ಆನ್‌ಲೈನ್‌ನಲ್ಲೇ ಅಂಗನವಾಡಿ ಕೇಂದ್ರ ಮಾಹಿತಿ
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ನೇಹ ಆ್ಯಪ್ ಡಿಜಿಟಲ್ ಮಾಹಿತಿ ತರಬೇತಿ
Team Udayavani, Nov 28, 2019, 4:24 PM IST
ಕೂಡ್ಲಿಗಿ: ಸ್ನೇಹ ಆ್ಯಪ್ ಮೂಲಕ ಅಂಗನವಾಡಿ ಕೇಂದ್ರಗಳ ಎಲ್ಲ ಮಾಹಿತಿಗಳನ್ನು ಡಿಜಿಟಲೀಟಕರಣ ಮಾಡುವುದರ ಮೂಲಕ ಸಂಪೂರ್ಣ ಮಾಹಿತಿಯನ್ನು ದಾಖಲಿಸುವ ಕಾರ್ಯ ಮುಂದಿನ ದಿನಗಳಲ್ಲಿ ಮಾಡಲಾಗುತ್ತಿದೆ.
ಹಾಗಾಗಿ ಅಂಗನವಾಡಿ ಮೇಲ್ವಿಚಾರಕಿಯರಿಗೆ ಮತ್ತು ಕಾರ್ಯಕರ್ತೆಯರಿಗೆ ಡಿಜಿಟಲ್ ದಾಖಲೀಕರಣದ ಬಗ್ಗೆ ತರಬೇತಿ ನೀಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಆನ್ ಲೈನ್‌ನಲ್ಲಿಯೇ ಅಂಗನವಾಡಿ ಕೇಂದ್ರಗಳ ಮಾಹಿತಿಗಳನ್ನು ತಿಳಿದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಉಷಾ ಅವರು ತಿಳಿಸಿದರು.
ಅವರು ಬುಧವಾರ ಪಟ್ಟಣದ ಪ್ರವಾಸಿಮಂದಿರದಲ್ಲಿ ಅಂಗನವಾಡಿ ಮೇಲ್ವಿಚಾರಕಿಯರಿಗೆ ಹಾಗೂ ಕಾರ್ಯಕರ್ತೆಯರಿಗಾಗಿ ಆಯೋಜಿಸಿದ್ದ ಸ್ನೇಹ ಆ್ಯಪ್ ಡಿಜಿಟಲ್ ತರಬೇತಿ ಕಾರ್ಯಕ್ರಮದಲ್ಲಿ ತರಬೇತಿಗೆ ಚಾಲನೆ ನೀಡಿದ ನಂತರ ಮಾತನಾಡಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ದಾಖಲಾತಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಹಾಗೂ ಗರ್ಭಿಣಿ, ಬಾಣಂತಿಯರ ವಿವರ, ಅವರ ಸಮಸ್ಯೆಗಳು, ಮಗು ಜನಿಸಿದ ಮೇಲೆ ಆ ಮಗುವಿಗೆ ಒಂದು ಐಡಿ ಬರುತ್ತದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ಮೊಬೈಲ್‌ನಲ್ಲಿ ಇಂಥ ದತ್ತಾಂಶಗಳು ದಾಖಲಾಗುತ್ತದೆ. ಸ್ನೇಹ ಆಪ್ ಮೂಲಕ ಈ ಡಿಜಿಟಲೀಕರಣ ಮಾಡಲಾಗುತ್ತಿದ್ದು ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವ ರೀತಿಯಲ್ಲಿ ಡಿಜಿಟಲೀಕರಣ ಮಾಡಬಹುದು ಎಂದು ತರಬೇತಿಯಲ್ಲಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕೂಡ್ಲಿಗಿ ಸಿಡಿಪಿಓ ಮಧುಸೂಧನ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ನೇಹ ಆ್ಯಪ್ ಮೂಲಕ ಆಯಾ ಹಳ್ಳಿಗಳಲ್ಲಿಯ ಮಕ್ಕಳ ವಯಸ್ಸು, ಎತ್ತರ, ತೂಕ ಸೇರಿದಂತೆ ಆ ಮಗುವಿನ ಸಮಗ್ರ ವಿವರಗಳು, ಇಲಾಖೆಯಿಂದ ನೀಡುವ ಸೇವೆಗಳ ಬಗ್ಗೆ ಆಗಿಂದಾಗ್ಗೆ ಆನ್‌ಲೈನ್‌ನಲ್ಲಿ ಅಪ್ ಲೋಡ್ ಆಗಲಿದ್ದು ಡಿಜಿಟಲೀಕರಣದಿಂದ ಎಲ್ಲರಿಗೂ ಅನುಕೂಲವಾಗಲಿದ್ದು ಎಲ್ಲೆಲ್ಲಿ ಸಮಸ್ಯೆಗಳಿಗೆ ಅಲ್ಲಿ ಸಮಸ್ಯೆ ನಿವಾರಣೆ ಮಾಡಲು ಅನುಕೂಲವಾಗಲಿದೆ ಎಂದರು. ಪ್ರಾಥಮಿಕವಾಗಿ ಈಗ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಲಿದ್ದು ನಂತರ ಹಂತ ಹಂತವಾಗಿ ತರಬೇತಿ ನೀಡಲಾಗುವುದು. ರಾಜ್ಯದಲ್ಲಿಯೇ ಕುಳಿತುಕೊಂಡು ಅಧಿಕಾರಿಗಳು ಎಲ್ಲ ರೀತಿಯ ಇಲಾಖೆಯ ಕಾರ್ಯವೈಖರಿ, ಸಾಧನೆಗಳು, ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಬಹುದಾಗಿದೆ ಎಂದರು.
ತರಬೇತಿ ಕಾರ್ಯಾಗಾರಕ್ಕೆ ಕೂಡ್ಲಿಗಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಆಯ್ದ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಗರಿಬೊಮ್ಮನಹಳ್ಳಿ ಸಿಡಿಪಿಓ ಸುದೀಪ್ ಕುಮಾರ್, ಹೂವಿನಹಡಗಲಿ ಸಿಡಿಪಿಓ ರಾಮನಗೌಡ, ಬಳ್ಳಾರಿ ಸಿಡಿಪಿಓ ಜಲಾಲಪ್ಪ, ಹರಪನಹಳ್ಳಿ ಸಿಡಿಪಿಓ ಮಂಜುನಾಥ ಸೇರಿದಂತೆ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಹ್ಯಾಳ್ಯಾ ನಾಗಪ್ಪ, ಮೇಲ್ವಿಚಾರಕಿ ಟಿ. ಅನ್ನಪೂರ್ಣಮ್ಮ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ 45ಕ್ಕೂ ಹೆಚ್ಚು ಅಂಗನವಾಡಿ ಮೇಲ್ವಿಚಾರಕಿಯರು, 20ಕ್ಕೂ ಹೆಚ್ಚು ಆಯ್ದ ಅಂಗನವಾಡಿ ಕಾರ್ಯಕರ್ತೆಯರು ತರಬೇತಿಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.