ನಲಾಗಿದೆ.

ಮೈಸೂರಿನಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ಮಹಾರಾಷ್ಟ್ರದಲ್ಲಾದ ದಿಢೀರ್‌ ರಾಜಕೀಯ ಬೆಳವಣಿಗೆಗಳು ಕರ್ನಾಟಕದ ರಾಜಕಾರಣಕ್ಕೂ ಅನ್ವಯವಾಗಬಹುದು.

ಉಪ ಚುನಾವಣೆ ಫ‌ಲಿತಾಂಶದ ಅನಂತರ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕಿದೆ ಎಂದು ಹೇಳಿರುವುದನ್ನು ಗಮನಿಸಿದರೆ, ಕಾಂಗ್ರೆಸ್‌-ಜೆಡಿಎಸ್‌ ಸರಕಾರಕ್ಕೆ ಇನ್ನೊಂದು ಪ್ರಯತ್ನ ನಡೆಯಬಹುದೇ ಎಂಬ ಪ್ರಶ್ನೆಗಳು ಎದ್ದಿವೆ.

ಒಂದೆಡೆ ಕಾಂಗ್ರೆಸ್‌ ಮತ್ತು ಬಿಜೆಪಿ ವಿರುದ್ಧ ವಾಕ್ಸಮರ ನಡೆಸುತ್ತ ಉಪ ಚುನಾವಣೆಯಲ್ಲಿ ಪ್ರಚಾರ ಮಾಡುತ್ತಿರುವ ಜೆಡಿಎಸ್‌, ಫ‌ಲಿತಾಂಶದ ಅನಂತರ ಕಾಂಗ್ರೆಸ್‌ ಅಥವಾ ಬಿಜೆಪಿ ಜತೆ ಮರು ಮೈತ್ರಿಗೆ ಮಾನಸಿಕವಾಗಿ ಸಜ್ಜಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದೇ ಕಾರಣಕ್ಕೆ 15 ಕ್ಷೇತ್ರಗಳ ಪೈಕಿ ಕೆಲವೆಡೆ ಕಾಂಗ್ರೆಸ್‌-ಜೆಡಿಎಸ್‌ ನಡುವೆ ಒಳ ಒಪ್ಪಂದ ನಡೆದಿದೆ. ಎರಡೂ ಪಕ್ಷದ ನಾಯಕರು ಬಿಜೆಪಿ ಗೆಲ್ಲದಂತೆ ನೋಡಿಕೊಳ್ಳುವ ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

ಯಶವಂತಪುರ, ಚಿಕ್ಕಬಳ್ಳಾಪುರ, ಹುಣಸೂರು, ಕೆ.ಆರ್‌. ಪೇಟೆ ಕ್ಷೇತ್ರಗಳ ಬಗ್ಗೆ ಜೆಡಿಎಸ್‌ ವಿಶ್ವಾಸ ಹೊಂದಿದೆ. ಕಾಂಗ್ರೆಸ್‌ ಕೂಡ ಶಿವಾಜಿನಗರ, ಕಾಗವಾಡ, ಗೋಕಾಕ್‌, ಹಿರೇಕೆರೂರು, ರಾಣೆಬೆನ್ನೂರು ಕ್ಷೇತ್ರಗಳ ಬಗ್ಗೆ ಭರವಸೆಯಲ್ಲಿದೆ. ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಹೆಚ್ಚು ಶ್ರಮ ಹಾಕಿದರೆ ಬಿಜೆಪಿ ಗೆಲುವು ತಡೆಗಟ್ಟಬಹುದು. ಕೆ.ಆರ್‌. ಪುರ, ಮಹಾಲಕ್ಷ್ಮೀ ಲೇ ಔಟ್‌, ಅಥಣಿ, ವಿಜಯನಗರ ಕ್ಷೇತ್ರಗಳು ಮಾತ್ರ ಬಿಜೆಪಿಗೆ ಸುಲಭದ ಹಾದಿ ಎಂಬುದು ಎರಡೂ ಪಕ್ಷಗಳ ಅಭಿಪ್ರಾಯ ಎನ್ನಲಾಗುತ್ತಿದೆ.

ಕಣ್ಣೀರಿಟ್ಟ ಎಚ್‌ಡಿಕೆ
ಮಂಡ್ಯ/ಕಿಕ್ಕೇರಿ: ಲೋಕಸಭಾ ಚುನಾವಣೆಯಲ್ಲಿ ಪುತ್ರನ ಸೋಲು, ನಾರಾಯಣ ಗೌಡರು ಮಾಡಿದ ಮೋಸ ನೆನೆದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕಣ್ಣೀರಿಟ್ಟ ಘಟನೆ ಬುಧವಾರ ನಡೆಯಿತು. ಕೆ.ಆರ್‌. ಪೇಟೆ ತಾಲೂಕಿನ ಕಿಕ್ಕೇರಿಯ ಸಂತೆಮಾಳದಲ್ಲಿ ನಡೆದ ಜೆಡಿಎಸ್‌ ಅಭ್ಯರ್ಥಿ ಬಿ.ಎಲ್‌. ದೇವರಾಜು ಪರ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿ, ನನಗೆ ಪುತ್ರನನ್ನು ರಾಜಕೀಯಕ್ಕೆ ಕರೆತರಲು ಇಷ್ಟವಿರಲಿಲ್ಲ. ಜಿಲ್ಲೆಯ ಶಾಸಕರ ಒತ್ತಾಯದ ಮೇಲೆ ಅವನನ್ನು ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿ ಮಾಡಿದೆ. ಅದನ್ನೇ ಮಾಧ್ಯಮದವರು ದೊಡ್ಡದು ಮಾಡಿಕೊಂಡು ನನ್ನ ವಿರುದ್ಧ ಅಪಪ್ರಚಾರಗೈದರು ಎಂದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.