ಸದನದ ಸದಸ್ಯರಲ್ಲದ ಮಹಾರಾಷ್ಟ್ರದ 8ನೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಮಾಣ ವಚನ
Team Udayavani, Nov 28, 2019, 6:05 PM IST
ಮುಂಬಯಿ: ಶಿವಸೇನೆ ಆಧ್ಯಕ್ಷ ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಸದನದ ಸದಸ್ಯರಾಗದೇ ನೇರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮಹಾರಾಷ್ಟ್ರದ 8ನೇ ರಾಜಕಾರಣಿಯಾಗಲಿದ್ದಾರೆ. ಈಗಾಗಲೇ ಮಹಾರಾಷ್ಟ್ರದಲ್ಲಿ 7 ಮಂದಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 6 ತಿಂಗಳೊಳಗೆ ಸದನದ ಸದಸ್ಯರಾಗಿದ್ದರು.
ಕಾಂಗ್ರೆಸ್‌ನ ಎ.ಆರ್. ಅಂತುಳೆ, ವಸಂತ್‌ದಾದ ಪಾಟೀಲ್, ಶಿವಾಜಿರಾವ್ ನೀಲಾಂಗೆಕಾರ್ ಪಾಟೀಲ್, ಶಂಕರ್‌ರಾವ್ ಚವ್ಹಾಣ್, ಸುಶೀಲ್ ಕುಮಾರ್ ಶಿಂಧೆ ಮತ್ತು ಪೃಥ್ವಿರಾಜ್ ಚವ್ಹಾಣ್ ಹಾಗೂ ಎನ್‌ಸಿಪಿಯ ಶರದ್ ಪವಾರ್ ಅವರು ಈ ಸಾಲಿಗೆ ಸೇರಿದ್ದಾರೆ. ಇದೀಗ ಆ ಸಾಲಿಗೆ 8ನೇ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ಸೇರ್ಪಡೆಯಾಗಿದ್ದಾರೆ.
ಸಂವಿಧಾನದ ಪ್ರಕಾರ ಯಾವುದೇ ಸದನದ ಸದಸ್ಯನಲ್ಲದ ವ್ಯಕ್ತಿ ಮುಖ್ಯಮಂತ್ರಿ ಅಥವ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿದರೆ ಮುಂದಿನ 6 ತಿಂಗಳೊಳಗೆ ಸದನದ ಸದಸ್ಯರಾಗಬೇಕು. ಮಹಾರಾಷ್ಟ್ರದಲ್ಲಿ ಈ ಪದ್ಧತಿ 1980ರಲ್ಲಿ ಆರಂಭವಾಯಿತು. ವಸಂತ್‌ದಾದ ಪಾಟೀಲ್ ಅವರು ಸದನದ ಸದಸ್ಯನಲ್ಲದ ಮೊದಲ ಮುಖ್ಯಮಂತ್ರಿಯಾಗಿದ್ದರು. ಇಲ್ಲಿ ಕೆಲವು ನಾಯಕರು ಕೇಂದ್ರದಲ್ಲಿ ಮಂತ್ರಿಯಾಗಿದ್ದು, ಬಳಿಕ ಅಲ್ಲಿ ರಾಜೀನಾಮೆ ಸಲ್ಲಿಸಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.