ಬಿಜೆಪಿ vs ಕಾಂಗ್ರೆಸ್ ನೀತಿ ಸಂಹಿತೆ ಜಗಳ
ಉಪ ಚುನಾವಣೆ ಕಣ: ದೂರುಗಳ ಸಲ್ಲಿಕೆ
Team Udayavani, Nov 29, 2019, 6:30 AM IST
ಬೆಂಗಳೂರು: ಉಪ ಚುನಾವಣೆ ಪ್ರಚಾರ ಕಣದಲ್ಲಿ ವಾಕ್ಸಮರದ ನಡುವೆ ಚುನಾವಣ ಆಯೋಗ ಹಾಗೂ ರಾಜ್ಯಪಾಲರಿಗೆ ಪರಸ್ಪರ ದೂರುಗಳ ಸಲ್ಲಿಕೆಯೂ ಆಗುತ್ತಿವೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹಿರೇಕೆರೂರಿನಲ್ಲಿ ಪ್ರಚಾರದ ವೇಳೆ “ಬಾಂಬೆ ನೋಟು, ಕೈಗೆ ಓಟು’ ಎಂದು ಹೇಳುವ ಮೂಲಕ ಮತದಾರರಿಗೆ ಹಣ ಪಡೆದು ಮತ ಹಾಕಿ ಎಂದು ಕರೆ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ನಿಯೋಗ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದೆ. ಈ ಮೂಲಕ ಸಿದ್ದರಾಮಯ್ಯ ಅವರು ಪ್ರಚಾರ ಸಭೆಗಳಲ್ಲಿ ಭಾಗಿಯಾಗದಂತೆ ನಿಷೇಧ ಹೇರಬೇಕು ಎಂಬುದು ಬಿಜೆಪಿಯ ಕಾರ್ಯತಂತ್ರ ಎಂದು ಹೇಳಲಾಗುತ್ತಿದೆ.
ಮತ್ತೂಂದೆಡೆ ಕಾಂಗ್ರೆಸ್ ನಿಯೋಗ, ರಾಜ್ಯದ ಅಭಿವೃದ್ಧಿ ಕೆಲಸ ನಿರ್ಲಕ್ಷ್ಯ ಮಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸದೆ ಬಿಜೆಪಿಯು ಉಪ ಚುನಾವಣೆಯಲ್ಲಿ ಆಡಳಿತ ಯಂತ್ರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.
ಬಿಜೆಪಿ ದೂರು
ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಚುನಾವಣ ಪ್ರಚಾರದ ವೇಳೆ ಮತವನ್ನು ಮಾರಿಕೊಳ್ಳಿ ಎಂಬಂತೆ ಮತದಾರರಿಗೆ ಸಲಹೆ ನೀಡುವ ಹೇಳಿಕೆ ನೀಡಿದ್ದು, ಉಪ ಚುನಾವಣೆ ಮುಗಿಯುವವರೆಗೆ ಅವರು ಸಾರ್ವಜನಿಕ ಚುನಾವಣ ಭಾಷಣ ಮಾಡದಂತೆ ಸೂಚನೆ ನೀಡಬೇಕು ಎಂದು ಕೋರಿ ಬಿಜೆಪಿ ನಿಯೋಗ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದೆ.
ಹಿರೇಕೆರೂರು ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಸಿದ್ದು, “ಬಿ.ಸಿ. ಪಾಟೀಲ್‌ರಿಂದ ನೋಟು ತಗೊಳ್ಳಿ ಕಾಂಗ್ರೆಸ್ ಅಭ್ಯರ್ಥಿ ಬನ್ನಿಕೋಡ್ ಅವರಿಗೆ ಓಟು ಹಾಕಿ. ಮುಂಬಯಿ ನೋಟು ಕೈಗೆ ಓಟು’ ಎಂದು ಹೇಳಿಕೆ ನೀಡಿದ್ದರು.
ಕಾಂಗ್ರೆಸ್ ದೂರು
ಪೂರ್ತಿ ಸರಕಾರ ಉಪ ಚುನಾವಣೆಯಲ್ಲಿ ಭಾಗಿಯಾಗಿ, ಆಡಳಿತ ಯಂತ್ರವನ್ನು ಸಂಪೂರ್ಣ ದುರುಪಯೋಗಪಡಿಸಿ ಕೊಳ್ಳುತ್ತಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೆಪಿಸಿಸಿ ವತಿಯಿಂದ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ. ರಾಜ್ಯಪಾಲ ವಜೂಭಾç ವಾಲಾ ಅವರ ಅನಾರೋಗ್ಯ ಕಾರಣದಿಂದಾಗಿ ಅಂಚೆ ಮೂಲಕ ಎಂಎಲ್‌ಸಿ ಪ್ರಕಾಶ್ ರಾಥೋಡ್ ನೇತೃತ್ವದ ಕಾಂಗ್ರೆಸ್ ನಿಯೋಗ ದೂರು ಸಲ್ಲಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.